Bonda Mani: 270ಕ್ಕೂ ಹೆಚ್ಚಿನ ಚಿತ್ರದಲ್ಲಿ ನಟಿಸಿದ್ದ ಹಾಸ್ಯನಟ ಬೋಂಡಾ ಮಣಿ ನಿಧನ
Team Udayavani, Dec 24, 2023, 10:25 AM IST
ಚೆನ್ನೈ: ಜನಪ್ರಿಯ ಹಾಸ್ಯನಟ ಬೋಂಡಾ ಮಣಿ ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಶನಿವಾರ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು.
ಡಿಸೆಂಬರ್ 23 ರ ರಾತ್ರಿ, ಮಣಿ ಅವರು ಚೆನ್ನೈನ ಪೊಝಿಚಲೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಮೂರ್ಛೆ ಹೋದರು ಕುಟುಂಬ ಸದಸ್ಯರು ಕೂಡಲೇ ಅವರನ್ನು ಕ್ರೋಮ್‌ಪೇಟೆಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೋತ್ತಿಗಾಗಲೇ ಮಣಿ ನಿಧನ ಹೊಂದಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಪೊಝಿಚಾಲೂರಿನ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದು ಸಂಜೆ 5ರ ಸುಮಾರಿಗೆ ಕ್ರೋಂಪೇಟೆಯಲ್ಲಿರುವ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದೆ.
ಮೃತರು ಪತ್ನಿ ಮಾಲತಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮಣಿ ಅವರ ಚಿಕಿತ್ಸೆಗೆ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ನಟರು ಆರ್ಥಿಕ ಸಹಾಯ ಮಾಡಿದ್ದಾರೆ.
ಬೋಂಡಾ ಮಣಿ ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟರಾಗಿದ್ದರು. 1991 ರಲ್ಲಿ ಬಿಡುಗಡೆಯಾದ ನಟ ಭಾಗ್ಯರಾಜ್ ಅವರ ‘ಪೌನು ಪೌನುತನ್’ ಚಿತ್ರದ ಮೂಲಕ ಬೋಂಡಾ ಮಣಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಪೊನ್ವಿಲಾಂಗು, ಪೊಂಗಲೋ ಪೊಂಗಲ್, ಸುಂದರ ಟ್ರಾವೆಲ್ಸ್, ಮರುದಮಲೈ, ವಿನ್ನರ್, ವೇಲಾಯುಧಂ, ಜಿಲ್ಲಾ, ವಸೀಕರ ಸೇರಿದಂತೆ 270 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಹಾಸ್ಯ ನಟ ವಡಿವೇಲು ಅವರೊಂದಿಗೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ: IIT Kanpur: ಉಪನ್ಯಾಸ ನೀಡುತ್ತಿದ್ದಾಗಲೇ ವೇದಿಕೆ ಮೇಲೆ ಕುಸಿದುಬಿದ್ದು ಪ್ರಾಧ್ಯಾಪಕ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.