ಮಹೇಶ್ ಬಾಬು ಪುತ್ರಿಯ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ವಂಚನೆಯ ಸಂದೇಶ
Team Udayavani, Feb 10, 2024, 1:13 PM IST
ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಪುತ್ರಿಯ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ನಕಲಿ ಇನ್ಸ್ಟಾಗ್ರಾಮ್ ಖಾತೆಯನ್ನು ತೆರೆದು ವಂಚನೆಯ ಸಂದೇಶ ಕಳುಹಿಸಿರುವ ಕುರಿತು ಹೈದರಾಬಾದ್ ನ ಮಾದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಟ ಮಹೇಶ್ ಬಾಬು ಅವರ ಪುತ್ರಿ ಸಿತಾರ ಘಟ್ಟಮನೇನಿ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಇತ್ತೀಚೆಗೆ ಅವರ ತಂದೆ ʼಗುಂಟೂರು ಖಾರಂʼ ಸಿನಿಮಾ ಪ್ರಚಾರವನ್ನು ಮಾಡಿದ ಪೋಸ್ಟ್ ಗಳನ್ನು ಸೋಶಿಯಲ್ ಮೀಡಿಯದಲ್ಲಿ ಹಂಚಿಕೊಂಡಿದ್ದರು. ಇದೀಗ ಕೆಲ ಅಪರಿಚಿತ ವ್ಯಕ್ತಿಗಳು ಸಿತಾರ ಅವರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆಯನ್ನು ತೆರೆದು ವಂಚನೆಯ ಸಂದೇಶವನ್ನು ಕಳುಹಿಸುತ್ತಿದ್ದಾರೆ ಎನ್ನುವುದರ ಕುರಿತು ದೂರು ದಾಖಲಾಗಿದೆ.
ಅಪರಿಚಿತ ವ್ಯಕ್ತಿಯೊಬ್ಬರು ಇನ್‌ಸ್ಟಾಗ್ರಾಮ್‌ನಲ್ಲಿ ಸಿತಾರಾ ಅವರ ಹೆಸರಿನಲ್ಲಿ ನಕಲಿ ಖಾತೆಯನ್ನು ತೆರೆದು, ಫಾಲೋವರ್ಸ್ ಗಳಿಗೆ ವ್ಯಾಪಾರ ಮತ್ತು ಹೂಡಿಕೆಯ ಲಿಂಕ್ ಗಳನ್ನು ಕಳುಹಿಸುತ್ತಿದ್ದಾರೆ. ಈ ಬಗ್ಗೆ ಮಾದಾಪುರ ಠಾಣೆಯಲ್ಲಿ ದೂರು ನೀಡಲಾಗಿದೆ. @sitaraghattamaneni ಇದು ಅವರ ಅಧಿಕೃತ ಖಾತೆಯಾಗಿದ್ದು, ಉಳಿದ ಖಾತೆ ನಂಬಲು ಅರ್ಹವಲ್ಲವೆಂದು ಮಹೇಶ್ ಬಾಬು ಪ್ರೊಡಕ್ಷನ್ ಹೌಸ್ ಜಿಎಂಬಿ ಎಂಟರ್‌ಟೈನ್‌ಮೆಂಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್ನಲ್ಲೂ ಮಿಂಚಿದ್ದ ಮಾಲಿವುಡ್ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.