Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Team Udayavani, Sep 19, 2024, 1:34 PM IST

8

ಚೆನ್ನೈ: ಕಾಲಿವುಡ್‌ ಸ್ಟಾರ್‌ ಡೈರೆಕ್ಟರ್‌ ಲೋಕೇಶ್‌ ಕನಕರಾಜ್‌ (Lokesh Kanagaraj ಅವರ ʼಕೂಲಿʼ (Coolie) ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸೂಪರ್‌ ಸ್ಟಾರ್‌ ರಜಿನಿಕಾಂತ್‌ (Rajinikanth)  ಸೇರಿದಂತೆ ಸಿನಿಮಾದಲ್ಲಿ ಮಲ್ಟಿಸ್ಟಾರ್ಸ್‌ ಗಳಿರುವ ಕಾರಣದಿಂದ ʼಕೂಲಿʼ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

ಸಿನಿಮಾ ಅನೌನ್ಸ್‌ ಆದ ದಿನದಿಂದ ಇದುವರೆಗೆ ಸಿನಿಮಾದಲ್ಲಿನ ಪಾತ್ರದ ಪರಿಚಯವನ್ನು ಮಾಡುತ್ತಾ ʼಕೂಲಿʼ ಮೇಲಿನ ಕುತೂಹಲವನ್ನು ಚಿತ್ರತಂಡ ಹೆಚ್ಚಾಗಿಸಿದೆ. ಇತ್ತೀಚಗೆ ನಟ ಉಪೇಂದ್ರ (Upendra), ಮಾಲಿವುಡ್‌ ನಟ  ಸೌಬಿನ್ ಶಾಹಿರ್ (Soubin Shahir), ಟಾಲಿವುಡ್‌ ʼಕಿಂಗ್‌ʼ ನಾಗಾರ್ಜುನ್‌ (Akkineni Nagarjuna) ಅವರ ಪಾತ್ರದ ಲುಕ್‌ ರಿವೀಲ್‌ ಆಗಿತ್ತು.

ಯಾವುದೇ ಒಂದು ದೊಡ್ಡ ಪ್ರಾಜೆಕ್ಟ್‌ ಶೂಟಿಂಗ್‌ ಹಂತದಲ್ಲಿದ್ದಾಗ, ಆ ಸೆಟ್‌ನಿಂದ ಒಂದಷ್ಟು ಫೋಟೋ ಹಾಗೂ ವಿಡಿಯೋಗಳು ಕೆಲವೊಮ್ಮೆ ಲೀಕ್‌ ಆಗುತ್ತವೆ. ಇದರಿಂದ ಆ ಚಿತ್ರದ ನಿರ್ದೇಶಕನಿಗೆ ಬೇಸರವಾಗುವುದು ಸಹಜ. ಇದೇ ರೀತಿಯ ಬೇಸರ ನಿರ್ದೇಶಕ ಲೋಕೇಶ್‌ ಕನಕರಾಜ್‌ ಅವರಿಗೆ ಆಗಿದ್ದು, ಈ ಕುರಿತು ಅವರು ಅಸಮಾಧಾನವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

ಕಾಲಿನ ಮೇಲೆ ಕಾಲು ಹಾಕಿಕೊಂಡು ಗೋಲ್ಡ್‌ ಕಲರ್‌ ವಾಚ್‌ ಧರಿಸಿರುವ ಕ್ಲಾಸ್‌ ಲುಕ್‌ ನಲ್ಲಿ ನಾಗಾರ್ಜುನ್‌ ಕಾಣಿಸಿಕೊಂಡಿರುವ ʼಸೈಮನ್‌ʼ ಲುಕ್‌ ಇತ್ತೀಚೆಗೆ ರಿವೀಲ್‌ ಆಗಿತ್ತು. ಈ ಪಾತ್ರದ ಮಾಸ್‌ ಸೀನ್‌ ವೊಂದು ಶೂಟ್‌ ಆಗುತ್ತಿದ್ದ ವೇಳೆ ಯಾರೋ ಒಬ್ಬರು ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಇಂಟರ್‌ ನೆಟ್ ನಲ್ಲಿ ಹರಿಯ ಬಿಟ್ಟಿದ್ದಾರೆ.

ನಾಗಾರ್ಜುನ್‌ ಅವರ ಸುತ್ತಿಗೆಯಿಂದ ವ್ಯಕ್ತಿಯೊಬ್ಬನಿಗೆ ಹೊಡೆಯುತ್ತಿರುವ ದೃಶ್ಯದ ಶೂಟ್‌ ಆಗುತ್ತಿತ್ತು. ಇದನ್ನು ಮೊಬೈಲ್‌ ನಲ್ಲಿ ಚಿತ್ರೀಕರಿಸಿ ವೈರಲ್‌ ಮಾಡಿದ್ದಾರೆ. ಇದು ನಿರ್ದೇಶಕ ಲೋಕೇಶ್‌ ಅವರ ಗಮನಕ್ಕೆ ಬಂದಿದ್ದು, ಅವರು ಅಸಮಾಧಾನವನ್ನು ಹೊರ ಹಾಕಿದ್ದಾರೆ.

“ಒಂದು ರೆಕಾರ್ಡಿಂಗ್‌ನಿಂದಾಗಿ ಅನೇಕ ಜನರ ಎರಡು ತಿಂಗಳ ಶ್ರಮ ವ್ಯರ್ಥವಾಯಿತು. ಈ ರೀತಿ ಶ್ರಮವನ್ನು ಹಾಳು ಮಾಡುವ ಅಭ್ಯಾಸವನ್ನು ಯಾರು ಇಟ್ಟುಕೊಳ್ಳಬೇಡಿ ಎಂದು ನಾನು ವಿನಂತಿ ಮಾಡಿಕೊಳ್ಳುತ್ತೇನೆ ಎಂದು” ಲೋಕೇಶ್‌ ʼಎಕ್ಸ್‌ʼನಲ್ಲಿ ಬರೆದುಕೊಂಡಿದ್ದಾರೆ.

ಬಹು ನಿರೀಕ್ಷಿತ ʼಕೂಲಿʼಯಲ್ಲಿ ರಜಿನಿಕಾಂತ್‌, ನಾಗಾರ್ಜುನ್‌, ಸೌಬಿನ್‌, ಉಪೇಂದ್ರ ಜತೆ ಸತ್ಯರಾಜ್ (Satyaraj) ಮತ್ತು ಶ್ರುತಿ ಹಾಸನ್ (Shruti Haasan) ಕೂಡಾ ಸಿನಿಮಾದ ಭಾಗವಾಗಲಿದ್ದಾರೆ. ಇದರೊಂದಿಗೆ ಕನ್ನಡದ ರಚಿತಾ ರಾಮ್‌ ಸಿನಿಮಾದಲ್ಲಿ ನೆಗೆಟಿವ್‌ ಶೇಡ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ ಇದು ಇನ್ನಷ್ಟೇ ಅಧಿಕೃತವಾಗಬೇಕಿದೆ.

ಸದ್ಯ ರಜಿನಿಕಾಂತ್‌ ಅವರ ‌ʼವೆಟ್ಟೈಯನ್‌ ʼ ಅಕ್ಟೋಬರ್ 10ರಂದು ರಿಲೀಸ್‌ ಆಗಲಿದೆ. ಈ ಸಿನಿಮಾದ ಬಳಿಕ ಅವರು ʼಕೂಲಿʼಯಲ್ಲಿ ತೊಡಗಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.