Poonam Kaur: ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಗಂಭೀರ ಆರೋಪ
Team Udayavani, Sep 18, 2024, 1:12 PM IST
ಹೈದರಾಬಾದ್: ಮಾಲಿವುಡ್ ನಲ್ಲಿ ಹೇಮಾ ಸಮತಿ ವರದಿ(Hema Committee Report) ಬಳಿಕ ಇತರೆ ಸಿನಿಮಾರಂಗದಲ್ಲೂ ಇದೇ ರೀತಿಯ ಸಮಿತಿಯನ್ನು ರಚಿಸಬೇಕೆಂದು ಅನೇಕರು ಧ್ವನಿ ಎತ್ತಿದ್ದಾರೆ.
ಇತ್ತೀಚೆಗೆ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ (Jani Master) ವಿರುದ್ಧ 21 ವರ್ಷದ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳದ ಆರೋಪವನ್ನು ಮಾಡಿ ದೂರು ದಾಖಲಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಯುತ್ತಿದೆ.
ಈ ನಡುವೆ ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ (Trivikram Srinivas) ವಿರುದ್ಧ ತಾನು ಕೊಟ್ಟ ದೂರಿಗೆ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಬಹುಭಾಷಾ ನಟಿ ಪೂನಂ ಕೌರ್ (Actress Poonam Kaur) ಚಲನಚಿತ್ರ ಕಲಾವಿದರ ಸಂಘ (MAA)ಕ್ಕೆ ಪ್ರಶ್ನೆ ಮಾಡಿದ್ದಾರೆ.
Had maa association taken complaint on trivikram Srinivas ,
I and many wouldn’t have had the political suffering , I was rather silently ignored , I had given a call tand then complaint to the heads , I want industry big wigs to question Director Trivikram .— पूनम कौर ❤️ poonam kaur (@poonamkaurlal) September 17, 2024
ಜಾನಿ ಮಾಸ್ಟರ್ ಪ್ರಕರಣದ ಬಗ್ಗೆ ಪ್ರಸ್ತಾಪಿಸಿರುವ ಅವರು ತನ್ನ ʼಎಕ್ಸ್ʼ ಖಾತೆಯಲ್ಲಿ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
“ನಾನು ಚಲನಚಿತ್ರ ಕಲಾವಿದರ ಸಂಘಕ್ಕೆ ಹಾಗೂ ಹಿರಿಯರಿಗೆ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದೆ. ಆದರೆ ನನ್ನನು ನಿರ್ಲಕ್ಷ್ಯ ಮಾಡಲಾಯಿತು. ದೂರು ಕೊಟ್ಟ ಬಳಿಕವೂ ಯಾವ ಪ್ರಯೋಜವೂ ಆಗಲಿಲ್ಲ. ಈಗಲಾದರೂ ಇಂಡಸ್ಟ್ರಿಯ ದೊಡ್ಡವರು ತ್ರಿವಿಕ್ರಮ್ ಶ್ರೀನಿವಾಸ್ ಅವರನ್ನು ಪ್ರಶ್ನೆ ಮಾಡಬೇಕು” ಎಂದು ಪೂನಂ ಆಗ್ರಹಿಸಿದ್ದಾರೆ.
ಪೂನಂ ಇಲ್ಲಿ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿಲ್ಲ. ಆದರೆ ಅವರು ಪರೋಕ್ಷವಾಗಿ ಲೈಂಗಿಕ ಆರೋಪದ ಬಗ್ಗೆಯೇ ಹೇಳುತ್ತಿದ್ದಾರೆ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪೂನಂ ಅವರಿಗೆ ತ್ರಿವಿಕ್ರಮ್ ಶ್ರೀನಿವಾಸ್ ಅವರಿಂದ ಯಾವ ರೀತಿಯ ತೊಂದರೆ ಆಗಿದೆ ಎನ್ನುವುದರ ಬಗ್ಗೆ ಅವರು ಇಲ್ಲಿ ಉಲ್ಲೇಖ ಮಾಡಿಲ್ಲ.
ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ನಟಿ ಪೂನಂ ಈ ರೀತಿಯ ಆರೋಪ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ತ್ರಿವಿಕ್ರಮ್ ಶ್ರೀನಿವಾಸ್ ಅವರ ಹೆಸರು ಹೇಳದೆ ಪರೋಕ್ಷವಾಗಿ ಅವರ ವಿರುದ್ದವೇ ಬೇರೆಯವರ ವೃತ್ತಿ ಜೀವನವನ್ನು ಹಾಳು ಮಾಡಿರುವ ನಿರ್ದೇಶಕ ಎಂದು ಆರೋಪಿಸಿದ್ದರು. ನನ್ನನ್ನು ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ 2019ರಲ್ಲಿ ಸೈಬರ್ ಕ್ರೈಂಗೆ ತ್ರಿವಿಕ್ರಮ್ ಶ್ರೀನಿವಾಸ್ ವಿರುದ್ಧ ದೂರು ನೀಡಿದ್ದರು.
ತೆಲುಗು, ತಮಿಳು ಹಿಂದಿ ಜತೆಗೆ ಕನ್ನಡದಲ್ಲೂ ಪೂನಂ ಅವರು ನಟಿಸಿದ್ದಾರೆ. ಕನ್ನಡದಲ್ಲಿ ಡಾ.ಶಿವರಾಜ್ ಕುಮಾರ್ ಅಭಿನಯದ ʼಬಂಧು ಬಳಗʼ ಚಿತ್ರದಲ್ಲಿ ಕೂಡ ಪೂನಂ ಕೌರ್ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.