ಮುಂಗಡ ಹಣ ಪಡೆದು ವಾಪಸ್ ನೀಡದ ಆರೋಪ: ನಟ ಸಿಂಬು ವಿರುದ್ದ ಖ್ಯಾತ ನಿರ್ಮಾಪಕನಿಂದ ದೂರು

Team Udayavani, May 11, 2024, 1:00 PM IST

ಮುಂಗಡ ಹಣ ಪಡೆದು ವಾಪಸ್ ನೀಡದ ಆರೋಪ: ನಟ ಸಿಂಬು ವಿರುದ್ದ ಖ್ಯಾತ ನಿರ್ಮಾಪಕನಿಂದ ದೂರು

ಚೆನ್ನೈ: ಕಾಲಿವುಡ್‌ ನಟ ಸಿಲಂಬರಸನ್ ಟಿಆರ್‌ ಕಮಲ್‌ ಹಾಸನ್‌ ಅವರ ʼಥಗ್‌ ಲೈಫ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸೆಟ್‌ ನಲ್ಲಿನ ಅವರ ಲುಕ್‌ ಗಮನ ಸೆಳೆದಿದೆ.

ಈ ನಡುವೆ ಸಿಲಂಬರಸನ್ ಅವರ ವಿರುದ್ಧ ನಿರ್ಮಾಪಕರೊಬ್ಬರು ಆರೋಪವೊಂದನ್ನು ಮಾಡಿ ದೂರು ನೀಡಿದ್ದಾರೆ. ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ವೆಲ್ಸ್ ಪ್ರೊಡಕ್ಷನ್‌ನ ಇಶಾರಿ ಕೆ ಗಣೇಶ್ ಅವರು ನಿರ್ಮಾಪಕರ ಮಂಡಳಿಗೆ ನಟನ ವಿರುದ್ಧ ದೂರು ನೀಡಿದ್ದಾರೆ.

ನಟ ಸಿಂಬು ಅವರು ನಿರ್ಮಾಪಕ ಇಶಾರಿ ಅವರ ಸಿನಿಮಾದಲ್ಲಿ ನಟಿಸುವುದಾಗಿ ಹೇಳಿದ್ದರು. ಈ ಸಿನಿಮಾಕ್ಕೆ ʼಕರೋನಾ ಕುಮಾರ್ʼ ಎನ್ನುವ ಟೈಟಲ್‌ ಇಡಲಾಗಿತ್ತು. ಸಿನಿಮಾವನ್ನು ಗೋಕುಲ್ ಎನ್ ಕೃಷ್ಣ ಅವರನ್ನು ನಿರ್ದೇಶನ ಮಾಡಲಿದ್ದರು. ಇನ್ನೇನು ಸೆಟ್ಟೇರಬೇಕೆನ್ನುವಾಗಲೇ ಸಿಂಬು ಸಿನಿಮಾದಿಂದ ಹಿಂದೆ ಸರಿದಿದ್ದಾರೆ. ಅವರ ಈ ನಿರ್ಧಾರದ ಹಿಂದಿನ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ: Kantara Prequel: ಕೋಟಿ ಕೋಟಿ ಕೊಟ್ಟು ʼಕಾಂತಾರ -1ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ಪ್ರೈಮ್

ಸಿನಿಮಾದಲ್ಲಿ ನಟಿಸುವುದಾಗಿ ನಿರ್ಮಾಪಕರಿಂದ ಸಿಂಬು ಮುಂಗಡವಾಗಿ ಹಣವನ್ನು ಪಡೆದುಕೊಂಡಿದ್ದರು. ಆದರೆ ಸಿನಿಮಾದಿಂದ ಹಿಂದೆ ಸರಿದ ಬಳಿಕವೂ ಮುಂಗಡ ಹಣವನ್ನು ವಾಪಾಸ್‌ ನೀಡದ ಕಾರಣದಿಂದಾಗಿ ನಿರ್ಮಾಪಕ ಇಶಾರಿ ಅವರು ಮಂಡಳಿಗೆ ದೂರು ನೀಡಿದ್ದಾರೆ.

ಸಿಂಬು ಮುಂಗಡ ಪಾವತಿಯನ್ನು ಹಿಂದಿರುಗಿಸುವವರೆಗೆ ಅಥವಾ ಅದೇ ನಿರ್ಮಾಪಕರ ಮತ್ತೊಂದು ಸಿನಿಮಾದಲ್ಲಿ ಕಾಣಿಸಿಕೊಳ್ಳುವವರೆ ಇತರ ಪ್ರಾಜೆಕ್ಟ್‌ ನಲ್ಲಿ ಭಾಗಿಯಾಗಲು ಅನುಮತಿಸಬಾರದು ಎಂದು ನಿರ್ಮಾಪಕರು ಒತ್ತಾಯಿಸಿದ್ದಾರೆ.

ಸದ್ಯ ಸಿಂಬು ಕಮಲ್ ಹಾಸನ್ ಅವರ ಮುಂದಿನ ಚಿತ್ರ ʼಥಗ್ ಲೈಫ್‌ʼನ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಇದಾದ ಬಳಿಕ ಅವರು ʼSTR 48ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.