ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Team Udayavani, Apr 24, 2024, 5:14 PM IST
ಕೊಚ್ಚಿ: ಮಾಲಿವುಡ್ ಸಿನಿರಂಗದಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆಗಿರುವ ʼಮಂಜುಮ್ಮೆಲ್ ಬಾಯ್ಸ್ʼ ಶೀಘ್ರದಲ್ಲಿ ಓಟಿಟಿಗೆ ಎಂಟ್ರಿ ಆಗಲಿದೆ. ಮಲಯಾಳಂ ಸೇರಿ ತೆಲುಗಿನಲ್ಲಿ ಡಬ್ ಆಗಿ ರಿಲೀಸ್ ಆಗಿರುವ ಈ ಸಿನಿಮಾಕ್ಕೆ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಮಾಯಿ ಮಾಡಿದ ʼಮಂಜುಮ್ಮೆಲ್ ಬಾಯ್ಸ್ʼ ಈಗ ಕಾನೂನು ಸಂಕಷ್ಟದಲ್ಲಿ ಸಿಲುಕಿದೆ.
ಚಿತ್ರದ ಹೂಡಿಕೆದಾರರು ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದರಿಂದ ಚಿತ್ರದ ನಿರ್ಮಾಪಕರಿಗೆ ಕಾನೂನು ಸಂಕಷ್ಟ ಎದುರಾಗಿದೆ.
ಸಿರಾಜ್ ವಲಿಯತ್ತರ ಹಮೀದ್ ಎನ್ನುವವರು ಚಿತ್ರದ ನಿರ್ಮಾಪಕರ ಮೇಲೆ ದೂರು ದಾಖಲಿಸಿದ್ದಾರೆ. ಚಿತ್ರತಂಡ ಸಿನಿಮಾದ ಲಾಭದ ಪಾಲು ತನಗೆ ನೀಡುತ್ತಾರೆ ಎಂದು ಭರವಸೆ ನೀಡಿದ್ದರು, ಆದರೆ ಅವರು ಭರವಸೆಯನ್ನು ಈಡೇರಿಸಲಿಲ್ಲ ಎಂದು ದೂರಿನಲ್ಲಿ ಹಮೀದ್ ಹೇಳಿದ್ದಾರೆ.
ಎರ್ನಾಕುಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಚಿತ್ರದ ನಿರ್ಮಾಣ ಸಂಸ್ಥೆ ʼಪರವ ಫಿಲ್ಮ್ಸ್ʼ ಮತ್ತು ಅವರ ಪಾಲುದಾರ ಶಾನ್ ಆಂಟೋನಿ ವಿರುದ್ಧ ದೂರು ದಾಖಲಿಸಲು ಕೇರಳ ಪೊಲೀಸರಿಗೆ ಸೂಚನೆ ನೀಡಿದೆ ಎಂದು ʼದಿ ಹಿಂದೂʼ ವರದಿ ಮಾಡಿದೆ. ಚಲನಚಿತ್ರದಿಂದ ಗಳಿಸಿದ ಲಾಭದ 40% ಅನ್ನು ನೀಡಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪರವ ಫಿಲ್ಮ್ಸ್ ಚಿತ್ರದ ನಿರ್ಮಾಣ ವೆಚ್ಚವಾದ 22 ಕೋಟಿ ರೂ.ಗಳಲ್ಲಿ ಹೂಡಿಕೆ ಮಾಡಿದರೆ ಲಾಭವಾಗಿ 40% ಅನ್ನು ದೂರುದಾರರಿಗೆ ನೀಡುವುದಾಗಿ ಭರವಸೆ ನೀಡಿದ್ದರು. ನಂತರ ದೂರುದಾರರು ಪರವ ಫಿಲ್ಮ್ಸ್ ಖಾತೆಗೆ 5.99 ಕೋಟಿ ಮತ್ತು ಆಂಟನಿ ಖಾತೆಗೆ 50 ಲಕ್ಷ ರೂ. ವರ್ಗಾವಣೆ ಮಾಡಿದ್ದರು.
ದೂರುದಾರರು ಒಂದು ಅವಧಿಯಲ್ಲಿ ನಿರ್ಮಾಣ ಸಂಸ್ಥೆಗೆ 51 ಲಕ್ಷ ರೂಪಾಯಿ ಸೇರಿ ಒಟ್ಟು 7 ಕೋಟಿ ರೂಪಾಯಿಗಳನ್ನು ನೀಡಿದ್ದರು ಎಂದು ಎಫ್ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಚಿತ್ರ ತಯಾರಕರು ಮೂಲ ಮೊತ್ತ ಮತ್ತು ಹೆಚ್ಚುವರಿ 40 ಕೋಟಿ ರೂ. ಲಾಭ-ಷೇರನ್ನು ಮರುಪಾವತಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ವಂಚನೆ ಪ್ರಕರಣವನ್ನು ದಾಖಲಿಸಿದ್ದಾರೆ.
ʼಮಂಜುಮ್ಮೆಲ್ ಬಾಯ್ಸ್ʼ ಸಿನಿಮಾವನ್ನು ಚಿದಂಬರಂ ನಿರ್ದೇಶಿಸಿದ್ದು, ಸೌಬಿನ್ ಶಾಹಿರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಎಸ್ ಪೊದುವಾಲ್, ಲಾಲ್ ಜೂನಿಯರ್, ದೀಪಕ್ ಪರಂಬೋಲ್, ಅಭಿರಾಮ್ ರಾಧಾಕೃಷ್ಣನ್, ಅರುಣ್ ಕುರಿಯನ್, ಖಾಲಿದ್ ರೆಹಮಾನ್, ಚಂದು ಸಲೀಂಕುಮಾರ್, ಮತ್ತು ಚಂದು ಸಲೀಂಕುಮಾರ್ ಮುಂತಾದ ಕಲಾವಿದರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್ ಲೀಕ್
ಕೋಮಾದಲ್ಲಿದ್ದ ನನ್ನ ಮಗನ ನೆನಪಿನ ಶಕ್ತಿ ಮರಳಲು ದಳಪತಿ ವಿಜಯ್ ಕಾರಣವೆಂದ ಖ್ಯಾತ ನಟ
Mollywood: 13 ವರ್ಷದ ಬಳಿಕ ರೀ- ರಿಲೀಸ್ ಆಗಲಿದೆ ಸೂಪರ್ ಹಿಟ್ ʼಉಸ್ತಾದ್ ಹೊಟೇಲ್ʼ
Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.