Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

Team Udayavani, Nov 21, 2024, 12:41 PM IST

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

ಹೈದರಾಬಾದ್: ಟಾಲಿವುಡ್‌ ನಟ ವಿಜಯ್‌ ದೇವರಕೊಂಡ (Vijay Deverakonda) ಸಿನಿಮಾದ ಹೊರತಾಗಿ ಡೇಟ್‌ ಲೈಫ್‌ ವಿಚಾರದಲ್ಲೂ ಆಗಾಗ ಸುದ್ದಿಯಲ್ಲಿರುತ್ತಾರೆ.  ಕಳೆದ ಕೆಲ ಸಮಯದಿಂದ ಅವರು ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ (Rashmika Mandanna) ಜತೆ ರಿಲೇಷನ್‌ ಶಿಪ್‌ನಲ್ಲಿದ್ದಾರೆ ಎನ್ನುವ ವದಂತಿಗಳು ಕೇಳಿ ಬರುತ್ತಿದೆ.

ವಿಜಯ್‌ – ರಶ್ಮಿಕಾ ʼ ಗೀತಾ ಗೋವಿಂದಂ’, ʼ ಡಿಯರ್‌ ಕಾರ್ಮೆಡ್‌ʼ ಒಟ್ಟಿಗೆ ನಟಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಅನೇಕ ಕಡೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಪಾರ್ಟಿ, ಹಾಲಿಡೇ ಮೋಡ್‌ನಲ್ಲಿ ವಿಜಯ್‌ – ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಆದರೆ ಇಬ್ಬರು ತಾವು ಸ್ನೇಹಿತರಷ್ಟೇ ಎಂದು ಹೇಳುತ್ತಾ ಬಂದಿದ್ದಾರೆ.

ಇದನ್ನೂ ಓದಿ:  BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ

ಇದೀಗ ʼಅರ್ಜುನ್‌ ರೆಡ್ಡಿʼ ನಟ ತಾನು ರಿಲೇಷನ್‌ ಶಿಪ್‌ನಲ್ಲಿ ಇದ್ದೇನೆ ಎಂದು ಒಪ್ಪಿಕೊಂಡಿದ್ದಾರೆ.  ತಾನು ಸಿಂಗಲ್‌ ಅಲ್ಲವೆಂದು ಹೇಳಿದ್ದಾರೆ. ʼಕರ್ಲಿ ಟೇಲ್ಸ್‌ʼಗೆ ನೀಡಿದ ಸಂದರ್ಶನದಲ್ಲಿ ತಮ್ಮ ರಿಲೇಷನ್‌ ಶಿಪ್‌ ಸ್ಟೇಟಸ್‌ ಬಗ್ಗೆ ಮಾತನಾಡಿದ್ದಾರೆ.

“ನನಗೆ 35 ವರ್ಷ, ನಾನು ಒಬ್ಬಂಟಿಯಾಗಿದ್ದೇನೆ ಎಂದು ನೀವು ಭಾವಿಸುತ್ತೀರಾ?” ಎಂದು ವಿಜಯ್‌ ಅವರೇ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ನೀವು ಮೊದಲು ಸಹನಟಿಯ ಜೊತೆ ಡೇಟಿಂಗ್ ಮಾಡಿದ್ದೀರಾ ಎಂದು ಕೇಳಿದಾಗ, “ಹೌದು, ನಾನು ಡೇಟಿಂಗ್‌ ಮಾಡುತ್ತಿದ್ದೇನೆ” ಎಂದು ಉತ್ತರಿಸುವ ಮೂಲಕ ತಾವು ಸಿಂಗಲ್‌ ಆಗಿಲ್ಲ ಎನ್ನುವುದು ಖಾತ್ರಿ ಪಡಿಸಿದ್ದಾರೆ.

“ಪ್ರೀತಿಸುವುದು ಹೇಗೆ ಎಂದು ನನಗೆ ತಿಳಿದಿದೆ ಮತ್ತು ಪ್ರೀತಿಸುವುದು ಏನು ಎಂದು ನನಗೆ ತಿಳಿದಿದೆ. ನನಗೆ ಷರತ್ತುಗಳಿರುವ ಪ್ರೀತಿ ತಿಳಿದಿಲ್ಲ ಏಕೆಂದರೆ ನನ್ನ ಪ್ರೀತಿಯು ನಿರೀಕ್ಷೆಗಳೊಂದಿಗೆ ಬರುತ್ತದೆ. ನನ್ನ ಪ್ರೀತಿಯು ಷರತ್ತುಗಳನ್ನು ಹೊಂದಿಲ್ಲ” ಎಂದಿದ್ದಾರೆ.

ಮದುವೆಯ ವೃತ್ತಿಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎನ್ನುವ ಬಗ್ಗೆ ಪ್ರಶ್ನಿಸಿದಾಗ, “ಇದು ಮಹಿಳೆಯರಿಗೆ ಹೆಚ್ಚು ಸವಾಲಾಗಿದೆ. ಮದುವೆಯು ವೃತ್ತಿಜೀವನಕ್ಕೆ ಅಡ್ಡಿಯಾಗಬೇಕಾಗಿಲ್ಲ. ಇದು ನಿಮ್ಮ ವೃತ್ತಿಯನ್ನು ಅವಲಂಬಿಸಿರುತ್ತದೆ” ಎಂದು ನಟ ಹೇಳಿದ್ದಾರೆ.

“ನಾನು ಸಾಮಾನ್ಯವಾಗಿ ಯಾರೊಂದಿಗೆ ಹೆಚ್ಚು ಡೇಟ್‌ಗೆ ಹೋಗುವುದಿಲ್ಲ. ಮೊದಲು ಸ್ಟ್ರಾಂಗ್ ಫ್ರೆಂಡ್‌ ಶಿಪ್‌ಗೆ ಆದ್ಯತೆ ನೀಡುತ್ತೇನೆ.‌ ಅವರನ್ನು ಸಂಪೂರ್ಣವಾಗಿ ತಿಳಿದುಕೊಂಡ ಬಳಿಕವಷ್ಟೇ ಅವರೊಂದಿಗೆ ಹೊರಗಡೆ ಹೋಗಲು ಇಷ್ಟಪಡುತ್ತೇನೆ” ಎಂದು ವಿಜಯ್‌ ಹೇಳಿದ್ದಾರೆ.

ದೇವರಕೊಂಡ ಅವರು ರಿಲೇಷನ್‌‌ ಶಿಪ್ ಬಗ್ಗೆ ಮಾತನಾಡಿದ ಬಳಿಕ ರಶ್ಮಿಕಾ ಅವರ ಜತೆಗಿನ ಸಂಬಂಧವನ್ನು ಅವರು ದೃಢಪಡಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಕಳೆದ ಕೆಲ ಸಮಯದಿಂದ ದೇವರಕೊಂಡ ಅವರ ಸಿನಿಮಾಗಳು ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟಾಗಿ ಕಮಾಲ್‌ ಮಾಡುತ್ತಿಲ್ಲ. ಸದ್ಯ ಅವರು ಕಂಬ್ಯಾಕ್‌ ಮಾಡುವ ನಿರೀಕ್ಷೆಯಲ್ಲಿದ್ದು, ʼವಿಡಿ12ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಟಾಪ್ ನ್ಯೂಸ್

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.