Actor Rajinikanth: ‌ಹೇಮಾ ಸಮಿತಿ ಬಗ್ಗೆ ನನಗೇನೂ ಗೊತ್ತಿಲ್ಲ ಎಂದ ಹಿರಿಯ ನಟ ರಜಿನಿಕಾಂತ್

Team Udayavani, Sep 2, 2024, 11:20 AM IST

Actor Rajinikanth: ‌ಹೇಮಾ ಸಮಿತಿ ಬಗ್ಗೆ ನನಗೇನೂ ಗೊತ್ತಿಲ್ಲ ಎಂದ ಹಿರಿಯ ನಟ ರಜಿನಿಕಾಂತ್

ಚೆನ್ನೈ: ಮಾಲಿವುಡ್‌ನಲ್ಲಿ(Mollywood) ಸಂಚಲನ ಸೃಷ್ಟಿಸಿರುವ ಹೇಮಾ ಸಮಿತಿ ವರದಿ(Hema Committee report) ಬಗ್ಗೆ ಸೂಪರ್‌ ಸ್ಟಾರ್‌ ನಟರೊಬ್ಬರು ತನಗೇನು ಗೊತ್ತಿಲ್ಲ ಎನ್ನುವ ಪ್ರತಿಕ್ರಿಯೆ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಹೇಮಾ ಸಮಿತಿ ವರದಿ ಸಲ್ಲಿಕೆ ಬಳಿಕ ಮಾಲಿವುಡ್‌ನಲ್ಲಿ ಖ್ಯಾತ ಕಲಾವಿದರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ನಿರ್ದೇಶಕ ರಂಜಿತ್‌(Director Ranjith), ನಟ ಜಯಸೂರ್ಯ (Actor Jayasurya), ಮುಕೇಶ್‌(Actor Mukesh) ಸೇರಿದಂತೆ ಹಲವರ ವಿರುದ್ಧ ಅನುಚಿತ ವರ್ತನೆ ಹಾಗೂ ಕಿರುಕುಳದ ಆರೋಪ ಕೇಳಿ ಬಂದಿದೆ.

ಈ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆ ಮಾಲಿವುಡ್‌ ಸಿನಿರಂಗದ ಹಿರಿಯ ನಟರಾದ ಮೋಹನ್‌ ಲಾಲ್‌(Mohanlal) ಹಾಗೂ ಮಮ್ಮುಟ್ಟಿ(Mammootty) “ಹೇಮಾ ಸಮಿತಿಯ ವರದಿಯಲ್ಲಿ ಹೇಳಲಾದ ಶಿಫಾರಸುಗಳು ಮತ್ತು ಪರಿಹಾರಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆ” ಎಂದು ಹೇಳುವ ಮೂಲಕ ಮೌನ ಮುರಿದಿದ್ದಾರೆ.

ಮಾಲಿವುಡ್‌ನಲ್ಲಿ ಹೇಮಾ ಸಮಿತಿ ವರದಿ ಸಂಚಲನ ಸೃಷ್ಟಿಸಿದ ಬಳಿಕ ಇತರೆ ಚಿತ್ರರಂಗದಲ್ಲೂ ಇದೇ ರೀತಿಯ ಸಮಿತಿಯನ್ನು ರಚಿಸಬೇಕೆನ್ನುವ ಕೂಗು ಕೇಳಿ ಬರುತ್ತಿದೆ.

ಈ ನಡುವೆ ಸೂಪರ್‌ ಸ್ಟಾರ್‌ ರಜಿನಿಕಾಂತ್‌ (Superstar Rajinikanth) ಹೇಮಾ ಸಮಿತಿ ವರದಿ ಬಗ್ಗೆ ಹೇಳಿರುವ ಮಾತೊಂದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಹೇಮಾ ಸಮಿತಿ ವರದಿ ಹಾಗೂ ಸಿನಿಮಾರಂಗದಲ್ಲಿನ ಕಿರುಕುಳ ಪ್ರಕರಣದ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, “ನನಗೆ ಈ ಬಗ್ಗೆ ಏನೂ ಗೊತ್ತಿಲ್ಲ ಕ್ಷಮಿಸಿ” ಎಂದು ಹೇಳಿ ಮುಂದೆ ಸಾಗಿದ್ದಾರೆ.

ಈ ಬಗೆಗಿನ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿದ್ದು, ರಜಿನಿಕಾಂತ್‌ ರಂತಹ ಹಿರಿಯ ನಟ ಈ ರೀತಿಯಾಗಿ ಪ್ರತಿಕ್ರಿಯೆ ನೀಡಿರುವುದು ಸರಿಯಲ್ಲ ಎಂದು ನೆಟ್ಟಿಗರು ಮಾತನಾಡಿದ್ದಾರೆ.

ಲೈಂಗಿಕ ಕಿರುಕುಳ ಆರೋಪದ ಮೇಲೆ ನಟ ಜಯಸೂರ್ಯ,ನಿರ್ದೇಶಕ ರಂಜಿತ್‌ ಅವರ ಮೇಲೆ ಈಗಾಗಲೇ ದೂರು ದಾಖಲಾಗಿದೆ. ಈ ಆರೋಪಗಳು ಸುಳ್ಳು ಇದರ ವಿರುದ್ಧ ನಾನು ಕಾನೂನು ಹೋರಾಟವನ್ನು ಮುಂದುವರೆಸುತ್ತೇನೆ ಎಂದು ಜಯಸೂರ್ಯ ಹೇಳಿದ್ದಾರೆ.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.