ಸಮಂತಾ – ನಾಗ ಚೈತನ್ಯ ವಿಚ್ಛೇದನಕ್ಕೆ ಅವರೇ ಕಾರಣವಂತೆ… ಶಾಕಿಂಗ್ ಹೇಳಿಕೆ ನೀಡಿದ ಸಚಿವೆ
Team Udayavani, Oct 2, 2024, 8:24 PM IST
ಹೈದರಾಬಾದ್: ಟಾಲಿವುಡ್ ನಟ ನಾಗ ಚೈತನ್ಯ ಮತ್ತು ಸಮಂತಾ ವಿಚ್ಛೇದನ ವಿಚಾರ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಸ್ಟಾರ್ ಜೋಡಿಯ ವಿಚ್ಛೇದನಕ್ಕೆ ಬಿಆರ್ಎಸ್ನ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್ (KTR) ಕಾರಣ ಎಂದು ಸಚಿವೆ ಕೊಂಡ ಸುರೇಖಾ ಹೇಳಿಕೆ ನೀಡಿದ್ದು ಇದೀಗ ರಾಜಕೀಯ ವಲಯದಲ್ಲಿ ಸಚಿವೆಯ ಹೇಳಿಕೆ ಭಾರಿ ಸಂಚಲ ಮೂಡಿಸಿದೆ.
ಬಾಪುಘಾಟ್ ನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಈ ಟಾಲಿವುಡ್ ನಟ ನಾಗ ಚೈತನ್ಯ ಹಾಗೂ ಸಮಂತಾ ಜೀವನದಲ್ಲಿ ಬಿರುಗಾಳಿ ಎಬ್ಬಿಸಿ ವಿಚ್ಛೇದನ ಕೊಡಲು ಕೆಟಿಆರ್ ಕಾರಣ ಎಂದು ಸಚಿವೆ ಗಂಭೀರ ಆರೋಪ ಮಾಡಿದ್ದಾರೆ ಅಲ್ಲದೆ ಸಮಂತಾ ಸೇರಿದಂತೆ ಚಿತ್ರರಂಗದ ಇತರ ನಟ ನಟಿಯರ ಜೀವನವನ್ನು ಹಾಳು ಮಾಡಿದ್ದಾರೆ ಅಷ್ಟು ಮಾತ್ರವಲ್ಲದೆ ಕೆಟಿಆರ್ ಅವರು ಸಚಿವರಾಗಿದ್ದಾಗ ಹಲವು ಸಿನಿಮಾ ನಾಯಕಿಯರ ಜೀವನದ ಜೊತೆ ಚೆಲ್ಲಾಟವಾಡಿದ್ದಾರೆ, ನಾಯಕಿಯರ ಫೋನ್ ಕದ್ದಾಲಿಕೆ ಮಾಡಿ ಅವರನ್ನು ಡ್ರಗ್ಸ್ ಚಟಕ್ಕೆ ಸಿಲುಕಿಸಿ ಅವರ ಜೀವನವನ್ನೇ ಹಾಳು ಮಾಡಿದ್ದಾರೆ, ಆದರೆ ಈ ವಿಚಾರ ನನಗೆ ಮಾತ್ರವಲ್ಲದೆ ಚಿತ್ರರಂಗದ ಎಲ್ಲರಿಗೂ ಗೊತ್ತಿದೆ ಅದರೂ ಯಾರೂ ಹೇಳುತ್ತಿಲ್ಲ ಅಷ್ಟೇ ಎಂದಿದ್ದಾರೆ.
ಸಚಿವೆ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದ ಕೆಟಿಆರ್:
ಸಚಿವೆ ಕೊಂಡ ಸುರೇಖಾ ಶಾಕಿಂಗ್ ಹೇಳಿಕೆಗೆ ಬಿಆರ್ಎಸ್ನ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್ ಆಕ್ರೋಶ ಹೊರಹಾಕಿದ್ದು ಸಚಿವೆ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಇದೆಲ್ಲಾ ರಾಜಕೀಯ ಲಾಭಕ್ಕೋಸ್ಕರ ಈ ರೀತಿಯ ಹೇಳಿಕೆಗಳನ್ನು ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವುದು ಅವರ ಸಂಸ್ಕೃತಿ ಆಗಿರಬಹುದು ಆದರೆ ನನಗೆ ಹೆಂಡತಿ ಮಕ್ಕಳು, ಕುಟುಂಬ ಇದೆ. ಈ ಹಿಂದೆಯೂ ಸಚಿವೆ ನನ್ನ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಅಂತವರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲಾರೆ ಎಂದಿದ್ದಾರೆ.
Minister Konda Surekha says KTR is the reason for divorce of actors Naga Chaitanya and Samantha
Lot of heroines got married quickly & moved out of cinema field bcos of KTR
KTR took drugs, got them habituated and did rave parties, played with their lives and did blackmail.… pic.twitter.com/gJcQstUpPb
— Naveena (@TheNaveena) October 2, 2024
ಇದನ್ನೂ ಓದಿ: Council By Polls: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾದ ರಾಜು ಪೂಜಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.