Ali Khan Tughlaq: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣ; ಖ್ಯಾತ ನಟ ಮನ್ಸೂರ್ ಅಲಿ ಪುತ್ರ ಬಂಧನ
Team Udayavani, Dec 4, 2024, 2:36 PM IST
ಚೆನ್ನೈ: ಮಾದಕ ವಸ್ತು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ತಮಿಳು ನಟರೊಬ್ಬರ ಪುತ್ರನನ್ನು ಬಂಧಿಸಲಾಗಿದೆ.
ತಮಿಳು ನಟ ಮನ್ಸೂರ್ ಅಲಿ ಖಾನ್ (Tamil actor Mansoor Ali) ಅವರ ಪುತ್ರ ಅಲಿ ಖಾನ್ ತುಘಲಕ್ (Ali Khan Tughlaq) ಅವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಮನ್ಸೂರ್ ಅಲಿ ಪುತ್ರ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಂಗಳವಾರ (ಡಿ.3ರಂದು) ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಬುಧವಾರ (ಡಿ.4ರಂದು) ಬೆಳಿಗ್ಗೆ ತಿರುಮಂಗಲಂ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಈ ಪ್ರಕರಣದಲ್ಲಿ ಈ ಹಿಂದೆ 10 ಮಂದಿಯನ್ನು ಬಂಧಿಸಲಾಗಿದೆ. ಇದರಲ್ಲಿ ಕಾಲೇಜು ವಿದ್ಯಾರ್ಥಿಗಳು ಕೂಡ ಇದ್ದಾರೆ.
ಇದೀಗ ತುಘಲಕ್ ಮತ್ತು ಇತರ ಮೂವರನ್ನು ಬಂಧಿಸಲಾಗಿದೆ. ಸದ್ಯ ಅವರೆಲ್ಲರೂ ಪೊಲೀಸ್ ಕಸ್ಟಡಿಯಲ್ಲಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ನಟ ಮನ್ಸೂರ್ ಅಲಿ ಈ ವರ್ಷ ವಿವಾದಗಳಿಂದಲೇ ಸುದ್ದಿಯಾಗಿದ್ದಾರೆ. ನಟಿ ತ್ರಿಷಾ ಜತೆ ಬೆಡ್ ರೂಮ್ ಸೀನ್ ಮಾಡುವ ಆಸೆಯಿದೆ ಎನ್ನುವ ಮಾತು ಕಾಲಿವುಡ್ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ಮನ್ಸೂರ್ ಅಲಿ ಕ್ಷಮೆಯಾಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ʼಪುಷ್ಪ-2ʼ ಬಳಿಕ ಅಲ್ಲು ಅರ್ಜುನ್ ಮುಂಬರುವ ಸಿನಿಮಾಗಳು ಯಾವುವು?
Bollywood: ಇಮ್ತಿಯಜ್ ಅಲಿ ಸಿನಿಮಾದಲ್ಲಿ ಮಾಲಿವುಡ್ ಸ್ಟಾರ್ ಫಾಹದ್; ನಾಯಕಿ ಯಾರು?
Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್ ಲಿಸ್ಟ್
Tollywood: ‘ಪುಷ್ಪ-3ʼ ಟೈಟಲ್ ರಿವೀಲ್.. ವಿಲನ್ ಆಗಿ ಅಬ್ಬರಿಸಲಿದ್ದಾರೆ ಈ ಖ್ಯಾತ ನಟ
Silk Smitha – Queen of the South; ಬರುತ್ತಿದೆ ಸಿಲ್ಕ್ ಸ್ಮಿತಾ ಬಯೋಪಿಕ್
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.