ಕಾಲಿವುಡ್ ಶಿವಕಾರ್ತಿಕೇಯನ್ ʼSK23ʼ ಸಿನಿಮಾಕ್ಕೆ ನಾಯಕಿಯಾದ ಕನ್ನಡದ ರುಕ್ಮಿಣಿ ವಸಂತ್
Team Udayavani, Feb 15, 2024, 3:16 PM IST
ಚೆನ್ನೈ: ಕಾಲಿವುಡ್ ನಟ ಶಿವ ಕಾರ್ತಿಕೇಯನ್ ಅವರ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಎಆರ್ ಮುರಗದಾಸ್ ನಿರ್ದೇಶನದ ಈ ಸಿನಿಮಾಕ್ಕೆ ತಾತ್ಕಾಲಿಕವಾಗಿ ʼʼಎಸ್ ಕೆ 23” ಎನ್ನುವ ಟೈಟಲ್ ಇಡಲಾಗಿದೆ.
ನಟ ಶಿವ ಕಾರ್ತಿಕೇಯನ್ ಅವರು ʼ ಅಯಾಲನ್ʼ ಸಿನಿಮಾ ಹಿಟ್ ಆದ ಖುಷಿಯಲ್ಲಿದ್ದಾರೆ. ಈ ನಡುವೆ ಅವರ ಮುಂದಿನ ಸಿನಿಮಾದ ಮುಹೂರ್ತ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಸಿನಿಮಾದ ನಿರ್ದೇಶಕರು, ಸಂಗೀತ ನಿರ್ದೇಶಕರು, ಪ್ರಧಾನ ಪಾತ್ರ ವರ್ಗದವರು ಉಪಸ್ಥಿತಿಯಲ್ಲಿದ್ದರು.
ಎಆರ್ ಮುರಗದಾಸ್ – ಶಿವ ಕಾರ್ತಿಕೇಯನ್ ಅವರ ಸಿನಿಮಾದಲ್ಲಿ ನಾಯಕಿ ಯಾರಾಗಲಿದ್ದಾರೆ ಎನ್ನುವ ಬಗ್ಗೆ ಕುತೂಹಲವಿತ್ತು. ʼಸೀತಾ ರಾಮಂʼ ಬೆಡಗಿ ಮೃಣಾಲ್ ಠಾಕೂರು ಅವರು ಶಿವ ಕಾರ್ತಿಕೇಯನ್ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗಿತ್ತು. ಇದೀಗ ಮುಹೂರ್ತ ಕಾರ್ಯಕ್ರಮದಲ್ಲಿ ನಾಯಕಿ ಯಾರೆನ್ನುವುದನ್ನು ರಿವೀಲ್ ಮಾಡಲಾಗಿದೆ.
ಈಗಾಗಲೇ ಕನ್ನಡದಲ್ಲಿ ʼಸಪ್ತಸಾಗರದಾಚೆ ಎಲ್ಲೋ” (ಸೈಡ್ -1,2) ಹಾಗೂ ʼಬಾನದಾರಿಯಲ್ಲಿʼ ಸಿನಿಮಾದಲ್ಲಿ ನಟಿಸಿ ಗಮನ ಸೆಳೆದಿರುವ ರುಕ್ಮಿಣಿ ವಸಂತ್ ಅವರು ಕಾರ್ತಿಕೇಯನ್ ಸಿನಿಮಾದಲ್ಲಿ ನಾಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
“ವಿಶೇಷ ಪಯಣ ಇಂದಿನಿಂದ ಆರಂಭಗೊಳ್ಳುತ್ತಿದೆ” ಎಂದು ನಟ ಕಾರ್ತಿಕೇಯನ್ ಬರೆದುಕೊಂಡಿದ್ದಾರೆ.
ಈ ಹಿಂದೆ ಕಾರ್ತಿಕೇಯನ್ ಅವ ʼಡಾನ್ʼ ಸಿನಿಮಾಕ್ಕೆ ಸಂಗೀತ ನೀಡಿದ್ದ ಅನಿರುದ್ಧ್ ರವಿಚಂದರ್ ಈ ಸಿನಿಮಾಕ್ಕೆ ಮ್ಯೂಸಿಕ್ ನೀಡಲಿದ್ದಾರೆ.
ಮಾಸ್ ಕಥೆಯನ್ನು ಸಿನಿಮಾ ಒಳಗೊಂಡಿದೆ ಎನ್ನಲಾಗಿದೆ. ಪ್ರಮುಖ ಪಾತ್ರದಲ್ಲಿ ಮೋಹನ್ ಲಾಲ್ ಮತ್ತು ವಿದ್ಯುತ್ ಜಮ್ವಾಲ್ ಅವರು ಕೂಡ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ ಇದುವರೆಗೆ ಇದು ಅಧಿಕೃತವಾಗಿಲ್ಲ.
Very happy to have these amazing and talented people on board. Together, something special on your way🎉@Siva_Kartikeyan @rukminitweets@anirudhofficial @dhilipaction @SudeepElamon @sreekar_prasad #ArunVenjaramoodu@teamaimpr pic.twitter.com/WFYhi2DPAx
— A.R.Murugadoss (@ARMurugadoss) February 15, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್
Car Crash: ಕಾರು ರೇಸ್ ತರಬೇತಿ ವೇಳೆ ನಟ ಅಜಿತ್ ಕುಮಾರ್ ಕಾರು ಅಪಘಾತ!
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.