Tollywood: ಓಯೋ ರೂಮಲ್ಲಿ ಡ್ರಗ್ಸ್ ಪಾರ್ಟಿ; ಖ್ಯಾತ ನೃತ್ಯ ಸಂಯೋಜಕ ಸೇರಿ ನಾಲ್ವರ ಬಂಧನ
Team Udayavani, Dec 2, 2024, 3:20 PM IST
ಹೈದರಾಬಾದ್: ಟಾಲಿವುಡ್‌ನಲ್ಲಿ ಮತ್ತೆ ಡ್ರಗ್ಸ್ ಹಾವಳಿ ಶುರುವಾಗಿದೆ. ಡ್ರಗ್ಸ್ ಪಾರ್ಟಿಯೊಂದರ ಮೇಲೆ ಪೊಲೀಸರು ರೇಡ್ ಮಾಡಿದ್ದು ಖ್ಯಾತ ನೃತ್ಯ ಸಂಯೋಜಕ ಬಂಧಿಸಿರುವುದಾಗಿ ವರದಿಯಾಗಿದೆ.
ಭಾನುವಾರ (ಡಿ.1ರಂದು) ಮಾದಾಪುರದ ಓಯೋ ರೂಮ್‌ನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು ನೃತ್ಯ ಸಂಯೋಜಕ ಕನ್ಹಾ ಮಹಂತಿ (choreographer Kanha Mahanthi) ಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಮಾದಾಪುರದ ಓಯೋ ರೂಮ್‌ನಲ್ಲಿ ಕನ್ಹಾ ಮಹಂತಿ, ಪ್ರಿಯಾಂಕಾ ರೆಡ್ಡಿ, ಗಂಗಾಧರ್ ಹಾಗೂ ಶಾಕಿ ಎಂಬುವವರು ಪಾರ್ಟಿ ಮಾಡುತ್ತಿದ್ದರು. ಈ ಪಾರ್ಟಿಯಲ್ಲಿ ಡ್ರಗ್ಸ್ ಬಳಕೆ ಆಗುತ್ತಿತ್ತು. ಈ ಪಾರ್ಟಿಯನ್ನು ಪ್ರಿಯಾಂಕಾ ಅವರು ಆಯೋಜಿಸಿದ್ದರು ಎನ್ನಲಾಗಿದ್ದು, ಕನ್ಹಾ ಪ್ರಿಯಾಂಕ ಅವರ ಒಳ್ಳೆಯ ಸ್ನೇಹಿತ ಎನ್ನಲಾಗಿದೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಪಾರ್ಟಿ ನಡೆಯುವ ಸ್ಥಳಕ್ಕೆ ದಾಳಿ ನಡೆಸಿದ್ದು, ಕನ್ಹಾ ಮಹಂತಿ, ಪ್ರಿಯಾಂಕಾ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ಸ್ಥಳದಿಂದ ಪೊಲೀಸರು ಎಂಡಿಎಂಎ 18 ಗ್ರಾಂ ಗಾಂಜಾ ಮತ್ತು ಎಲ್‌ಎಸ್‌ಡಿ ಪೇಪರ್ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿರುವ ಆಫ್ರಿಕನ್ ಪ್ರಜೆಯಿಂದ ಡ್ರಗ್ಸ್ ಪೂರೈಕೆ ಆಗುತ್ತಿತ್ತು ಎಂದು ಪೊಲೀಸರು ಹೇಳಿರುವುದಾಗಿ ವರದಿಯಾಗಿದೆ.
ಕನ್ಹಾ ಜನಪ್ರಿಯ ಡ್ಯಾನ್ಸ್ ಶೋ ʼಧೀʼಯಲ್ಲಿ ನೃತ್ಯ ಸಂಯೋಜಕರಾಗಿ ಕೆಲಸ ಮಾಡುತ್ತಿದ್ದರು.
ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇದರಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆ ರಾಕುಲ್ ಪ್ರೀತ್ ಸಿಂಗ್ ಸಹೋದರನ ಹೆಸರು ಕೂಡ ಡ್ರಗ್ಸ್ ಕೇಸ್‌ನಲ್ಲಿ ಕೇಳಿ ಬಂದಿತ್ತು. ಇದಲ್ಲದೆ ರಾಜ್ ತರುಣ್ ಹಾಗೂ ಲಾವಣ್ಯ, ನಟಿ ಹೇಮಾ ಅವರ ಹೆಸರು ಕೂಡ ಡ್ರಗ್ಸ್ ವಿಚಾರದಲ್ಲಿ ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra: ʼಗೇಮ್ ಚೇಂಜರ್ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ
Toxic: ಯಶ್ ಬರ್ತ್ ಡೇಗೆ ʼಟಾಕ್ಸಿಕ್ʼನಿಂದ ಸಿಗಲಿದೆ ಬಿಗ್ ಅಪ್ಡೇಟ್; ಫ್ಯಾನ್ಸ್ ಥ್ರಿಲ್
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
ಪೊಂಗಲ್ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್ ಆಗಲಿರುವ ಚಿತ್ರಗಳ ಪಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಫಿನಾಲೆಗೆ ಹೋಗುವ ಪರಸ್ಪರ ಕಿತ್ತಾಡಿಕೊಂಡ ಬಿಗ್ ಬಾಸ್ ಸ್ಪರ್ಧಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ
Mangaluru: ಕೊಕೇನ್, ಚರಸ್ ಸೇವನೆ; ಮೂವರ ಬಂಧನ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.