Rishab Shetty: ʼಜೈ ಹನುಮಾನ್ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್ ಶೆಟ್ಟಿ?
Team Udayavani, Nov 27, 2024, 6:58 PM IST
ಹೈದರಾಬಾದ್: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ʼಕಾಂತಾರ-1ʼಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ʼಕಾಂತಾರ -1ʼ ಬಳಿಕ ರಿಷಬ್ ಟಾಲಿವುಡ್‌ಗೆ ಎಂಟ್ರಿ ಕೊಡಲಿದ್ದಾರೆ. ʼಹನುಮಾನ್ʼ ನಿರ್ದೇಶಕ ಪ್ರಶಾಂತ್ ವರ್ಮಾ (Prasanth Varma) ಅವರ ʼಜೈ ಹನುಮಾನ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಇತ್ತೀಚೆಗೆ ರಿಲೀಸ್ ಆಗಿದೆ.
ಕನ್ನಡದ ನಟ, ನಿರ್ದೇಶಕ ತೆಲುಗು ಚಿತ್ರರಂಗದ ಖ್ಯಾತ ನಿರ್ದೇಶಕನ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಕನ್ನಡದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ರಿಷಬ್ ʼಜೈ ಹನುಮಾನ್ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಟಾಲಿವುಡ್ ವಲಯದಲ್ಲಿ ಸುದ್ದಿ ಹರಿದಾಡಿದೆ.
ʼಕಾಂತಾರʼ ದ ಬಳಿಕ ಕಾಲಿವುಡ್ – ಟಾಲಿವುಡ್‌ನಲ್ಲೂ ರಿಷಬ್ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಲೇಟೆಸ್ಟ್ ವರದಿಗಳ ಪ್ರಕಾರ ರಿಷಬ್ ಶೆಟ್ಟಿ ಪೂರ್ಣ ಪ್ರಮಾಣದ ತೆಲುಗು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್ ಬ್ಯಾಟರ್
ಈ ಹಿಂದೆ ತೆಲುಗಿನಲ್ಲಿ ʼಆಕಾಶವಾಣಿʼ ಸಿನಿಮಾವನ್ನು ಮಾಡಿದ್ದ ಅಶ್ವಿನ್ ಗಂಗರಾಜು ಅವರ ಮುಂದಿನ ಸಿನಿಮಾದಲ್ಲಿ ರಿಷಬ್ ಅವರು ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಖ್ಯಾತ ನಿರ್ಮಾಣ ಸಂಸ್ಥೆ ಸಿತಾರಾ ಎಂಟರ್ಟೈನ್ಮೆಂಟ್ಸ್ ಬಂಡವಾಳ ಹಾಕಲಿದೆ. ಇದೊಂದು ಪೀರಿಯಡ್ ಡ್ರಾಮಾ ಸಿನಿಮಾ ಆಗಿರಲಿದೆ ಎಂದು ವರದಿ ತಿಳಿಸಿದೆ.
ಸಿನಿಮಾದಲ್ಲಿನ ಕಥೆ ಹೊಸತನ ಹಾಗೂ ಪಾತ್ರದಲ್ಲಿನ ಭಾವನಾತ್ಮಕ ಅಂಶ ಇಷ್ಟವಾದ ಕಾರಣ ರಿಷಬ್ ಈ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ವರದಿಯಾಗಿದೆ.
ಮುಂದಿನ ದಿನಗಳಲ್ಲಿ ಸಿನಿಮಾದ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.