Actor Siddique: ಬಂಧನದ ಭೀತಿಯಿಂದ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ
Team Udayavani, Sep 26, 2024, 3:26 PM IST
ತಿರುವನಂತಪುರಂ: ಮಾಲಿವುಡ್ ಸಿನಿಮಾರಂಗದಲ್ಲಿ ಸಂಚಲನ ಸೃಷ್ಟಿಸಿದ ಹೇಮಾ ಸಮತಿ ವರದಿ (Hema Committee report) ಬಳಿಕ ಹಲವು ನಟರ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ.
ಮೊದಲಿಗೆ ಮಲಯಾಳಂ ನಿರ್ದೇಶಕ ರಂಜಿತ್ (Malayalam director Ranjith) ವಿರುದ್ಧ ಆರೋಪ ಕೇಳಿ ಬಂದ ಬಳಿಕ ಸಾಲು ಸಾಲಾಗಿ ಕೆಲ ಖ್ಯಾತ ಕಲಾವಿದರ ಮೇಲೆ ನಟಿಯರು ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಆರೋಪವನ್ನು ಮಾಡಿ ದೂರು ದಾಖಲಿಸಿದ್ದರು.
ಇದನ್ನೂ ಓದಿ: ಶಂಕರ್ ನಿರ್ದೇಶನದಲ್ಲಿ ಐತಿಹಾಸಿಕ ಸಿನಿಮಾ; 2 ದಶಕದ ಬಳಿಕ ಜತೆಯಾಗಲಿದ್ದಾರೆ ಸೂರ್ಯ- ವಿಕ್ರಮ್
ಹಿರಿಯ ನಟ ಸಿದ್ದೀಕ್ (Malayalam actor Siddique) ಅವರ ಮೇಲೂ ಅತ್ಯಾಚಾರ ಆರೋಪ ಕೇಳಿ ಬಂದಿದೆ.
2016ರ ಜನವರಿ 28ರಂದು ತಿರುವನಂತಪುರಂನ ಹೊಟೇಲ್‌ನಲ್ಲಿ ಸಿನಿಮಾವೊಂದರ ಪ್ರಿವ್ಯೂ ಶೋ ಬಳಿಕ ಸಿದ್ದೀಕ್ ತನ್ನ ಮೇಲೆ ಅತ್ಯಾಚಾರವೆಸಗಿದ್ದರು ಎಂದು ನಟಿಯೊಬ್ಬರು ಆರೋಪಿಸಿದ್ದರು. ಪೊಲೀಸರು ನಟನ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.
ಈ ಆರೋಪದ ಬಳಿಕ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (Malayalam Movie Artistes) ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಈ ಪ್ರಕರಣ ಸಂಬಂಧ ಬಂಧನದ ಭೀತಿಯಲ್ಲಿದ್ದ ಸಿದ್ದೀಕ್ ಹೈಕೋರ್ಟ್‌ಗೆ ಸೆ.24 ರಂದು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಆ ಅರ್ಜಿ ವಜಾ ಆಗಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲು ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಆದರೆ ಅದೇ ಸಮಯದಲ್ಲಿ ಕ್ರೈಂ ಬ್ರಾಂಚ್ ಕೊಚ್ಚಿ ಪೊಲೀಸರಿಗೆ ಸಿದ್ದೀಕ್ ಅವರನ್ನು ಬಂಧಿಸಲು ಆದೇಶಿದೆ.
Look out notice for Actor #Siddique 👀 pic.twitter.com/t4lhRAvoaD
— Prakash Mahadevan (@PrakashMahadev) September 26, 2024
ಈ ಹಿನ್ನೆಲೆಯಲ್ಲಿ ಪೊಲೀಸರು ಅವರ ಬಂಧನಕ್ಕೆ ಮುಂದಾಗಿದ್ದು, ಸಿದ್ದೀಕ್ ತಲೆಮರೆಸಿಕೊಂಡಿದ್ದಾರೆ. ಅವರ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಆಗಿದೆ. ಇದೀಗ ಸಿದ್ದೀಕ್ ವಿರುದ್ಧ ಕೇರಳದ ಎಲ್ಲಾ ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಎಲ್ಲಾ ಪೊಲೀಸ್ ಠಾಣೆಗಳಿಗೂ ಸಿದ್ದೀಕ್ ಫೋಟೋ ಹಾಗೂ ಅವರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ.
ಸಿದ್ದೀಕ್ ವಿರುದ್ಧ ಅತ್ಯಾಚಾರ (ಸೆಕ್ಷನ್ 376) ಮತ್ತು ಕ್ರಿಮಿನಲ್ ಬೆದರಿಕೆ (ಸೆಕ್ಷನ್ 506) ಆರೋಪ ಮೇಲೆ ದೂರು ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ
Andhra: ʼಗೇಮ್ ಚೇಂಜರ್ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ
Toxic: ಯಶ್ ಬರ್ತ್ ಡೇಗೆ ʼಟಾಕ್ಸಿಕ್ʼನಿಂದ ಸಿಗಲಿದೆ ಬಿಗ್ ಅಪ್ಡೇಟ್; ಫ್ಯಾನ್ಸ್ ಥ್ರಿಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಾದಕ ವಸ್ತು ಸೇವನೆ ಆರೋಪ: ಯುವಕ ವಶಕ್ಕೆ
Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.