NBK109: ಮತ್ತೊಂದು ಸೌತ್ ಸಿನಿಮಾದಲ್ಲಿ ಬಾಬಿ ಡಿಯೋಲ್; ಬಾಲಯ್ಯ ಜೊತೆ ಆ್ಯಕ್ಷನ್
Team Udayavani, Jan 28, 2024, 2:40 PM IST
ಹೈದರಾಬಾದ್: ʼಅನಿಮಲ್ʼ ಸಿನಿಮಾದ ಬಾಲಿವುಡ್ ನಟ ಬಾಬಿ ಡಿಯೋಲ್ ಅವರ ಜನಪ್ರಿಯತೆ ಹೆಚ್ಚಾಗಿದೆ. ಅವರನ್ನು ಹುಡುಕಿಕೊಂಡು ನಾನಾ ಸಿನಿಮಾ ತಂಡದವರು ಬರುತ್ತಿದ್ದಾರೆ. ಬಾಲಿವುಡ್ ಮಾತ್ರವಲ್ಲದೆ, ದಕ್ಷಿಣ ಸಿನಿಮಾರಂಗಕ್ಕೂ ಬಾಬಿ ಡಿಯೋಲ್ ಬೇಡಿಕೆಯ ನಟನಾಗುತ್ತಿದ್ದಾರೆ.
ರಣ್ಬೀರ್ ಕಪೂರ್ ಅವರ ʼಅನಿಮಲ್ʼ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಹಿಟ್ ಆಗಿದೆ. ಆ ಮೂಲಕ ಅವರ ವೃತ್ತಿ ಬದುಕಿಗೆ ಬೂಸ್ಟ್ ನೀಡಿದೆ. ಆ ಸಿನಿಮಾದಲ್ಲಿ ನೆಗೆಟಿವ್ ರೋಲ್ ನಲ್ಲಿ ಕಾಣಿಸಿಕೊಂಡ ನಟ ಬಾಬಿ ಡಿಯೋಲ್ ಅವರಿಗೂ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ.
ನಿನ್ನೆಯಷ್ಟೇ(ಜ.27 ರಂದು) ಬಾಬಿ ಡಿಯೋಲ್ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.ಈ ಸಂಭ್ರಮದಲ್ಲಿ ಸೂರ್ಯ ಅವರ ಪ್ಯಾನ್ ಇಂಡಿಯಾ ʼಕಂಗುವʼ ಸಿನಿಮಾದಲ್ಲಿನ ಅವರ ʼ ಉಧಿರನ್ʼ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ನ್ನು ಬಿಡುಗಡೆ ಮಾಡಲಾಗಿದೆ.
ಇದರೊಂದಿಗೆ ಮತ್ತೊಂದು ಸೌತ್ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಟಾಲಿವುಡ್ ನಟ ಬಾಲಕೃಷ್ಣ ಅವರ ʼಎನ್ ಬಿಕೆ 109ʼ ಸಿನಿಮಾದಲ್ಲಿ ಬಾಬಿ ಕಾಣಿಸಿಕೊಳ್ಳಲಿದ್ದಾರೆ. ಬಾಬಿ ಡಿಯೋಲ್ ಹುಟ್ಟುಹಬ್ಬದಂದು ಈ ವಿಚಾರವನ್ನು ಚಿತ್ರತಂಡ ರಿವೀಲ್ ಮಾಡಿದೆ.
ʼವಾಲ್ಟೇರ್ ವೀರಯ್ಯʼ ಸಿನಿಮಾವನ್ನು ನೀಡಿ ಗಮನ ಸೆಳೆದ ನಿರ್ದೇಶಕ ಕೆ ಎಸ್ ಬಾಬಿ ಬಾಲಕೃಷ್ಣ ಅವರೊಂದಿಗೆ ಈ ಸಿನಿಮಾವನ್ನು ಮಾಡುತ್ತಿದ್ದಾರೆ. ಸಿತಾರಾ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ʼಗುಂಟೂರು ಖಾರಂʼ ಸಿನಿಮಾವನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ನಾಗ ವಂಶಿ ಈ ಸಿನಿಮಾಕ್ಕೆ ಬಂಡವಾಳ ಹಾಕಲಿದ್ದಾರೆ.
ʼNBK109ʼ ಸಿನಿಮಾದ ಇತರೆ ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ಗೌತಮ್ ವಾಸುದೇವ್ ಮೆನನ್ ನಟಿಸಲಿದ್ದಾರೆ ಎನ್ನಲಾಗಿದೆ.
ʼಕಂಗುವʼ ಸಿನಿಮಾದ ಬಳಿಕ ಬಾಬಿ ಪವನ್ ಕಲ್ಯಾಣ್ ಅವರ ʼಹರಿ ಹರ ವೀರ ಮಲ್ಲುʼ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.