Tollywood: ಪ್ರಭಾಸ್ ಕಲ್ಕಿ ಹವಾ ಜೋರು
Team Udayavani, Jun 26, 2024, 10:59 AM IST
ಪ್ರಭಾಸ್ ನಟನೆಯ ಕಲ್ಕಿ 2898 ಎಡಿ ಚಿತ್ರ ಜೂ.27ರಂದು ತೆರೆಕಾಣುತ್ತಿದೆ. ಸುಮಾರು 600 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ.
ಪ್ರಭಾಸ್ (Prabhas) ಜೊತೆಗೆ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್‌ಹಾಸನ್ ಸೇರಿದಂತೆ ಬೃಹತ್ ತಾರಾಬಳಗವೊಂದಿರುವ ಈ ಚಿತ್ರದ ಮೇಲೆ ಭರ್ಜರಿ ನಿರೀಕ್ಷೆ ಇದೆ. ಇದೇ ಕಾರಣದಿಂದ ಈ ವಾರ (ಜು.28)ಕ್ಕೆ ಕನ್ನಡ ಸೇರಿದಂತೆ ಯಾವುದೇ ಭಾಷೆಯಲ್ಲೂ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಬಹುತೇಕ ಎಲ್ಲಾ ಚಿತ್ರಮಂದಿರಗಳನ್ನು “ಕಲ್ಕಿ’ ಆವರಿಸಿದೆ.
“ಸಲಾರ್’ ಚಿತ್ರದ ನಂತರ ಬಿಡುಗಡೆಯಾಗುತ್ತಿರುವ ಪ್ರಭಾಸ್ ಸಿನಿಮಾವಿದು. ಈ ಎಲ್ಲಾ ಕಾರಣದಿಂದ ಬಿಗ್ ಬಜೆಟ್ ಹಾಗೂ ಸ್ಟಾರ್ ಸಿನಿಮಾ ಮುಂದೆ ಬರೋದು ಬೇಡ ಎಂಬ ನಿರ್ಧಾರಕ್ಕೆ ಚಿತ್ರತಂಡಗಳು ಬಂದಿವೆ. ಹಾಗಾಗಿ, ಸದ್ಯ ಕನ್ನಡ, ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ … ಹೀಗೆ ಬಹುತೇಕ ಎಲ್ಲಾ ಭಾಷೆಯ ಚಿತ್ರರಂಗದಲ್ಲೂ ಪ್ರಭಾಸ್ “ಕಲ್ಕಿ’ ಸಿನಿಮಾದ್ದೇ ಹವಾ ಜೋರಾಗಿದೆ.
ಮೊದಲೇ ಹೇಳಿದಂತೆ ಬಹುತೇಕ ಎಲ್ಲಾ ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್‌ಗಳ ಶೋಗಳನ್ನು “ಕಲ್ಕಿ’ ಆವರಿಸಿದೆ. ತೆಲುಗು ವರ್ಶನ್‌ವೊಂದೇ 2500ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಲಿದೆ. ಹಿಂದಿ ಅವೃತ್ತಿ 3500 ಸ್ಕ್ರೀನ್‌ಗಳಲ್ಲಿ ತೆರೆಕಾಣುತ್ತಿದೆ. ಉಳಿದಂತೆ ಬೇರೆ ಬೇರೆ ಭಾಷೆಯ ಸ್ಕ್ರೀನ್ ಗಳು ಸೇರಿದರೆ ಎಂಟು ಸಾವಿರಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ಚಿತ್ರ ತೆರೆಕಾಣಲಿದೆ. ಚಿತ್ರ ಬಿಡುಗಡೆಯಾದ ಮೊದಲ ದಿನವೇ ಭಾರತವೊಂದರಲ್ವಲೇ 45 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಲಿದೆ ಎನ್ನುವುದು ಸಿನಿಪಂಡಿತರ ಲೆಕ್ಕಾಚಾರ.
ಈಗಾಗಲೇ 5 ಲಕ್ಷಕ್ಕೂ ಅಧಿಕ ಟಿಕೆಟ್ ಮಾರಾಟವಾಗಿದ್ದು, ಇದರಿಂದಲೇ 15 ಕೋಟಿ ರೂಪಾಯಿಗೂ ಅಧಿಕ ಹಣ ಬಂದಿದೆ ಎನ್ನಲಾಗಿದೆ. ಜೊತೆಗೆ ಅಮೆರಿಕಾದಲ್ಲೂ ಸಿನಿಮಾ ಅಡ್ವಾನ್ಸ್ ಬುಕ್ಕಿಂಗ್ ಜೋರಾಗಿದ್ದು, ಇದರಿಂದಲೂ ಕೋಟಿಗಟ್ಟಲೇ ಹಣ ಸಂಗ್ರಹವಾಗಿದೆ.
ಸದ್ದು ಮಾಡಿದ ಟ್ರೇಲರ್: ಈಗಾಗಲೇ ಬಿಡುಗಡೆ ಆಗಿರುವ ಚಿತ್ರದ ಟ್ರೇಲರ್ ಸಾಕಷ್ಟು ಸದ್ದು ಮಾಡುತ್ತಿದೆ. ವಿಭಿನ್ನ ಬಗೆಯ ಪ್ರಪಂಚವನ್ನೇ ತೋರಿಸಿದ್ದಾರೆ ನಿರ್ದೇಶಕರು. ಕಾಶಿಯನ್ನು ಕೊನೆಯದಾಗಿ ಉಳಿದ ನಗರವೆಂದು ಬಿಂಬಿಸಲಾಗಿದೆ. ಅದರ ಉಳಿವಿಗಾಗಿ ನಡೆಯುವ ಹೋರಾಟವಿದು. ದೃಶ್ಯವೈಭವವೇ ಇಡೀ ಟ್ರೇಲರ್‌ನ ಜೀವಾಳ. ಊಹೆಗೂ ನಿಲುಕದ ಒಂದಷ್ಟು ಅಚ್ಚರಿಗೆ ದೂಡುವ ದೃಶ್ಯಗಳೇ ಇಲ್ಲಿನ ಹೈಲೈಟ್. ಹಿನ್ನೆಲೆ ಸಂಗೀತ, ರೋಮಾಂಚನಗೊಳಿಸುವ ದೃಶ್ಯಗಳೊಂದಿಗೆ ಈ ಸಿನಿಮಾ ಮೂಡಿಬಂದಿದೆ. “ಕಲ್ಕಿ 2898 ಎಡಿ’ ಚಿತ್ರವನ್ನು ನಾಗ್ ಅಶ್ವಿನ್(Nag Ashwin) ನಿರ್ದೇಶನ ಮಾಡಿದ್ದಾರೆ. ತಾರಾಗಣದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿದ್ದಾರೆ.
ವೈಜಯಂತಿ ಮೂವೀಸ್ ಬಂಡವಾಳ ಹೂಡಿದೆ. ಪುರಾಣ- ಪ್ರೇರಿತ ವೈಜ್ಞಾನಿಕ ಕಥೆಯುಳ್ಳ ಸಿನಿಮಾ. ತೆಲುಗು, ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಅವಧಿ 3 ಗಂಟೆ 5 ನಿಮಿಷ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.