SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
Team Udayavani, Jul 3, 2024, 2:23 PM IST
ಹೈದರಾಬಾದ್: ಪ್ರಿನ್ಸ್ ಮಹೇಶ್ ಬಾಬು ವೃತ್ತಿ ಬದುಕಿನ ದೊಡ್ಡ ಸಿನಿಮಾವೆಂದೇ ಹೇಳಲಾಗುತ್ತಿರುವ ʼSSMB29ʼ ಅನೌನ್ಸ್ ಆದ ದಿನದಿಂದ ಸುದ್ದಿಯಲ್ಲಿದೆ. ಅದಕ್ಕೆ ಕಾರಣ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವುದು ಎಸ್ ಎಸ್ ರಾಜಮಮೌಳಿ ಎನ್ನುವುದು ಕೂಡ ಒಂದು.
“ಇದೊಂದು ವಿಶ್ವ ಪರ್ಯಟನೆಯುಳ್ಳ ಸಾಹಸಮಯವದ ಸಿನಿಮಾ, ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕರನ್ನು ಸೆಳೆಯಲಿದೆ. ಇದು ಜೇಮ್ಸ್ ಬಾಂಡ್ ಅಥವಾ ಇಂಡಿಯಾನ ಜೋನ್ಸ್ ಸಾಹಸದ ಹಾಗೆ ಭಾರತೀಯ ಶೈಲಿಯಲ್ಲಿ ಮೂಡಿಬರುವ ಚಿತ್ರ. ಥಿಯೇಟರ್ ನಲ್ಲಿ ಈ ಸಿನಿಮಾ ಎಲ್ಲರನ್ನೂ ರೋಮಾಂಚನಗೊಳಿಸಲಿದೆ” ಎಂದು ರಾಜಮಾಳಿ ಈ ಹಿಂದೆ ಹೇಳಿದ್ದರು.
ಸಿನಿಮಾದಲ್ಲಿ ಮಹೇಶ್ ಬಾಬು ಬಹು ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರ ಪಾತ್ರಗಳು ವಿಭಿನ್ನವಾಗಿರಲಿದೆ. ಅದಕ್ಕಾಗಿ ನಿರ್ದೇಶಕ ರಾಜಮೌಳಿ ಅವರೇ ಮಹೇಶ್ ಬಾಬು ಅವರ ಲುಕ್ ಟೆಸ್ಟ್ ಗಳನ್ನು ಮಾಡಿಸಿದ್ದಾರೆ. ಇದರಲ್ಲಿ ಒಟ್ಟು ಎಂಟು ವಿಭಿನ್ನ ಲುಕ್ ಗಳನ್ನು ಅಂತಿಮಗೊಳಿಸಲಾಗಿದೆ ಎಂದು ವರದಿ ಆಗಿತ್ತು.
ಇದನ್ನೂ ಓದಿ: ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
ಅಡ್ವೆಂಚರ್ ಜಂಗಲ್, ಸಾಹಸಮಯ ಕಥೆಯನ್ನು ಸಿನಿಮಾ ಒಳಗೊಂಡಿದ್ದು, ಸಿನಿಮಾದಲ್ಲಿ ಮಹೇಶ್ ಬಾಬು ಅವರ ಪಾತ್ರವು ರಾಮಾಯಣದ ಹನುಮಂತನಿಂದ ಪ್ರೇರಿತವಾಗಿದೆ ಎಂದು ಹೇಳಲಾಗಿದೆ.
ಇದೀಗ ಈ ಸಿನಿಮಾದ ಬಗ್ಗೆ ಅಪ್ಡೇಟ್ ವೊಂದು ಹೊರಬಿದ್ದಿದೆ. ಚಿತ್ರದ ತಯಾರಿಗಾಗಿ ರಾಜಮೌಳಿ ಹಾಗೂ ತಂಡ ಶ್ರಮವಹಿಸುತ್ತಿದೆ. ಈ ನಡುವೆ ಖ್ಯಾತ ಕಲಾವಿದರೊಬ್ಬರು ಚಿತ್ರದ ಭಾಗವಾಗಲಿದ್ದಾರೆ ಎನ್ನಲಾಗಿದೆ.
ಖ್ಯಾತ ಮಾಲಿವುಡ್ ನಟ ಪೃಥ್ವಿರಾಜ್ ಸುಕುಮಾರನ್ ಮಹೇಶ್ ಬಾಬು ಚಿತ್ರದಲ್ಲಿ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಕೆಲ ಸಮಯದಿಂದ ಪೃಥ್ವಿರಾಜ್ ಜೊತೆ ರಾಜಮೌಳಿ ಈ ಬಗ್ಗೆ ಮಾತುಕತೆ ನಡೆಸುತ್ತಿದ್ದರು. ಇದೀಗ ಪೃಥ್ವಿರಾಜ್ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ʼಪಿಂಕ್ ವಿಲ್ಲಾʼ ವರದಿ ಮಾಡಿದೆ.
ಆ ಮೂಲಕ ಮೊದಲ ಬಾರಿಗೆ ಪೃಥ್ವಿರಾಜ್ ಮಹೇಶ್ ಬಾಬು ಹಾಗೂ ರಾಜಮೌಳಿ ಜೊತೆ ಕೆಲಸ ಮಾಡಲಿದ್ದಾರೆ.
ಸದ್ಯ ರಾಜಮೌಳಿ ಈ ಸಿನಿಮಾದ ಸ್ಕ್ರಿಪ್ಟ್ ಪೂರ್ಣಗೊಳಿಸಿದ್ದು, ಕಲಾವಿದರ ಆಯ್ಕೆ ಹಾಗೂ ಪ್ರೀ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ವರದಿ ತಿಳಿಸಿದೆ.
2024ರ ಕೊನೆಯಲ್ಲಿ ಅಥವಾ 2025ರ ಆರಂಭದಲ್ಲಿ ಸಿನಿಮಾ ಸೆಟ್ಟೇರುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.