Tollywood: ‘ಪುಷ್ಪ-2ʼ ಐಟಂ ಸಾಂಗ್‌ನಲ್ಲಿ ಸೊಂಟ ಬಳುಕಿಸಲಿದ್ದಾರೆ ʼಸ್ತ್ರೀ-2ʼ ನಟಿ
Team Udayavani, Oct 22, 2024, 1:28 PM IST
ಹೈದರಾಬಾದ್: ಅಲ್ಲು ಅರ್ಜುನ್ (Allu Arjun) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ʼಪುಷ್ಪ-2ʼ (Pushpa 2) ಸಿನಿಮಾ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ವರ್ಷದ ಕೊನೆಯಲ್ಲಿ ಸಿನಿಮಂದಿಗೆ ಭರ್ಜರಿ ಮನರಂಜನೆ ನೀಡುವ ನಿಟ್ಟಿನಲ್ಲಿ ʼಪುಷ್ಪ-2ʼ ರೆಡಿಯಾಗಿದೆ.
2022ರಲ್ಲಿ ತೆರೆಕಂಡ ʼಪುಷ್ಪʼ ಮೊದಲ ಭಾಗ ಪ್ಯಾನ್ ಇಂಡಿಯಾದಲ್ಲಿ ಮೋಡಿ ಮಾಡಿತ್ತು. ನಟನೆ, ಹಾಡು, ಡ್ಯಾನ್ಸ್, ಮಾಸ್ ಹೀಗೆ ಎಲ್ಲ ವಿಭಾಗದಲ್ಲೂ ಸಿನಿಮಾ ಸಖತ್ ಸದ್ದು ಮಾಡಿ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು.
ʼಪುಷ್ಪʼ ಸಿನಿಮಾ ಸದ್ದು ಮಾಡುವುದರ ಜತೆಗೆ ಅದರಲ್ಲಿ ಐಟಂ ಸಾಂಗ್ ʼಊ ಅಂಟವಾʼಗೆ ಸೊಂಟ ಬಳುಕಿಸಿದ್ದ ನಟಿ ಸಮಂತಾ (Samantha Ruth Prabhu) ಕೂಡ ಸಖತ್ ಮಿಂಚಿದ್ದರು. ಈ ಹಾಡು ಯೂಟ್ಯೂಬ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿತ್ತು.
ಇದನ್ನೂ ಓದಿ: Arunita Kanjilal: ಮದುವೆಗೂ ಮುನ್ನ ಗರ್ಭಿಣಿಯಾದ ಖ್ಯಾತ ಗಾಯಕಿ..? ಫೋಟೋಸ್ ವೈರಲ್
ʼಪುಷ್ಪ-2ʼ ಸಿನಿಮಾದಲ್ಲೂ ಇದೇ ರೀತಿಯ ಸ್ಪೆಷೆಲ್ ಹಾಡೊಂದು ಇರಲಿದೆ ಎನ್ನುವ ಮಾತು ಆರಂಭದಿಂದಲೂ ಕೇಳಿ ಬರುತ್ತಿದೆ.
ʼಅನಿಮಲ್ʼ ನಟಿ ತೃಪ್ತಿ ದಿಮ್ರಿ (Triptii Dimri) ʼಪುಷ್ಪ-2ʼ ನಲ್ಲಿ ಸ್ಪೆಷೆಲ್ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಇದೀಗ ಬಾಲಿವುಡ್‌ನ ಖ್ಯಾತ ನಟಿ ಶ್ರದ್ಧಾ ಕಪೂರ್ (Shraddha Kapoor) ʼಪುಷ್ಪ-2ʼ ನಲ್ಲಿ ಸೊಂಟ ಬಳುಕಿಸಲಿದ್ದಾರೆ ಎಂದು ವರದಿಯಾಗಿದೆ.
ʼಸ್ತ್ರೀ-2ʼ ಮೂಲಕ ತೆಲುಗು ಭಾಷಾ ವಲಯದಲ್ಲೂ ಮಿಂಚಿರುವ ಶ್ರದ್ಧಾ ಕಪೂರ್ ʼಪುಷ್ಪ-2ʼ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಬೇಕಿದೆ.
ಸುಕುಮಾರ್ ನಿರ್ದೇಶನದ ʼಪುಷ್ಪ-2ʼ ಈಗಾಗಲೇ ಎರಡು ಹಾಡುಗಳನ್ನು ರಿಲೀಸ್ ಮಾಡಿ ನಿರೀಕ್ಷೆ ಹೆಚ್ಚಿಸಿದೆ. ಅಲ್ಲು ಅರ್ಜುನ್ ಜತೆ ರಶ್ಮಿಕಾ ಮಂದಣ್ಣ, ಫಾಹದ್ ಫಾಸಿಲ್, ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ಸುನಿಲ್ ಮುಂತಾದವರು ನಟಿಸಿದ್ದಾರೆ.
ಇದೇ ಡಿಸೆಂಬರ್ 6 ರಂದು ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್
Car Crash: ಕಾರು ರೇಸ್ ತರಬೇತಿ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ!
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ
Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ
Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.