ಗಾಯಕ ಹರಿಹರನ್‌ ಕಾರ್ಯಕ್ರಮದಲ್ಲಿ ಭಾರೀ ಜನಸ್ತೋಮ: ನಟಿ ತಮನ್ನಾ ನೋಡಲು ಮುಗಿಬಿದ್ದ ಫ್ಯಾನ್ಸ್

Team Udayavani, Feb 12, 2024, 3:14 PM IST

ಗಾಯಕ ಹರಿಹರನ್‌ ಕಾರ್ಯಕ್ರಮದಲ್ಲಿ ಭಾರೀ ಜನಸ್ತೋಮ: ನಟಿ ತಮನ್ನಾ ನೋಡಲು ಮುಗಿಬಿದ್ದ ಫ್ಯಾನ್ಸ್

ಕೊಲಂಬೊ: ಕಳೆದ ವರ್ಷ ಖ್ಯಾತ ಗಾಯಕ ಎಆರ್ ರೆಹಮಾನ್ ಅವರ ಮರಕ್ಕುಮಾ ನೆಂಜಮ್ ಮ್ಯೂಸಿಕ್‌ ಕಾನ್ಸರ್ಟ್‌ ನಲ್ಲಿ ಭಾರೀ ಜನಸ್ತೋಮ ಸೇರಿದ ಕಾರಣ ನೂಕುನುಗ್ಗಲು ಉಂಟಾಗಿತ್ತು. ಇದೀಗ ಜನಪ್ರಿಯ ಗಾಯಕ ಹರಿಹರನ್‌ ಅವರ ಇತ್ತೀಚೆಗಿನ ಕಾನ್ಸರ್ಟ್‌ ನಲ್ಲಿ ಇಂಥದ್ದೇ ದೃಶ್ಯ ಕಂಡು ಬಂದಿದೆ.

ಇತ್ತೀಚೆಗೆ(ಫೆ.9 ರಂದು) ಶ್ರೀಲಂಕಾದ ಜಾಫ್ನಾದಲ್ಲಿ ಹರಿಹರನ್‌ ಅವರ ಸಂಗೀತ ಸಂಜೆ ಕಾರ್ಯಕ್ರಮವನ್ನುಆಯೋಜನೆ ಮಾಡಲಾಗಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಈ ಕಾರ್ಯಕ್ರಮ ಕಳೆದ ಡಿಸೆಂಬರ್‌ ನಲ್ಲೇ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದ ಕಾರ್ಯಕ್ರಮವನ್ನು ಫೆ.9 ರಂದು ನಿಗದಿಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜನೆ ಮಾಡಲಾಗಿತ್ತು. ಗಾಯಕ ಹರಿಹರನ್‌ ಮಾತ್ರವಲ್ಲದೆ, ದಕ್ಷಿಣ ಚಿತ್ರರಂಗದ ಪ್ರಮುಖ ತಾರೆಯರಾದ ತಮನ್ನಾ ಭಾಟಿಯಾ, ರಂಬಾ, ಯೋಗಿ ಬಾಬು, ಶ್ವೇತಾ ಮೆನನ್, ಬಾಲಾ ಮತ್ತು ಸ್ಯಾಂಡಿ ಮಾಸ್ಟರ್ ಮುಂತಾದವರು ಭಾಗಿಯಾಗಿದ್ದರು.

ತಮನ್ನಾ ಅವರ ಪ್ರದರ್ಶನದ ಬಳಿಕ ಅನಿರೀಕ್ಷಿತವಾಗಿ ಲಕ್ಷಕ್ಕೂ ಅಧಿಕ ಜನ ಕಾರ್ಯಕ್ರಮವನ್ನು ನೋಡಲು ಹರಿದು ಬಂದಿದ್ದಾರೆ. ಕಾರ್ಯಕ್ರಮದ ಆಯೋಜಕರು ಮೊದಲು ಉಚಿತವಾಗಿ ಕಾರ್ಯಕ್ರಮಕ್ಕೆ ಬರಬಹುದೆಂದು ಘೋಷಿಸಿದ್ದರು. ಆದರೆ ಆ ಬಳಿಕ ಒಂದು ವಿಭಾಗಕ್ಕೆ 3,000 ರಿಂದ 25,000 ರೂ.ವರೆಗೆ ರೂ.ವರೆಗೆ ಟಿಕೆಟ್‌ ಇಟ್ಟಿದ್ದರು. ಆದರೆ ಜನ ಪಾವತಿಸಿದ ಸೀಟ್‌ ಗಳನ್ನು ಕಬಳಿಸುವ ಭರದಲ್ಲಿ ನೂಕುನುಗ್ಗಲು ಉಂಟಾಗಿದೆ. ಎಲ್ಲಿಯವರೆಗೆ ಅಂದರೆ ಕಲಾವಿದರು ಜನರಲ್ಲಿ ಮಾಡಿದರೂ ಜನದಟ್ಟಣೆ ಕಮ್ಮಿಯಾಗಿಲ್ಲ. ಇದರಿಂದ ಕೆಲಕಾಲ ಕಾರ್ಯಕ್ರವನ್ನು ನಿಲ್ಲಿಸಲಾಗಿತ್ತು.

ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರನ್ನು ಕಾಣಕಲು ಕ್ಯಾಮೆರಾ ಹಾಗೂ ಸ್ಪೀಕರ್‌ ಇಟ್ಟ ಜಾಗದಲ್ಲಿ ಹತ್ತಿ ಕೂತಿದ್ದಾರೆ. ಕೆಲವರಂತೂ ಮರದ ಮೇಲೆ ಹತ್ತಿದ್ದಾರೆ.

ಅಭಿಮಾನಿಗಳ ರಾದ್ಧಾಂತದಿಂದ ಭದ್ರತಾ ಸಿಬ್ಬಂದಿ ಮತ್ತು ನಟರು ಅಭಿಮಾನಿಗಳನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಕಾನ್ಸರ್ಟ್‌ ನ ನಿಯಮಗಳು ಮತ್ತು ನಿಬಂಧನೆಗಳನ್ನು ಜನ ಅನುಸರಿಸಲು ನಿರಾಕರಿಸಿದ ನಂತರ ಟಾಸ್ಕ್ ಫೋರ್ಸ್ ಪಡೆ ಜನರಿಗೆ ಎಚ್ಚರಿಕೆ ನೀಡಿದೆ.

ಈ ಘಟನೆಯಲ್ಲಿ 3 ಮಂದಿ ಗಾಯಗೊಂಡಿದ್ದು, 6 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಉಚಿತ ಪ್ರೇಕ್ಷಕರ ಪ್ರವೇಶದಿಂದ ಸಮಸ್ಯೆಗಳು ಉಂಟಾಗಿವೆ ಎಂದು ಆಯೋಜಕರು ಹೇಳಿದ್ದಾರೆ. ಇನ್ನೊಂದೆಡೆ ಈ ಅವಘಡಕ್ಕೆ ಸಂಘಟಕರ ನಿರ್ಲಕ್ಷ್ಯವೇ ಕಾರಣ ಎಂದು ಜನ ಆರೋಪಿಸಿದ್ದಾರೆ.

ಈ ಕಾರ್ಯಕ್ರಮವನ್ನು ನಟಿ ರಂಬಾ ಅವರ ಪತಿ ಇಂದ್ರ ಮತ್ತು ಅವರ ಉತ್ತರ ವಿಶ್ವವಿದ್ಯಾಲಯ ಆಯೋಜಿಸಿತ್ತು.

ಟಾಪ್ ನ್ಯೂಸ್

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.