Prasanth Varma: ಮಹಾಕಾಳಿಯಲ್ಲಿ ದೈವಾರಾಧನೆ
Team Udayavani, Oct 15, 2024, 9:25 AM IST
“ಹನುಮಾನ್’ ಸೂಪರ್ ಹಿಟ್ ಸಿನಿಮಾ ನಿರ್ದೇಶಿಸಿದ್ದ ಪ್ರಶಾಂತ್ ವರ್ಮಾ ಈಗ “ಮಹಾಕಾಳಿ’ ಕಥೆ ಹೇಳಲು ಸಜ್ಜಾಗುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಸೂಪರ್ ಹಿರೋಯಿನ್ ಪರಿಕಲ್ಪನೆಯ ಸಿನಿಮಾವಾಗಿ ಮೂಡಿಬರಲಿದೆ.
ತಮ್ಮದೇ ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್‌ನಡಿ ಮೂರನೇ ಚಿತ್ರ ಘೋಷಣೆ ಮಾಡಿರುವ ಪ್ರಶಾಂತ್, ಮಹಾಕಾಳಿ ಸಿನಿಮಾಗೆ ಕಥೆ ಬರೆದಿದ್ದಾರೆ. ಈ ಹಿಂದೆ ಮಾರ್ಟಿನ್ ಲೂಥರ್ ಕಿಂಗ್ ಎಂಬ ಚಿತ್ರ ನಿರ್ದೇಶಿಸಿದ್ದ ಪೂಜಾ ಅಪರ್ಣಾ ಕೊಲ್ಲೂರು ಮಹಾಕಾಳಿ ಚಿತ್ರದ ನಿರ್ದೇಶಕರು.
ಪಶ್ಚಿಮ ಬಂಗಾಳದ ಜನಪ್ರಿಯ ಕಾಳಿದೇವಿ ಹಿನ್ನೆಲೆ, ಅಲ್ಲಿನ ನೆಲದ ಸಂಸ್ಕೃತಿ ಸಿನಿಮಾದಲ್ಲಿ ಅನಾವರಣವಾಗಲಿದೆ. ಈಗಾಗಲೇ ಮಹಾ ಕಾಳಿ ಪೋಸ್ಟರ್ ಬಿಡುಗಡೆ ಮಾಡಲಾ ಗಿದ್ದು, ಹುಡುಗಿಯೊಬ್ಬಳು ಹುಲಿಗೆ ತನ್ನ ಹಣೆ ಕೊಟ್ಟು ನಿಂತಿರುವ ಲುಕ್ ಹೊಸ ನಿರೀಕ್ಷೆ ಹುಟ್ಟುಹಾಕಿಸಿದೆ.
ಆರ್‌ಕೆಎಂಡಿ ಸ್ಟುಡಿಯೋಸ್ ಬ್ಯಾನರ್‌ನಡಿ ರಿಜ್ವಾನ್ ರಮೇಶ್ ದುಗ್ಗಲ್ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಆರ್.ಕೆ. ದುಗ್ಗಲ್ ಚಿತ್ರ ಪ್ರಸ್ತುತಪಡಿಸುತ್ತಿದ್ದಾರೆ. ಸ್ಮರಣ್ ಸಾಯಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
ಭಾರತವಲ್ಲದೇ ವಿದೇಶಿ ಭಾಷೆಗಳಲ್ಲೂ ಮಹಾಕಾಳಿ ಸಿನಿಮಾ ಮೂಡಿ ಬರಲಿದೆ. ಶೀಘ್ರ ಪಾತ್ರ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2
Tulu cinema; ಕೋಸ್ಟಲ್‌ನಲ್ಲೀಗ ಸಿನೆಮಾ ಹಂಗಾಮಾ!
SSMB29: ರಾಜಮೌಳಿ – ಮಹೇಶ್ ಬಾಬು ಸಿನಿಮಾದ ಲೀಡ್ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?
Video: ಜೈಲಿನಿಂದ ಅಲ್ಲು ಅರ್ಜುನ್ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.