Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Team Udayavani, Nov 25, 2024, 1:25 PM IST
ಹೈದರಾಬಾದ್: ಸೆಟ್ಟೇರಿದ ದಿನದಿಂದ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಪ್ಯಾನ್ ಇಂಡಿಯಾ (Pan India) ‘ಕಣ್ಣಪ್ಪʼ (Kannappa) ಚಿತ್ರದ ರಿಲೀಸ್ ಡೇಟ್ ಸೋಮವಾರ (ನ.25ರಂದು) ರಿವೀಲ್ ಆಗಿದೆ.
ಟಾಲಿವುಡ್ ನಟ ವಿಷ್ಣು ಮಂಚು (Vishnu Manchu) ಅವರ ಬಿಗ್ ಬಜೆಟ್ ʼಕಣ್ಣಪ್ಪʼ ಸಿನಿಮಾದಲ್ಲಿ ಮಲ್ಟಿಸ್ಟಾರ್ಸ್‌ಗಳಿದ್ದಾರೆ. ಅತಿಥಿ ಪಾತ್ರಗಳಲ್ಲಿ ದಕ್ಷಿಣ ಭಾರತದ ಖ್ಯಾತ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. ಈ ಕಾರಣದಿಂದಲೂ ಚಿತ್ರ ನಿರೀಕ್ಷೆಯನ್ನು ಹೆಚ್ಚಾಗಿಸಿದೆ.
ಇದನ್ನೂ ಓದಿ: IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
ಅಂತಾರಾಷ್ಟ್ರೀಯ ವೇದಿಕೆಯಲ್ಲಿ ʼಕಣ್ಣಪ್ಪʼನಿಗೆ ದೊಡ್ಡಮಟ್ಟದ ರೆಸ್ಪಾನ್ಸ್ ಸಿಕ್ಕಿದೆ. ಚಿತ್ರದ ಟೀಸರ್ ಪ್ರತಿಷ್ಠಿತ ಕೇನ್ಸ್ ಚಲನಚಿತ್ರೋತ್ಸವದಲ್ಲಿ ರಿಲೀಸ್ ಆಗಿ, ಆ ಬಳಿಕ ಭಾರತದಲ್ಲಿ ರಿಲೀಸ್ ಆಗಿತ್ತು.
ಇದೀಗ ಚಿತ್ರತಂಡ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ. “ಹರ್ ಹರ್ ಮಹಾದೇವ್” ಎನ್ನುವ ಕ್ಯಾಪ್ಷನ್ ಬರೆದು 2025ರ ಏಪ್ರಿಲ್ 25 ಕ್ಕೆ ʼಕಣ್ಣಪ್ಪʼ ಬಿಡುಗಡೆ ಆಗಲಿದೆ ಎಂದು ವಿಷ್ಣು ಮಂಚು ಪೋಸ್ಟರ್‌ವೊಂದನ್ನು ಹಂಚಿಕೊಂಡು ರಿಲೀಸ್ ಡೇಟ್ ರಿವೀಲ್ ಮಾಡಿದ್ದಾರೆ.
#HarHarMahadevॐ #Kannappa🏹 pic.twitter.com/qGFxAOKp14
— Vishnu Manchu (@iVishnuManchu) November 25, 2024
ಈ ಹಿಂದೆ ʼಕಣ್ಣಪ್ಪʼ ಡಿಸೆಂಬರ್ ತಿಂಗಳಿನಲ್ಲಿ ರಿಲೀಸ್ ಆಗುತ್ತದೆ ಎನ್ನಲಾಗಿತ್ತು. ʼಪುಷ್ಪ-2ʼ, ʼಗೇಮ್ ಚೇಂಜರ್ʼ ಜತೆಗಿನ ಬಾಕ್ಸ್ ಆಫೀಸ್ ರೇಸ್‌ನಿಂದ ಹೊರಗೆ ಉಳಿದು ಸೋಲೋ ರಿಲೀಸ್‌ಗೆ ʼಕಣ್ಣಪ್ಪʼ ಮುಂದಾಗಿದೆ.
ಇತ್ತೀಚೆಗೆ ʼಕಣ್ಣಪ್ಪʼ ಸಿನಿಮಾದಲ್ಲಿನ ಪ್ರಭಾಸ್ ಅವರ ಕ್ಯಾರೆಕ್ಟರ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿತ್ತು. ಪರಿಣಾಮ ಚಿತ್ರತಂಡ ಫೋಟೋ ಲೀಕ್ ಮಾಡಿದ ಆರೋಪಿಯನ್ನು ಪತ್ತೆ ಮಾಡಿದವರಿಗೆ 5 ಲಕ್ಷ ನಗದು ನೀಡುವುದಾಗಿ ಘೋಷಿಸಿತ್ತು. ಇದಾದ ನಂತರ ಸ್ವತಃ ಆರೋಪಿಯೇ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದ.
ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ ʼಕಣ್ಣಪ್ಪʼ ಸಿನಿಮಾದಲ್ಲಿ ವಿಷ್ಣು ಮಂಚು, ಪ್ರಭಾಸ್, ಮೋಹನ್ ಲಾಲ್, ಕಾಜಲ್ ಅಗರ್ವಾಲ್, ಅಕ್ಷಯ್ ಕುಮಾರ್, ಮಧುಬಾಲ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಂಗಲ್ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್ ಆಗಲಿರುವ ಚಿತ್ರಗಳ ಪಟ್ಟಿ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನು ಮಂಜೂರು
Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್ ಲೀಕ್
ಕೋಮಾದಲ್ಲಿದ್ದ ನನ್ನ ಮಗನ ನೆನಪಿನ ಶಕ್ತಿ ಮರಳಲು ದಳಪತಿ ವಿಜಯ್ ಕಾರಣವೆಂದ ಖ್ಯಾತ ನಟ
Mollywood: 13 ವರ್ಷದ ಬಳಿಕ ರೀ- ರಿಲೀಸ್ ಆಗಲಿದೆ ಸೂಪರ್ ಹಿಟ್ ʼಉಸ್ತಾದ್ ಹೊಟೇಲ್ʼ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.