Kasturi Shankar: ನಟಿ ಕಸ್ತೂರಿ ಶಂಕರ್‌ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ  

ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಈಗ ನಾಪತ್ತೆ

Team Udayavani, Nov 14, 2024, 4:57 PM IST

9

ಚೆನ್ನೈ: ತೆಲುಗು ಜನರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವಿವಾದಕ್ಕೀಡಾಗಿರುವ ಬಹುಭಾಷಾ ನಟಿ ಕಸ್ತೂರಿ ಶಂಕರ್‌ (Kasturi Shankar) ಶೀಘ್ರದಲ್ಲಿ ಬಂಧನವಾಗುವ ಸಾಧ್ಯತೆಯಿದೆ.

ನಟಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುರುವಾರ (ನ.14ರಂದು) ‌ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ನಿರಾಕರಿಸಿದೆ.

ನಟಿಯ ವಿವಾದ ಏನು?:

ಇತ್ತೀಚೆಗೆ ನಟಿ ಕಸ್ತೂರಿ ಶಂಕರ್‌ ಚೆನ್ನೈನಲ್ಲಿ ನಡೆದ ಕಾರ್ಯಕ್ರವೊಂದರಲ್ಲಿ ತಮಿಳುನಾಡಿನಲ್ಲಿ ಬ್ರಾಹ್ಮಣರಿಗೆ ಕಿರುಕುಳ ನೀಡಲಾಗುತ್ತಿದೆ ಎಂದಿದ್ದರು. ಇದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.

300 ವರ್ಷಗಳ ಹಿಂದೆ ತಮಿಳುನಾಡಿಗೆ ರಾಜರುಗಳ ಸಂಗಾತಿಗೆ ಸೇವಕರಾಗಿ ತೆಲುಗು ಜನರು ವಲಸೆ ಬಂದಿದ್ದರು. ಇದೇ ಜನ ತಮ್ಮನ್ನು ತಾವು ತಮಿಳರೆಂದು ಹೇಳಿಕೊಳ್ಳುತ್ತಿದ್ದಾರೆ. ಸ್ಥಳೀಯ ಬ್ರಾಹ್ಮಣರನ್ನು ತಮಿಳಿರಲ್ಲ ಎನ್ನುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದರು.

ಸರ್ಕಾರಿ ನೌಕರರಲ್ಲಿ ಬ್ರಾಹ್ಮಣೇತರರು ಲಂಚ ಪಡೆಯುತ್ತಿದ್ದಾರೆ ಎನ್ನುವ ಆರೋಪವನ್ನು ಇದೇ ಸಂದರ್ಭದಲ್ಲಿ ಮಾಡಿದ್ದರು. ಇದಕ್ಕೆ ಸರ್ಕಾರಿ ನೌಕರರ ಸಂಘದವರು ಆಕ್ರೋಶ ವ್ಯಕ್ತಪಡಿಸಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ದೂರು ದಾಖಲಿಸಿತು.

ನಾಯ್ಡು ಮಹಾಜನ ಸಂಗಮ್ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರು ನಟಿಯ ವಿರುದ್ದಧ ಎಫ್‌ಐಆರ್ ದಾಖಲಿಸಿತು.

ತೆಲುಗು ಜನರ ಬಗ್ಗೆ ಆಡಿದ ಮಾತಿನಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಸ್ತೂರಿ ಶಂಕರ್‌ ಆಡಳಿತರೂಢ ಡಿಎಂಕೆ ತನ್ನ ವಿರುದ್ಧ ಪಿತೂರಿ ನಡೆಸುತ್ತಿದೆ. ನನ್ನ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ. ನಾನು ತೆಲುಗು ಜನರೊಂದಿಗೆ ಉತ್ತಮ  ಬಾಂಧವ್ಯ ಹೊಂದಿದ್ದೇನೆ. ಯಾರನ್ನೂ ನೋಯಿಸುವ ಉದ್ದೇಶ ನನ್ನದಲ್ಲವೆಂದು ಕ್ಷಮೆಯಾಚಿಸಿದ್ದರು.

ಇತ್ತ ಪೊಲೀಸರು ದೂರು ದಾಖಲಿಸಿಕೊಂಡು ನಟಿಗೆ ಸಮನ್ಸ್‌ ನೀಡಲು ಅವರ ನಿವಾಸದತ್ತ ತೆರಳಿದ್ದರು.  ಈ ವೇಳೆ ಕಸ್ತೂರಿ ಮನೆಗೆ ಬೀಗ ಹಾಕಲಾಗಿತ್ತು. ಇದಲ್ಲದೆ ಅವರ ಮೊಬೈಲ್‌ ಕೂಡ ಸ್ವಿಚ್ಡ್‌ ಆಫ್‌ ಆಗಿತ್ತು.

ಈ ಎಲ್ಲದರ ನಡುವೆ ಮುದ್ರಾಸ್ ಹೈಕೋರ್ಟ್‌ಗೆ ನಟಿ ಕಸ್ತೂರಿ ಶಂಕರ್‌ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿವಾದಕ್ಕೆ ಕ್ಷಮೆಯಾಚಿಸಿದ ಬಳಿಕವೂ ನನ್ನ ಮೇಲೆ ದೂರು ದಾಖಲಿಸಿದ್ದಾರೆ ಎಂದು ಅರ್ಜಿಯಲ್ಲಿ ನಟಿ ಹೇಳಿದ್ದರು. ಆದರೆ ಕೋರ್ಟ್‌ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ತಮ್ಮ ಲಾಭಕ್ಕಾಗಿ ತಮಿಳು – ತೆಲುಗು ಮಂದಿಯ ನಡುವೆ ಸಂಘರ್ಷವಾಗುವ ರೀತಿ ಮಾತನಾಡುವುದು ಸಮಂಜಸವಲ್ಲವೆಂದು ಕೋರ್ಟ್‌ ಹೇಳಿದೆ.

ನ್ಯಾಯಮೂರ್ತಿ ಆನಂದ್ ವೆಂಕಟೇಶ್ ಅವರಿದ್ದ ಏಕಸದಸ್ಯ ಪೀಠವು ನಟಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಕಸ್ತೂರಿ ಶಂಕರ್‌ ಅವರನ್ನು ಪೊಲೀಸರು ಶೀಘ್ರದಲ್ಲಿ ಬಂಧಿಸುವ ಸಾಧ್ಯತೆಯಿದೆ.

ತಮಿಳು, ತೆಲುಗು , ಕನ್ನಡ ಸೇರಿದಂತೆ ಬಹುಭಾಷಾ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ರವಿಚಂದ್ರನ್‌ ಅವರ ʼಜಾಣʼ, ವಿಷ್ಣುವರ್ಧನ್‌ ಅವರ ʼಹಬ್ಬʼ ಸಿನಿಮಾದಲ್ಲಿ ಅವರು ನಟಿಸಿದ್ದಾರೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.