Prithviraj Sukumaran; ನೂರು ಕೋಟಿ ಕ್ಲಬ್‌ಗೆ ಆಡು ಜೀವಿತಂ
Team Udayavani, Apr 7, 2024, 10:47 AM IST
ಪೃಥ್ವಿರಾಜ್ ಸುಕುಮಾರನ್ ನಟನೆಯ “ಆಡು ಜೀವಿತಂ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಎಂಟು ದಿನಗಳಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಮಲಯಾಳಂ ಸಿನಿಮಾ ಎನ್ನುವ ಖ್ಯಾತಿಗೆ ಈ ಚಿತ್ರ ಪಾತ್ರವಾಗಿದೆ. ಸಿನಿಮಾ ನೋಡಿದ ಅನೇಕರು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ, ಚಿತ್ರದ ಗಳಿಕೆ ಹೆಚ್ಚುತ್ತಿದೆ. ಮುಂದಿನ ವಾರಗಳಲ್ಲಿ ಸಾಲು ಸಾಲು ರಜೆ ಇರುವುದರಿಂದ ಸಿನಿಮಾಗೆ ಸಹಕಾರಿ ಆಗಲಿದೆ ಎನ್ನುವುದು ಚಿತ್ರತಂಡದ ಲೆಕ್ಕಾಚಾರ.
ಬ್ಲೆಸ್ಸಿ ಅವರು “ಆಡುಜೀವಿತಂ’ ಚಿತ್ರಕ್ಕಾಗಿ ಹಲವು ವರ್ಷ ಮುಡಿಪಿಟ್ಟಿದ್ದಾರೆ. ಈ ಸಿನಿಮಾದಲ್ಲಿ ಪೃಥ್ವಿರಾಜ್ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಪೃಥ್ವಿರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಗ್ಲೋಬಲ್ ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ 100 ಕೋಟಿ ರೂಪಾಯಿ ಗಳಿಕೆ ಮಾಡಿರೋ ಬಗ್ಗೆ ಮಾಹಿತಿ ನೀಡಿದ್ದಾರೆ.
2008ರಲ್ಲಿ ನಿರ್ದೇಶಕ ಬ್ಲೆಸ್ಸಿ ಅವರು ಪೃಥ್ವಿರಾಜ್ ಅವರಿಗೆ ಈ ಸಿನಿಮಾ ಬಗ್ಗೆ ಹೇಳಿದ್ದರು. ಸಿನಿಮಾದ ಕಥೆ ಅವರಿಗೆ ಇಷ್ಟ ಆಯಿತು. ಆ ಬಳಿಕ ಸಾಕಷ್ಟು ವರ್ಷ ಶ್ರಮ ಹಾಕಿ ಸಿನಿಮಾ ಮಾಡಲಾಯಿತು. ಈ ಚಿತ್ರ 2024ರಲ್ಲಿ ರಿಲೀಸ್ ಆಗಿದೆ.
“ಆಡುಜೀವಿತಂ’ ಸಿನಿಮಾದಲ್ಲಿ ಅಮಲಾ ಪೌಲ್, ಕೆಆರ್ ಗೋಕುಲ್ ಮೊದಲಾದವರು ನಟಿಸಿದ್ದಾರೆ. ಕೇರಳದ ನಜೀಬ್ ಹೆಸರಿನ ವ್ಯಕ್ತಿ ಸೌದಿ ಅರೇಬಿಯಾಗೆ ಕೆಲಸ ಅರಸಿ ಹೋಗುತ್ತಾರೆ. ಅಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಾರೆ. ಹಲವು ವರ್ಷಗಳ ತೊಂದರೆ ಬಳಿಕ ಅವರು ದೇಶಕ್ಕೆ ಮರಳುತ್ತಾರೆ. ಈ ಕಥೆಯನ್ನು ಸಿನಿಮಾ ಹೊಂದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.