Kollywood: ರಿಲೀಸ್ ಆಗಿ ತಿಂಗಳೊಳಗೆ ಓಟಿಟಿಗೆ ಬರಲಿದೆ ಕಮಲ್ ಹಾಸನ್ ʼINDIAN 2ʼ
Team Udayavani, Aug 5, 2024, 4:11 PM IST
ಚೆನ್ನೈ: ಸೂಪರ್ ಸ್ಟಾರ್ ಕಮಲ್ ಹಾಸನ್ (Kamal Hasan) ಹಾಗೂ ಶಂಕರ್ (Shankar) ಅವರ ʼಇಂಡಿಯನ್ -2ʼ (Indian -2) ಓಟಿಟಿ ರಿಲೀಸ್ ಗೆ ರೆಡಿಯಾಗಿದೆ.
ಜು.12 ರಂದು ಥಿಯೇಟರ್‌ಗೆ ಬಂದ ʼಇಂಡಿಯನ್ -2ʼ ಮೇಲೆ ದೊಡ್ಡ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿತ್ತು. ಆದರೆ ಮೊದಲ ದಿನವೇ ಸಿನಿಮಾದ ಬಗ್ಗೆ ಕಳಪೆ ಅಭಿಪ್ರಾಯ ಎಲ್ಲೆಡೆ ಕೇಳಿ ಬಂತು. ಬಾಕ್ಸ್ ಆಫೀಸ್ ನಲ್ಲೂ ಸಾಮಾನ್ಯ ಗಳಿಕೆ ಕಂಡ ʼಇಂಡಿಯನ್ -2ʼ ಈಗ ಓಟಿಟಿಗೆ ರಿಲೀಸ್ ಗೆ ಸಿದ್ದವಾಗಿದೆ.
1996ರಲ್ಲಿ ಶಂಕರ್ ಕಮಲ್ ಹಾಸನ್ ಅವರೊಂದಿಗೆ ʼಇಂಡಿಯನ್ʼ ಸಿನಿಮಾವನ್ನು ಮಾಡಿದ್ದರು. ಭ್ರಷ್ಟರ ವಿರುದ್ಧ ʼಸೇನಾಪತಿʼಯನ್ನು ಕಾಣಲು ಥಿಯೇಟರ್ ಹೌಸ್ ಫುಲ್ ಆಗಿತ್ತು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವ ಹಾದಿಯ ಕಥೆಯನ್ನು ಚಿತ್ರದಲ್ಲಿ ತೋರಿಸಲಾಗಿತ್ತು. ಹಿರಿಯ ಸ್ವಾತಂತ್ರ್ಯ ಹೋರಾಟಗಾರನಾಗಿ ಸೇನಾಪತಿ ಹಾಗೂ ಮಗ ಚಂದ್ರಬೋಸ್ ಆಗಿ ಡಬಲ್ ರೋಲ್‌ನಲ್ಲಿ ಕಮಲ್ ಹಾಸನ್ ಕಾಣಿಸಿಕೊಂಡಿದ್ದರು.
Thatha varaaru, kadhara vida poraaru 🔥#Indian2 is coming to Netflix on 9 August in Tamil, Telugu, Malayalam and Kannada!#Indian2OnNetflix pic.twitter.com/cJN0JWaprp
— Netflix India South (@Netflix_INSouth) August 4, 2024
ಸೀಕ್ವೆಲ್‌ನಲ್ಲೂ ಅದೇ ರೀತಿಯ ಕಮಾಲ್ ಮಾಡುವ ನಿರೀಕ್ಷೆ ಇತ್ತು. ಆದರೆ ಸಿನಿಮಾ ಸಕ್ಸಸ್ ಕಾಣಲಿಲ್ಲ. ಥಿಯೇಟರ್ ನಲ್ಲಿ ಜನಮನ ಗೆಲ್ಲಲು ಸಾಧ್ಯವಾಗದ ʼಇಂಡಿಯನ್ -2ʼ ಈಗ ಓಟಿಟಿಗೆ ಬರಲಿದೆ.
ಇದೇ ಆಗಸ್ಟ್ 9 ರಂದು ನೆಟ್ ಫ್ಲಿಕ್ಸ್ ನಲ್ಲಿ ಸಿನಿಮಾ ಸ್ಟ್ರೀಮ್ ಆಗಲಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಭಾಷೆಯಲ್ಲಿ ಸಿನಿಮಾ ಸ್ಟ್ರೀಮ್ ಆಗಲಿದೆ.
ʼಇಂಡಿಯನ್ -2ʼ ನಲ್ಲಿ ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್ ಮುಂತಾದವರು ನಟಿಸಿದ್ದಾರೆ
ʼಇಂಡಿಯನ್ -3ʼ 2025ಕ್ಕೆ ರಿಲೀಸ್ ಆಗುವ ಸಾಧ್ಯತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.