ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Team Udayavani, Jan 7, 2025, 1:56 PM IST
ಮುಂಬಯಿ/ ಹೈದರಾಬಾದ್: ಖ್ಯಾತ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ (Hansika Motwani) ಅವರ ಕೌಟುಂಬಿಕ ಕಲಹ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಕೌಟುಂಬಿಕ ದೌರ್ಜನ್ಯದ ಆರೋಪದಡಿಯಲ್ಲಿ ಹನ್ಸಿಕಾ, ಅವರ ಸಹೋದರ ಪ್ರಶಾಂತ್ ಹಾಗೂ ತಾಯಿ ಮೋನಾ ಮೋಟ್ವಾನಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಏನಿದು ಘಟನೆ?: 2020ರಲ್ಲಿ ಹನ್ಸಿಕಾ ಸಹೋದರ ಕಿರುತೆರೆ ನಟಿ ಮುಸ್ಕಾನ್ ನ್ಯಾನ್ಸಿ ಜೇಮ್ಸ್ಳನ್ನು ವಿವಾಹವಾಗಿದ್ದರು. ಆದರೆ 2022ರಿಂದ ಇಬ್ಬರು ಪ್ರತ್ಯೇಕವಾಗಿ ವಾಸಿಸಲು ಶುರು ಮಾಡಿದ್ದರು.
ಇದೀಗ ನಟಿ ಮುಸ್ಕಾನ್ ತನ್ನ ವಿವಾಹದ ಸಂದರ್ಭದಲ್ಲಿ ತಮಗಾದ ನೋವಿನ ಬಗ್ಗೆ ಮಾತನಾಡಿದ್ದು, ಕೌಟುಂಬಿಕ ದೌರ್ಜನ್ಯವಾಗಿದ್ದರ ಬಗ್ಗೆ ದೂರು ನೀಡಿದ್ದಾರೆ.
ನನ್ನ ಮದುವೆಯ ವಿಚಾರದಲ್ಲಿ ಅತ್ತೆ ಮೋನಾ ಹಾಗೂ ನಾದಿನಿ ಹನ್ಸಿಕಾ ಮಧ್ಯ ಬಂದು ಮೂಗು ತೂರಿಸಿದ್ದರು. ನನ್ನ ಪತಿ ನನ್ನ ಮೇಲೆ ದೌರ್ಜನ್ಯವೆಸಗುತ್ತಿದ್ದರು. ಪರಿಣಾಮ ನನ್ನ ಮುಖ ಭಾಗಶಃ ಪಾರ್ಶ್ವವಾಯುವಿಗೆ ಒಳಗಾಗಿತ್ತು. ಮೋಟ್ವಾನಿ ಕುಟುಂಬದ ಈ ಮೂವರು ನನ್ನಿಂದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಕೇಳುತ್ತಿದ್ದರು. ಇದಲ್ಲದೆ ಆಸ್ತಿಯ ವಿಚಾರದಲ್ಲೂ ಇವರು ನನಗೆ ಮೋಸ ಮಾಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟವನ್ನು ಮಾಡುತ್ತಿದ್ದೇನೆ ಹಾಗಾಗಿ ಹೆಚ್ಚು ಏನನ್ನು ಹೇಳಲು ಸಾಧ್ಯವಿಲ್ಲವೆಂದು ನಟಿ ಮಾಧ್ಯಮದ ಮುಂದೆ ಹೇಳಿದ್ದಾರೆ.
ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಕಾಯ್ದೆ 498-ಎ, 323, 504, 506, ಮತ್ತು 34ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ಹಿಂದಿ ಕಿರುತೆರೆಯಲ್ಲಿ ಧಾರಾವಾಹಿಗಳ ಮೂಲಕ ಮುಸ್ಕಾನ್ ಫೇಮ್ ಗಿಟ್ಟಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್
Car Crash: ಕಾರು ರೇಸ್ ತರಬೇತಿ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ!
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Sullia: ಜಾಕ್‌ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.