ಪೊಲೀಸರಿಂದ ನಟ ಅಲ್ಲು ಅರ್ಜುನ್ ಬಂಧನ? ವೈರಲ್ ಫೋಟೋ ಹಿಂದಿನ ಅಸಲಿ ರಹಸ್ಯವೇನು?
Team Udayavani, Mar 21, 2024, 3:50 PM IST
ಹೈದರಾಬಾದ್: ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಸದ್ಯ ಬಹು ನಿರೀಕ್ಷಿತ ʼಪುಷ್ಪ-2ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ಗಳ ಫೋಟೋಗಳು ವೈರಲ್ ಆಗುವುದು ಸಾಮಾನ್ಯ ಆದರೆ ಕೆಲವೊಂದು ತಪ್ಪು ಕಾರಣಗಳಿಂದ ಸ್ಟಾರ್ ನಟರ ಫೋಟೋಗಳು ವೈರಲ್ ಆಗುತ್ತದೆ. ಸತ್ಯಾಸತ್ಯತೆ ಅರಿಯದೆ ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ಕಮೆಂಟ್ ಗಳು ಹರಿದಾಡುತ್ತದೆ.
ಹೀಗೆಯೇ ಅಲ್ಲು ಅರ್ಜುನ್ ಅವರ ಇತ್ತೀಚೆಗೆ ಫೋಟೋ ವೈರಲ್ ಆಗಿದೆ. ಅಲ್ಲು ಅರ್ಜುನ್ ʼಪುಷ್ಪ-2ʼ ಸಿನಿಮಾದಲ್ಲಿ ಕೆಲ ಸಾಹಸಮಯ ದೃಶ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸ್ಟಂಟ್ ಗಳನ್ನು ಮಾಡಲಿದ್ದಾರೆ. ಸದ್ಯ ಭಾರತದಲ್ಲೇ ಸಿನಿಮಾದ ಚಿತ್ರೀಕರಣ ಆಗುತ್ತಿದೆ. ಆದರೆ ಕೆಲ ಆ್ಯಕ್ಷನ್ ಸೀನ್ ಗಳಿಗಾಗಿ ಚಿತ್ರತಂಡ ಮುಂದೆ ಚೀನಾಕ್ಕೆ ಹಾರಾಲಿದೆ ಎನ್ನಲಾಗಿದೆ. ಈ ಕಾರಣದಿಂದ ಅಲ್ಲಿ ವಾಹನಗಳಲ್ಲಿ ಆ್ಯಕ್ಷನ್ ದೃಶ್ಯಗಳ ಚಿತ್ರೀಕರಣವಿದೆ. ಇದಕ್ಕಾಗಿ ಅಂತಾರಾಷ್ಟ್ರೀಯ ಡ್ರೈವಿಂಗ್ ಲೈಸೆನ್ಸ್ ಪಡೆಯಬೇಕಿದೆ.
ಈ ಕಾರಣದಿಂದ ಅಲ್ಲು ಅರ್ಜುನ್ ಅವರು ಖೈರತಾಬಾದ್ ನಲ್ಲಿರುವ ಆರ್ ಟಿಓ ಆಫೀಸ್ ಗೆ ತೆರಳಿ ಪರವಾಣಿಗೆ ಪತ್ರವನ್ನು ಪಡೆದುಕೊಂಡಿದ್ದಾರೆ. ಅವರು ಆರ್ ಟಿಓ ಕಚೇರಿಗೆ ಹೋಗಿರುವ ಫೋಟೋ ವೈರಲ್ ಆಗಿದೆ. ಆದರೆ ಅದರ ಹಿಂದಿನ ಕಾರಣ ತಿಳಿಯದೆ ಕೆಲವೊಂದಿಷ್ಟು ಜನರು ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ.
ಅಲ್ಲು ಅರ್ಜುನ್ ಅವರ ಆರ್ ಟಿಓ ಭೇಟಿಯ ಫೋಟೋ ಬಳಸಿಕೊಂಡು, ಸೋಶಿಯಲ್ ಮೀಡಿಯಾದಲ್ಲಿ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಹಿಂದಿನ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ಬರೆದುಕೊಂಡಿದ್ದಾರೆ.
ಬಹು ನಿರೀಕ್ಷಿತ ʼಪುಷ್ಪ-2ʼ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಕಾ ಮಂದಣ್ಣ, ಫಾಹದ್ ಫಾಸಿಲ್ ಹಾಗೂ ಇತರೆ ಪ್ರಮುಖರು ಕಾಣಸಿಕೊಳ್ಳಲಿದ್ದಾರೆ. ಇದೇ ವರ್ಷದ ಆಗಸ್ಟ್ 15 ರಂದು ಸಿನಿಮಾ ತೆರೆ ಕಾಣಲಿದೆ.
Pushpa star Allu Arjun visits RTO Khairtabad for International Driving Licence #Hyderabad. pic.twitter.com/aIsbt76U70
— Arbaaz The Great (@ArbaazTheGreat1) March 20, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?
Malayalam Actor: ಶ್ವಾಸಕೋಶದ ಕಾಯಿಲೆ; ಖ್ಯಾತ ನಟ ಮೇಘನಾಥನ್ ನಿಧನ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.