Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ ನಿರೀಕ್ಷಣಾ ಜಾಮೀನು ಮಂಜೂರು
ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್ ಮತ್ತಷ್ಟು ವಿಸ್ತರಿಸಿತ್ತು.
Team Udayavani, Nov 19, 2024, 12:21 PM IST
ತಿರುವನಂತಪುರಂ: ಅತ್ಯಾ*ಚಾರ ಆರೋಪ ಎದುರಿಸುತ್ತಿದ್ದ ಮಾಲಿವುಡ್ ಹಿರಿಯ ನಟ ಸಿದ್ದಿಕ್ (Malayalam actor Siddique) ಅವರಿಗೆ ಮಂಗಳವಾರ (ನ.19ರಂದು) ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ನ್ಯಾ. ಬೇಲಾ ಎಂ.ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠ, ವಿಚಾರಣೆಗೆ ಸಹಕರಿಸುವಂತೆ ಮತ್ತು ಬಂಧನದಿಂದ ರಕ್ಷಣೆ ನೀಡಿ ಸೆ.30ರಂದು ಮಧ್ಯಂತರ ಆದೇಶ ನೀಡಿತ್ತು.
ಇತ್ತೀಚೆಗೆ ನಟನ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದು ಕೇಳಿದ್ದರು. ಈ ಕಾರಣದಿಂದ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್ ಮತ್ತಷ್ಟು ವಿಸ್ತರಿಸಿತ್ತು.
ಮಂಗಳವಾರ ಸುಪ್ರೀಂ ಕೋರ್ಟ್ ನಟ ಸಿದ್ದಿಕ್ ಅವರಿಗೆ ಕೆಲ ಷರತ್ತುಗಳೊಂದಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಹಿರಿಯ ನಟ ತನ್ನ ಪಾಸ್‌ಪೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಬೇಕು. ತನಿಖಾಧಿಕಾರಿಗೆ ತನಿಖೆಗೆ ಸಹಕರಿಸಬೇಕೆಂದು ಸೂಚನೆ ನೀಡಿದೆ.
ದೂರುದಾರೆ 13 ಜನರ ವಿರುದ್ಧ ಕಿರುಕುಳ ಆರೋಪವನ್ನು 2018ರಲ್ಲಿ ಫೇಸ್ ಬುಕ್‌ನಲ್ಲಿ ಮಾಡಿರುವುದು ನ್ಯಾಯಾಲಯ ಗಮನಿಸಿದೆ. 8 ವರ್ಷಗಳ ಕಾಲ ಪೊಲೀಸರನ್ನು ಯಾಕೆ ಸಂಪರ್ಕಿಸಿಲ್ಲ. ಹೇಮಾ ಸಮಿತಿಗೂ ಯಾಕೆ ತಿಳಿಸಿಲ್ಲ ಎಂದು ಕೋರ್ಟ್ ಪ್ರಶ್ನಿಸಿದೆ.
ಪ್ರಕರಣವೇನು?:
2016ರ ಜನವರಿ 28ರಂದು ತಿರುವನಂತಪುರಂನ ಹೊಟೇಲ್‌ನಲ್ಲಿ ಸಿನಿಮಾವೊಂದರ ಪ್ರಿವ್ಯೂ ಶೋ ಬಳಿಕ ಸಿದ್ದೀಕ್ ತನ್ನ ಮೇಲೆ ಅತ್ಯಾ*ಚಾರವೆಸಗಿದ್ದರು ಎಂದು ನಟಿಯೊಬ್ಬರು ಆರೋಪಿಸಿದ್ದರು. ಪೊಲೀಸರು ನಟನ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.
ಈ ಆರೋಪದ ಬಳಿಕ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (Malayalam Movie Artistes) ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಈ ಪ್ರಕರಣ ಸಂಬಂಧ ಬಂಧನದ ಭೀತಿಯಲ್ಲಿದ್ದ ಸಿದ್ದೀಕ್ ಹೈಕೋರ್ಟ್‌ಗೆ ಸೆ.24 ರಂದು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
MUST WATCH
ಹೊಸ ಸೇರ್ಪಡೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ
Lockdown Days: ಲಾಕ್‌ಡೌನ್ ಎಂಬ ದಪ್ಪಕ್ಷರದಲ್ಲಿ ಬರೆದ ಇತಿಹಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.