ಧನುಷ್ ನಿರ್ದೇಶನದ ʼರಾಯನ್ʼ ರಿಲೀಸ್‌ಗೆ ಡೇಟ್ ಫಿಕ್ಸ್: ತಪ್ಪಿದ ಬಾಕ್ಸ್ ಆಫೀಸ್ ಫೈಟ್
Team Udayavani, Jun 10, 2024, 6:56 PM IST
ಚೆನ್ನೈ: ಧನುಷ್ ಬಹು ಸಮಯದ ಬಳಿಕ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ʼರಾಯನ್ʼ ಸಿನಿಮಾದ ಹೊಸ ರಿಲೀಸ್ ಡೇಟ್ ಅನೌನ್ಸ್ ಆಗಿದೆ.
ಈಗಾಗಲೇ ಫಸ್ಟ್ ಲುಕ್ ಪೋಸ್ಟರ್‌ನಿಂದ ಗಮನ ಸೆಳೆದಿರುವ ʼರಾಯನ್ʼ ಚಿತ್ರದ ರಿಲೀಸ್ ಡೇಟ್ ಈ ಹಿಂದೆಯೇ ಅನೌನ್ಸ್ ಆಗಿತ್ತು. ಜೂ.13 ರಂದು ಚಿತ್ರ ರಿಲೀಸ್ ಆಗಲಿದೆ ಎನ್ನಲಾಗಿತ್ತು. ಆದಾದ ಬಳಿಕ ಜುಲೈ ತಿಂಗಳಿನಲ್ಲಿ ಚಿತ್ರ ʼಇಂಡಿಯನ್ -2ʼ(ಜು.12 ರಂದು) ಚಿತ್ರದೊಂದಿಗೆ ರಿಲೀಸ್ ಆಗಲಿದೆ ಎನ್ನಲಾಗಿತ್ತು.
ಈ ಎರಡು ಚಿತ್ರಗಳು ಒಂದೇ ದಿನ ರಿಲೀಸ್ ಆಗುವ ಮೂಲಕ ಕಾಲಿವುಡ್ ನಲ್ಲಿ ಬಾಕ್ಸ್ ಆಫೀಸ್ ಫೈಟ್ ಉಂಟಾಗಲಿದೆ ಎನ್ನುವ ಮಾತುಗಳು ಹರಿದಾಡಿತ್ತು. ಇದೀಗ ಎಲ್ಲಾ ಗೊಂದಲಗಳಿಗೂ ʼರಾಯನ್ʼ ತೆರೆ ಎಳೆದಿದೆ.
ಹೊಸ ಪೋಸ್ಟರ್ ರಿಲೀಸ್ ಮಾಡಿ ಜು.26 ರಂದು ʼರಾಯನ್ʼ ರಿಲೀಸ್ ಆಗಲಿದೆ ಎಂದು ʼಸನ್ ಪಿಕ್ಚರ್ಸ್ʼ ಹೇಳಿದೆ. ಇಂಡಿಯನ್ -2 ರಿಲೀಸ್ ಆದ ಎರಡು ವಾರದ ಬಳಿಕ ʼರಾಯನ್ʼ ರಿಲೀಸ್ ಆಗಲಿದೆ.
ಇದು ಧನುಷ್ ಅವರ 50ನೇ ಸಿನಿಮಾವಾಗಿರಲಿದ್ದು, ಎ.ಆರ್ ರಹೆಮಾನ್ ಚಿತ್ರಕ್ಕೆ ಮ್ಯೂಸಿಕ್ ನೀಡಿದ್ದಾರೆ.
ಎಸ್.ಜೆ.ಸೂರ್ಯ, ಪ್ರಕಾಶ್ ರಾಜ್, ಸೆಲ್ವರಾಘವನ್, ಸಂದೀಪ್ ಕಿಶನ್, ಕಾಳಿದಾಸ್ ಜಯರಾಂ, ದುಶಾರ ವಿಜಯನ್, ಅಪರ್ಣಾ ಬಾಲಮುರಳಿ, ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಸರವಣನ್ ಮುಂತಾದ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.
Witness the world of #Raayan from July 26th in cinemas 🔥@dhanushkraja @arrahman @Music_Santhosh @_ShwetaMohan_ #GanaKadhar @iam_SJSuryah @selvaraghavan @kalidas700 @sundeepkishan @prakashraaj @officialdushara @Aparnabala2 @varusarath5 #Saravanan @omdop @editor_prasanna… pic.twitter.com/NKleiyaJQP
— Sun Pictures (@sunpictures) June 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.