ನಿರ್ದೇಶಕರ ಜತೆ ಭಿನ್ನಾಭಿಪ್ರಾಯ; ವಿದೇಶಕ್ಕೆ ತೆರಳಿದ್ರಾ ಅಲ್ಲು? ಈ ವರ್ಷ ʼPushpa 2ʼ ಡೌಟ್!
Team Udayavani, Jul 17, 2024, 1:29 PM IST
ಹೈದರಾಬಾದ್: ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಬೇಕಿರುವ ಬಹುದೊಡ್ಡ ಸಿನಿಮಾಗಳಲ್ಲಿ ಒಂದಾಗಿರುವ ʼಪುಷ್ಪ-2ʼ (Pushpa 2) ರಿಲೀಸ್ ಗಾಗಿ ಕಾಯುತ್ತಿದ್ದ ಫ್ಯಾನ್ಸ್ ಗಳಿಗೆ ಭಾರೀ ನಿರಾಸೆ ಉಂಟಾಗಿದೆ.
ಆಗಸ್ಟ್ 15 ರಂದು ರಿಲೀಸ್ ಆಗಬೇಕಿದ್ದ ಚಿತ್ರವನ್ನು ಡಿಸೆಂಬರ್ ನಲ್ಲಿ ರಿಲೀಸ್ ಮಾಡಲಾಗುತ್ತದೆನ್ನುವ ಸುದ್ದಿ ಚರ್ಚೆಯಲ್ಲಿರುವಾಗಲೇ ಇದೀಗ ರಿಲೀಸ್ ಡೇಟ್ ಬಗ್ಗೆ ಮತ್ತೊಂದು ವಿಚಾರ ಟಾಲಿವುಡ್(Tollywood) ವಲಯದಲ್ಲಿ ಹರಿದಾಡಿದೆ.
ʼಪುಷ್ಪʼ ಸಿನಿಮಾದ ಸೀಕ್ವೆಲ್ ರಿಲೀಸ್‌ಗಾಗಿ ಕಳೆದ ಎರಡೂವರೆ ವರ್ಷದಿಂದ ಅಲ್ಲು ಅರ್ಜುನ್ (Allu Arjun) ಫ್ಯಾನ್ಸ್ ಗಳು ಕಾದು ಕಾದು ಸುಸ್ತುಗೊಂಡಿದ್ದಾರೆ. ಇನ್ನೇನು ರಿಲೀಸ್ ಆಗಲು ಕೆಲವೇ ತಿಂಗಳು ಇರುವಾಗಲೇ ರಿಲೀಸ್ ಡೇಟ್ ಮುಂದೂಡಿಕೆ ಆಗಿದೆ.
ಸಿನಿಮಾದ ಚಿತ್ರೀಕರಣ ತಡವಾಗುತ್ತಿದೆ ಇದೇ ವಿಚಾರ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್ (Director Sukumar) ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗುತ್ತಿದೆ ಎನ್ನಲಾಗುತ್ತಿದೆ. ಅಲ್ಲು ಅರ್ಜುನ್ ಆದಷ್ಟು ಬೇಗ ಶೂಟ್ ಮುಗಿಸಲು ಹೇಳುತ್ತಿದ್ದಾರೆ ಆದರೆ ಇದಕ್ಕೆ ನಿರ್ದೇಶಕರು ಸಾಕಷ್ಟು ಸಮಯವನ್ನು ತೆಗದುಕೊಳ್ಳುತ್ತಿದ್ದಾರೆ. ನಿರ್ದೇಶಕ ಹಾಗೂ ಅಲ್ಲು ಅರ್ಜುನ್ ನಡುವಿನ ಭಿನ್ನಾಭಿಪ್ರಾಯ ಹೆಚ್ಚಾಗುತ್ತಿದ್ದಂತೆ ಅಲ್ಲು ಅರ್ಜುನ್ ಸಿನಿಮಾಕ್ಕಾಗಿ ಬಿಟ್ಟಿದ್ದ ಗಡ್ಡವನ್ನು ಟ್ರಿಮ್ ಮಾಡಿ ಫ್ಯಾಮಿಲಿಯೊಂದಿಗೆ ವಿದೇಶಕ್ಕೆ ಪ್ರಯಾಣಿಸಿದ್ದಾರೆ ಎನ್ನುವ ಮಾತು ಟಾಲಿವುಡ್ ನಲ್ಲಿ ಗುಲ್ಲಾಗಿದೆ.
ಚಿತ್ರೀಕರಣ ತಡ ಅಗುತ್ತಿದೆ ಹೀಗಾಗಿ ಅಲ್ಲು ಅರ್ಜುನ್ ಅವರು ಕುಟುಂಬದೊಂದಿಗೆ ಯೂರೋಪ್ ಗೆ ತೆರಳಿದ್ದಾರೆ. ಅವರು ಗಡ್ಡವನ್ನು ಟ್ರಿಮ್ ಮಾಡಿಕೊಂಡು ವಿಮಾನದಲ್ಲಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ.
ನಿರ್ದೇಶಕರು ಕೂಡ ಅಮೆರಿಕಾಕ್ಕೆ ಪಯಣ ಬೆಳೆಸಿದ್ದಾರೆ ಎನ್ನಲಾಗಿದೆ. ಕೆಲವೊಂದು ಮೂಲಗಳ ಪ್ರಕಾರ ʼಪುಷ್ಪ-2ʼ ಸಿನಿಮಾ ಈ ವರ್ಷ ರಿಲೀಸ್ ಆಗೋದೇ ಅನುಮಾನ ಎನ್ನಲಾಗುತ್ತಿದೆ.
ಆದರೆ ಅಲ್ಲು ಅರ್ಜುನ್ ಅವರ ಗಡ್ಡ ಟ್ರಿಮ್ ಮಾಡಿರುವ ವಿಡಿಯೋ ನೋಡಿ ಕೆಲವರು ಈ ಲುಕ್ ʼಪುಷ್ಪ-2ʼ ಗಾಗಿ ಬಿಟ್ಟಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ.
ಬಹುನಿರೀಕ್ಷಿತ ʼಪುಷ್ಪ-2ʼ ಅಲ್ಲು ಜೊತೆ ರಶ್ಮಿಕಾ ಮಂದಣ್ಣ, ಫಾಹದ್ ಫಾಸಿಲ್ , ಅನಸೂಯಾ ಭಾರದ್ವಾಜ್, ಸುನಿಲ್, ರಾವ್ ರಮೇಶ್ ಮತ್ತು ಜಗದೀಶ್ ಮುಂತಾದವರು ನಟಿಸಿದ್ದಾರೆ.
#AlluArjun has trimmed the beard!
What about #Pushpa2TheRule and its continuity now?
The film is already in trouble for multiple reasons and this is an add on. As per the latest rumours, everything is not ok between #Sukumar and Bunny. pic.twitter.com/gp3qxx1UBo
— KLAPBOARD (@klapboardpost) July 17, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್ ಲೀಕ್
ಕೋಮಾದಲ್ಲಿದ್ದ ನನ್ನ ಮಗನ ನೆನಪಿನ ಶಕ್ತಿ ಮರಳಲು ದಳಪತಿ ವಿಜಯ್ ಕಾರಣವೆಂದ ಖ್ಯಾತ ನಟ
Mollywood: 13 ವರ್ಷದ ಬಳಿಕ ರೀ- ರಿಲೀಸ್ ಆಗಲಿದೆ ಸೂಪರ್ ಹಿಟ್ ʼಉಸ್ತಾದ್ ಹೊಟೇಲ್ʼ
Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.