Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
Team Udayavani, Nov 16, 2024, 10:50 AM IST
ಚೆನ್ನೈ: ‘ಒರು ಕಿಟೈನ್ ಕರುಣಾ ಮನು’ ಮತ್ತು ‘ಸತ್ಯತ್ರಿಕ’ ಚಿತ್ರಗಳನ್ನು ನಿರ್ದೇಶಿಸಿದ್ದ ಖ್ಯಾತ ತಮಿಳು ನಿರ್ದೇಶಕ ಸುರೇಶ್ ಸಂಗಯ್ಯ ಶುಕ್ರವಾರ(ನ15) ರಂದು ನಿಧನರಾಗಿದ್ದಾರೆ. ಅವರಿಗೆ 41 ವರ್ಷ ವಯಸ್ಸಾಗಿತ್ತು.
ಕಾಮಾಲೆ ಕಾಯಿಲೆಯಿಂದ ಬಳಲುತ್ತಿದ್ದ ಸುರೇಶ್ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಚೆನ್ನೈ ನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.
ಇತ್ತೀಚಿಗೆ ಯೋಗಿ ಬಾಬು ಅಭಿನಯದ ‘ಕೆನಾಥ ಕಾನೋಮ್’ ಚಿತ್ರವನ್ನು ನಿರ್ದೇಶಿಸಿದ್ದ ಸುರೇಶ್ ಸಂಗಯ್ಯ ಚಿತ್ರ ಬಿಡುಗಡೆಗೆ ಮುನ್ನವೇ ಅನಾರೋಗ್ಯದಿಂದ ಇಹಲೋಕ ತ್ಯಜಿಸಿರುವುದು ತಮಿಳು ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಿದೆ.
ಸುರೇಶ್ ಸಂಗಯ್ಯ ವಿಭಿನ್ನ ಕಥಾಹಂದರವುಳ್ಳ ಚಿತ್ರಗಳನ್ನು ನಿರ್ದೇಶಿಸುವ ಮೂಲಕ ತಮಿಳು ಸಿನಿಮಾ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ನಿರ್ದೇಶಕ ಮಣಿಕಂದನ್ ಅವರ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಸುರೇಶ್ ಮುಂದೆ ತಮ್ಮದೇ ಶೈಲಿಯಲ್ಲಿ ಗ್ರಾಮೀಣ ಚಿತ್ರಗಳನ್ನು ನಿರ್ದೇಶಿಸಲು ಆರಂಭಿಸಿದರು.
ಸುರೇಶ್ ಸಂಗಯ್ಯ ಅವರ ಚೊಚ್ಚಲ ನಿರ್ದೇಶನದ 2017 ರಲ್ಲಿ ತೆರೆ ಕಂಡ ‘ಒರು ಕಿಟೈನ್ ಕರುಣಾ ಮನು’ ಚಿತ್ರವು ವಿಮರ್ಶಕರ ಮೆಚ್ಚುಗೆ ಗಳಿಸುವ ಮೂಲಕ ಹಲವು ಪ್ರಶಸ್ತಿಗಳನ್ನೂ ಗೆದ್ದುಕೊಂಡಿತು. ಆ ನಂತರ 2023ರಲ್ಲಿ ಸುರೇಶ್ ಸಂಗಯ್ಯ ಅವರು ‘ಸತ್ಯ ತ್ರಿಕೆ’ ಚಿತ್ರವನ್ನು ನಿರ್ದೇಶಿಸಿದ್ದರು.
ಸುರೇಶ್ ಸಂಗಯ್ಯ ಅವರು ಯೋಗಿ ಬಾಬು ಅವರ ‘ಕೆನಾಥ ಕಾನೋಮ್’ ಎಂಬ ಚಿತ್ರವನ್ನು ನಿರ್ದೇಶಿಸಿದರು. ಈ ಚಿತ್ರದಲ್ಲಿ ಜಾರ್ಜ್ ಮೇರಿಯನ್, ರಾಚೆಲ್ ರೆಬೆಕಾ ಮತ್ತು ರಾಮಕೃಷ್ಣನ್ ನಟಿಸಿದ್ದಾರೆ. ಚಿತ್ರದ ಶೂಟಿಂಗ್ ಕೂಡ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ ಮತ್ತು ಶೀಘ್ರದಲ್ಲೇ OTT ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಗೆ ಸಿದ್ಧವಾಗುತ್ತಿತ್ತು ಎಂದು ಹೇಳಲಾಗಿದೆ.
ಸುರೇಶ್ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ: Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಥಿಯೇಟರ್‌ನಲ್ಲಿ ಇರುವಾಗಲೇ ಟಿವಿಯಲ್ಲಿ ಪ್ರಸಾರ ಕಂಡ ʼಗೇಮ್ ಚೇಜರ್ʼ: ಚಿತ್ರತಂಡ ಶಾಕ್
ಐದನೇ ಬಾರಿ ಜತೆಯಾದ ಧನುಷ್ – ವೆಟ್ರಿಮಾರನ್; ತೆರೆಮೇಲೆ ʼಕೆಜಿಎಫ್ʼ ರಿಯಲ್ ಕಹಾನಿ?
ಅಧಿಕೃತವಾಗಿ ಅನೌನ್ಸ್ ಆಯಿತು ʼಜೈಲರ್ -2ʼ; Tiger Ka Hukum.. ಎನ್ನುತ್ತಲೇ ಮಿಂಚಿದ ತಲೈವಾ
Kollywood: ರೀ ರಿಲೀಸ್ ಆಗಲಿದೆ ರಜಿನಿಕಾಂತ್ ಐಕಾನಿಕ್ ಚಿತ್ರ ʼಬಾಷಾʼ
Tollywood: ರಿಲೀಸ್ ಆಗಿ ಒಂದೇ ದಿನದಲ್ಲಿ ʼಡಾಕು ಮಹಾರಾಜ್ʼ HD ಪ್ರಿಂಟ್ ಲೀಕ್
MUST WATCH
ಹೊಸ ಸೇರ್ಪಡೆ
ಶೂನ್ಯ ಇಂಗಾಲದ ಗುರಿ: ಜಾಗತಿಕ ಸಹಭಾಗಿತ್ವ ಅಗತ್ಯ
Bigg Boss ಫಿನಾಲೆ ಯಾವಾಗ?; ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? – ಇಲ್ಲಿದೆ ಮಾಹಿತಿ
ಆಗಸ್ಟ್ 15ಕ್ಕೆ ತೆರೆಗೆ ಬರಲಿದೆ ಅರ್ಜುನ್ ಜನ್ಯಾ ನಿರ್ದೇಶನದ ʼ45ʼ ಸಿನಿಮಾ
Mumbai Unsafe; ಒಂದು ಘಟನೆಯಿಂದ ಹೀಗೆ ಹೇಳುವುದು ಸರಿಯಲ್ಲ: ಸಿಎಂ ಫಡ್ನವಿಸ್
RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್ ಆಫ್ ಸ್ಪಿನ್ನರ್ ಎಂಟ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.