Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
Team Udayavani, Nov 26, 2024, 10:17 AM IST
ಯಾವುದೇ ಸಿನಿಮಾ ಇರಲಿ, ಅದರ ಹಾಡು ತಕ್ಕ ಮಟ್ಟಿಗೆ ಹಿಟ್ ಆದರೆ, ಚಿತ್ರತಂಡದಲ್ಲಿ ವಿಶ್ವಾಸ ಹೆಚ್ಚಾಗುತ್ತದೆ. ಪ್ರೇಕ್ಷಕರಿಗೂ ಸಿನಿಮಾ ನೋಡಬೇಕೆಂಬ ಬಯಕೆ ಹೆಚ್ಚಾಗುತ್ತದೆ.
ಸದ್ಯ ನಟ ಅಲ್ಲು ಅರ್ಜುನ್ ಅವರ ಬಹು ನಿರೀಕ್ಷಿತ ಪುಷ್ಪ 2 ಪ್ಯಾನ್ ಇಂಡಿಯಾ ಸಿನಿಮಾದ ಹಾಡೊಂದು ಬಿಡುಗಡೆಯಾಗಿ ಹಿಟ್ ಎನಿಸಿಕೊಳ್ಳುತ್ತಿದೆ. ಈ ಹಾಡಿನಲ್ಲಿ ಕನ್ನಡದ ನಟಿ ಶ್ರೀಲೀಲಾ ಭರ್ಜರಿಯಾಗಿ ಹೆಜ್ಜೆ ಹಾಕಿರುವುದೇ ಪ್ರಮುಖ ಆಕರ್ಷಣೆಯಾಗಿದೆ.
“ಕಿಸಿಕ್’ ಎಂಬ ಹಾಡಿನಲ್ಲಿ ಅಲ್ಲು ಅರ್ಜುನ್ ಜೊತೆ ಶ್ರೀಲೀಲಾ ಅವರ ಕುಣಿತದ ದೃಶ್ಯಗಳಿಗೆ ಸದ್ಯ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. ಅದ್ದೂರಿ ಸೆಟ್‌ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. ಲೋತಿಕಾ ಹಾಗೂ ಸುಬ್ಲಾಷಿನಿ ಈ ಹಾಡಿಗೆ ಧ್ವನಿಯಾಗಿದ್ದಾರೆ.
ರಕೀಬ್ ಅಲಂ ಅವರ ಸಾಹಿತ್ಯ, ದೇವಿ ಶ್ರೀಪ್ರಸಾದ್ ಅವರ ಸಂಗೀತ ಸಂಯೋಜನೆ ಈ ಹಾಡಿಗಿದೆ. ಸದ್ಯ ಈ ಹಾಡಿನ ವಿಡಿಯೋ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಪುಷ್ಪ 1 ಚಿತ್ರದ “ಊಂ ಅಂತಿಯಾ ಊಹೂಂ ಅಂತಿಯಾ’ ಹಾಡಿನಲ್ಲಿ ನಟಿ ಸಮಂತಾ ವಿಶೇಷವಾಗಿ ಕಾಣಿಸಿಕೊಂಡು ಸಖತ್ ಆಗಿ ಹೆಜ್ಜೆ ಹಾಕಿದ್ದರು.
ಈಗ ಪುಷ್ಪ 2ನಲ್ಲಿ ಶ್ರೀಲೀಲಾ ನೃತ್ಯ ಮಾಡುವ ಮೂಲಕ ಚಿತ್ರದ ಮೇಲಿರುವ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಮೂಲ ತೆಲುಗು ಚಿತ್ರ ಇದಾದರೂ, ಕನ್ನಡ ನಟಿಯರಾದ ರಶ್ಮಿಕಾ ಹಾಗೂ ಶ್ರೀಲೀಲಾ ಇದರಲ್ಲಿ ಮಿಂಚುತ್ತಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.