Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ


Team Udayavani, Oct 19, 2024, 6:45 AM IST

1-a-antr-bg

ಉಡುಪಿ: ಪುಣೆ ಫಿಲಂ ಇನ್‌ಸ್ಟಿಟ್ಯೂಟ್‌ ಪದವೀಧರ ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಡಾ| ಕೆ.ರಮೇಶ್‌ ಕಾಮತ್‌ ಅವರ ಕಥೆ, ಚಿತ್ರಕಥೆ, ಗೀತೆ ರಚನೆ ಮತ್ತು ನಿರ್ದೇಶನದ ಕೊಂಕಣಿ ಭಾಷೆಯ ಹೊಸ ಚಲನಚಿತ್ರ “ಅಂತ್ಯಾರಂಭ’ ಚಿತ್ರೀಕರಣ ಪೂರ್ಣಗೊಂಡಿದ್ದು, ಸಂಕಲನವೂ ಮುಗಿದಿದೆ. ರಿ-ರೆಕಾರ್ಡಿಂಗ್‌ ಕಾರ್ಯ ಬಾಕಿ ಇದ್ದು, ನವೆಂಬರ್‌ ಮೊದಲ ವಾರ ಸಿನೆಮಾ ತೆರೆ ಕಾಣಲಿದೆ ಎಂದು ನಿರ್ದೇಶಕ ಡಾ| ಕೆ. ರಮೇಶ್‌ ಕಾಮತ್‌ ತಿಳಿಸಿದ್ದಾರೆ.

ಚಲನಚಿತ್ರವು ಆದಿತ್ಯ ಸಿನಿ ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ಕಿರಣ್ಮಯಿ ಕಾಮತ್‌ ನಿರ್ಮಾಣದಲ್ಲಿ ಚಿತ್ರ ತೆರೆ ಕಾಣಲಿದೆ. ಕೊಂಕಣಿ ಮತ್ತು ಸಾರಸ್ವತ ಕೊಂಕಣಿಯಲ್ಲಿ ಇದುವರೆಗೆ ತಯಾರಾದುದು ಕೇವಲ ಎಂಟು ಚಿತ್ರಗಳು. ಅದರಲ್ಲಿ ಮೂರನ್ನು ಡಾ| ರಮೇಶ್‌ ಕಾಮತ್‌ ಅವರೇ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಕೇವಲ ಭಾಷಾ ಅಭಿಮಾನದಿಂದ ತಮ್ಮ 72ನೇ ವಯಸ್ಸಿನಲ್ಲಿ ನಾಲ್ಕನೇ ಕೊಂಕಣಿ ಸಿನೆಮಾ “ಅಂತ್ಯಾರಂಭ’ವನ್ನು ನಿರ್ದೇಶಿಸುತ್ತಿದ್ದಾರೆ.

“ಅಂತ್ಯಾರಂಭ’ ಸಾಮಾನ್ಯ ಮನೋರಂಜನಾತ್ಮಕ ಚಿತ್ರವಾಗಿರದೆ, ಒಂದು ತತ್ವಾಧಾರಿತ ಕಲಾತ್ಮಕ ಚಿತ್ರವಾಗಲಿದೆ. ಜೀವನದ ವಿವಿಧ ಹಂತಗಳಲ್ಲಿ ಮಾನವನಿಗೆ ಹಲವಾರು ಕಷ್ಟ, ಸಂಕಷ್ಟ ಎದುರಾಗುತ್ತವೆ. ಅದಕ್ಕೆ ಹೆದರಿ, ಅದುವೇ ಜೀವನದ ಅಂತ್ಯ ಎಂದು ಭಾವಿಸುತ್ತಾನೆ. ಈ ಸಿನೆಮಾದ ಮೂಲಕ ಜೀವನ ಪಯಣದಲ್ಲಿ ಅಂತ್ಯ ಎಂಬುದೇ ಇಲ್ಲ. ಅದು ಹೊಸ ಆರಂಭಕ್ಕೆ ನಾಂದಿ ಹಾಡುತ್ತದೆ ಎಂಬುದನ್ನು ತಿಳಿಸುವ ಪ್ರಯತ್ನ ಆಗಲಿದೆ.

ಸಿನೆಮಾದ ಪ್ರಮುಖ ಪಾತ್ರದಲ್ಲಿ ಹಿರಿಯ ವೃದ್ಧ ನಾಯಕನ ಪಾತ್ರದಲ್ಲಿ ಡಾ| ರಮೇಶ್‌ ಕಾಮತ್‌, ಯುವ ನಾಯಕನಾಗಿ ದಾಮೋದರ್‌ ನಾಯಕ್‌, ಯುವ ನಾಯಕಿಯಾಗಿ ಪ್ರತೀಕ್ಷಾ ಕಾಮತ್‌, ವಿಟೋಬ ಭಂಡಾರ್‌ಕರ್‌, ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟಾನಿ ಆಲ್ವಾರೀಸ್‌, ಪ್ರಖ್ಯಾತ ಯಕ್ಷಿಣಿಗಾರ ಉದಯ್‌ ಜಾದೂಗಾರ್‌, ಶೀಲಾ ನಾಯಕ್‌, ಮುಂಬಯಿಯ ವಸುಧಾ ಪ್ರಭು, ಅನಂತ್‌ ನಾಯಕ್‌ ಸಗ್ರಿ, ನರಸಿಂಹ ನಾಯಕ್‌, ಮಾಸ್ಟರ್‌ ಆದಿತ್ಯ ನಾಯಕ್‌, ಮಾಸ್ಟರ್‌ ಯಥಾರ್ಥ, ಸಂದೀಪ್‌ ಮಲಾನಿ, ಪ್ರಕಾಶ್‌ ಕಿಣಿ, ಉಮೇಶ್‌ ಶೆಣೈ, ಕೃಷ್ಣ ನಾಯಕ್‌, ಆನಂದ ನಗರ್ಕರ್‌, ಮಣಿಪಾಲದ ವಿನುತಾ ಕಿರಣ್‌, ಗೋವಿಂದರಾಯ್‌ ಶಾನುಭಾಗ್‌ ಅಭಿನಯಿಸಿದ್ದಾರೆ. ತಾಂತ್ರಿಕ ವರ್ಗದಲ್ಲಿ ಛಾಯಾಚಿತ್ರಗ್ರಾಹಕರಾಗಿ ಪಿವಿಆರ್‌ ಸ್ವಾಮಿ, ಸಂಕಲನಕಾರರಾಗಿ ನಾಗೇಶ್‌, ಸಂಗೀತ ನಿರ್ದೇಶಕರಾಗಿ ಸುರೇಶ್‌, ಗಾಯಕರಾಗಿ ಶಂಕರ್‌ ಶಾನುಭಾಗ್‌ ಮತ್ತು ಸಂಭಾಷಣೆ ಶಾ.ಮಂ.ಕೃಷ್ಣ ರಾಯರು ನಡೆಸಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

1-reeee

‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2

1-pettist

Tulu cinema; ಕೋಸ್ಟಲ್‌ನಲ್ಲೀಗ ಸಿನೆಮಾ ಹಂಗಾಮಾ!

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

SSMB29: ರಾಜಮೌಳಿ – ಮಹೇಶ್‌ ಬಾಬು ಸಿನಿಮಾದ ಲೀಡ್‌ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

Video: ಜೈಲಿನಿಂದ ಅಲ್ಲು ಅರ್ಜುನ್‌ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.