Jr NTR: ಶೂಟಿಂಗ್ ಹಂತದಲ್ಲೇ 400 ಕೋಟಿ ರೂ. ಪ್ರೀ ಬ್ಯುಸಿನೆಸ್ ಮಾಡಿದ ʼದೇವರ ಪಾರ್ಟ್ -1ʼ?
Team Udayavani, Apr 17, 2024, 5:49 PM IST
ಹೈದರಾಬಾದ್: ಜೂ.ಎನ್ ಟಿಆರ್ ಅವರ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ʼದೇವರ ಪಾರ್ಟ್-1ʼ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಆರಂಭವಾಗಿದೆ. ಅನೌನ್ಸ್ ಆದ ದಿನದಿಂದ ಇಂದಿನವರೆಗೂ ಸಿನಿಮಾದ ಬಗೆಗಿನ ಕುತೂಹಲ ಹೆಚ್ಚಾಗುತ್ತಲೇ ಇದೆ.
ಕೊರಟಾಲ ಶಿವ ʼಜನತಾ ಗ್ಯಾರೇಜ್ʼ ಬಳಿಕ ಎರಡನೇ ಬಾರಿ ಜೂ. ಎನ್ ಟಿಆರ್ ಜೊತೆ ಸಿನಿಮಾ ಮಾಡುತ್ತಿದ್ದು ಸಿನಿಮಾದ ಬಗ್ಗೆ ಟಾಲಿವುಡ್ ಮಾತ್ರವಲ್ಲದೆ ಪ್ಯಾನ್ ಇಂಡಿಯಾದಲ್ಲಿ ದೊಡ್ಡಮಟ್ಟದ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ.
ಇದೇ ವರ್ಷದ ಆರಂಭದಲ್ಲಿ ಸಿನಿಮಾದ ಗ್ಲಿಂಪ್ಸ್ ರಿಲೀಸ್ ಆಗಿ ಸದ್ದು ಮಾಡಿತ್ತು. ಎರಡು ಭಾಗದಲ್ಲಿ ಬಿಗ್ ಬಜೆಟ್ ನಲ್ಲಿ ಸಿನಿಮಾ ತೆರೆ ಕಾಣಲಿದೆ. ಮೊದಲ ಭಾಗದ ಚಿತ್ರೀಕರಣ ಇತ್ತೀಚೆಗೆ ಆರಂಭಗೊಂಡಿದೆ.
ʼದೇವರ ಪಾರ್ಟ್ -1 ಬಾಕ್ಸ್ ಆಫೀಸ್ ದೊಡ್ಡಮಟ್ಟದ ಕಲೆಕ್ಷನ್ ಮಾಡುವ ಸಾಧ್ಯತೆಯಿದೆ. ಶೂಟಿಂಗ್ ಹಂತದಲ್ಲೇ ಸಿನಿಮಾ ಭರ್ಜರಿ ಕಮಾಯಿ ಮಾಡಿದೆ ಎಂದು ವರದಿಯಾಗಿದೆ.
ʼದೇವರ ಪಾರ್ಟ್ -1ʼ 400 ಕೋಟಿ ರೂಪಾಯಿ ಪ್ರೀ ಬ್ಯುಸಿನೆಸ್ ಮಾಡಿದೆ ಎಂದು ʼ ಏಷ್ಯಾನೆಟ್ ತೆಲುಗುʼ ವರದಿ ಮಾಡಿದೆ. 400 ಕೋಟಿಯಲ್ಲಿ ಸಿನಿಮಾದ ಸ್ಯಾಟಲೈಟ್, ಡಿಜಿಟಲ್, ಸಂಗೀತ ಮತ್ತು ಚಿತ್ರದ ಡಬ್ಬಿಂಗ್ ಹಕ್ಕುಗಳನ್ನು ಒಳಗೊಂಡಿದೆ ಎಂದು ವರದಿ ತಿಳಿಸಿದೆ.
ಆದರೆ ಸಿನಿಮಾದ ತಂಡದಿಂದ ಇದುವರೆಗೆ ಈ ಅಧಿಕೃತವಾಗಿ ಯಾವ ಮಾಹಿತಿಯೂ ಹೊರಬಿದ್ದಿಲ್ಲ. ಆದರೆ ಒಂದು ವೇಳೆ ಇದು ಸತ್ಯವಾದರೆ ಖಂಡಿತವಾಗಿಯೂ ʼದೇವರ ಪಾರ್ಟ್ -1 ದಾಖಲೆ ಬರೆಯುವುದು ಪಕ್ಕಾ ಆದಂತಾಗುತ್ತದೆ.
ʼದೇವರʼ ಮೂಲಕ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಟಾಲಿವುಡ್ ಗೆ ಎಂಟ್ರಿ ಕೊಡಲಿದ್ದು, ಸೈಫ್ ಆಲಿಖಾನ್ ವಿಲನ್ ಆಗಿ ಅಬ್ಬರಿಸಲಿದ್ದಾರೆ. ಇದೇ ವರ್ಷದ ಅಕ್ಟೋಬರ್ 10 ರಂದು ತೆಲುಗು, ಹಿಂದಿ, ಮಲಯಾಳಂ, ತಮಿಳು ಮತ್ತು ಕನ್ನಡ ಭಾಷೆಯಲ್ಲಿ ಸಿನಿಮಾ ತೆರೆಕಾಣಲಿದೆ.
ಜೂ.ಎನ್ ಟಿಆರ್ ಅವರ 30ನೇ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ ಮತ್ತು ನರೈನ್ ಕಾಣಿಸಿಕೊಳ್ಳಲಿದ್ದಾರೆ. ಅನಿರುದ್ಧ್ ರವಿಚಂದರ್ ಅವರ ಸಂಗೀತ ಸಿನಿಮಾಕ್ಕಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.