Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Team Udayavani, Nov 23, 2024, 5:14 PM IST
ಹೈದರಾಬಾದ್: ಟಾಲಿವುಡ್ (Tollywood) ಸಿನಿಮಾರಂಗಕ್ಕೆ ಖ್ಯಾತ ಕ್ರಿಕೆಟರ್ ಒಬ್ಬರ ಪತ್ನಿ ನಾಯಕಿಯಾಗಿ ಕಾಲಿಡಲು ಸಿದ್ದರಾಗಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಸ್ನಿನ್ನರ್, ಆರ್ ಸಿಬಿಯ ಮಾಜಿ ಆಟಗಾರ ಯಜುವೇಂದ್ರ ಚಹಾಲ್ (Yuzvendra Chahal) ಅವರ ಪತ್ನಿ ಧನಶ್ರೀ ವರ್ಮಾ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಪಾರ ಫಾಲೋವರ್ಸಗಳಿದ್ದಾರೆ.
ಧನಶ್ರೀ ಅವರು ಯೂಟ್ಯೂಬರ್ ಆಗಿದ್ದು, ಹಿಂದಿಯ ಜನಪ್ರಿಯ ಡ್ಯಾನ್ಸ್ ರಿಯಾಲಿಟಿ ಶೋ ‘ಝಲಕ್ ದಿಖ್ಲಾ ಜಾ ‘ಸೇರಿದಂತೆ ಹಲವು ಶೋಗಳಲ್ಲಿ ಡ್ಯಾನ್ಸ್ ಮೂಲಕ ಮಿಂಚಿದ್ದಾರೆ. ಅವರ ಡ್ಯಾನ್ಸ್ ಮೂವ್ಸ್‌ನಿಂದಲೇ ಇದೀಗ ಅವರಿಗೆ ಟಾಲಿವುಡ್ ಸಿನಿರಂಗದಿಂದ ಬಿಗ್ ಆಫರ್ ಬಂದಿದೆ.
ಶಶಿ ಕುಮಾರ್ ಮುತ್ತುಲೂರಿ ಎನ್ನುವವರು ನಿರ್ದೇಶನ ಮಾಡುತ್ತಿರುವ ʼಆಕಾಶಂ ಧಾಟಿ ವಸ್ತಾವʼ(Aakasam Dhaati Vasthaava) ಎನ್ನುವ ಸಿನಿಮಾಕ್ಕೆ ಧನಶ್ರೀ ಹೀರೋಯಿನ್ ಆಗಿ ಆಯ್ಕೆ ಆಗಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
ಈಗಾಗಲೇ ಚಿತ್ರೀಕರಣ ಆರಂಭಗೊಂಡಿರುವ ಈ ಸಿನಿಮಾದಲ್ಲಿ ನಾಯಕನಾಗಿ ಡ್ಯಾನ್ಸ್ ಮಾಸ್ಟರ್ ಯಶ್ ಅವರು ಕಾಣಿಸಿಕೊಳ್ಳಲಿದ್ದಾರೆ.
ಇದು ಡ್ಯಾನ್ಸ್ ಆಧಾರಿತ ಸಿನಿಮಾವಾಗಲಿದ್ದು, ಈ ಸಿನಿಮಾಕ್ಕೆ ಡ್ಯಾನ್ಸ್ ಹಿನ್ನೆಲೆವುಳ್ಳ ಕಲಾವಿದರ ಅಗತ್ಯವಿದೆ ಆ ಕಾರಣಕ್ಕಾಗಿ ಧನಶ್ರೀ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಧನಶ್ರೀ ಮಾತ್ರವಲ್ಲದೆ ನಟಿ ಕಾರ್ತಿಕಾ ಮುರಳೀಧರನ್ ಸಿನಿಮಾದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಖ್ಯಾತ ನಿರ್ಮಾಪಕ ದಿಲ್ ರಾಜು ಸಿನಿಮಾಕ್ಕೆ ಬಂಡವಾಳ ಹಾಕಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್ ಬೌನ್ಸರ್ ಬಂಧನ
Sukumar: ಸಿನಿಮಾರಂಗಕ್ಕೆ ಸುಕುಮಾರ್ ಗುಡ್ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್
Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್ ಪೊಲೀಸರಿಂದ ನಟ ಅಲ್ಲು ಅರ್ಜುನ್ ವಿಚಾರಣೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.