Singer Mangli: ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ; ಅಪಾಯದಿಂದ ಪಾರು
Team Udayavani, Mar 18, 2024, 1:03 PM IST
ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ ಸತ್ಯವತಿ ರಾಥೋಡ್(ಮಂಗ್ಲಿ) ಅವರ ಕಾರು ಅಪಘಾತವಾಗಿರುವ ಘಟನೆ ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಂಶಾಬಾದ್‌ನ ತೊಂಡುಪಲ್ಲಿ ಸೇತುವೆ ಬಳಿ ಭಾನುವಾರ (ಮಾ. 17 ರಂದು) ರಾತ್ರಿ ನಡೆದಿರುವುದು ವರದಿಯಾಗಿದೆ.
ಆಧ್ಯಾತ್ಮಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ವಾಪಾಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಂಗ್ಲಿ ಅವರ ಕಾರಿಗೆ ಟ್ರಕ್(ಡಿಸಿಎಂ ವಾಹನ) ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಗಾಯಕಿ ಮಂಗ್ಲಿ ಮತ್ತು ಇತರ ಇಬ್ಬರು ಪ್ರಯಾಣಿಕರಾದ ಮೇಘರಾಜ್ ಮತ್ತು ಮನೋಹರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿ ಆಗಿದೆ.
ಮಂಗ್ಲಿ ಅವರ ಕಾರಿಗೆ ವಾಹನ ಹಿಂದಿನಿಂದ ಗುದ್ದಿದೆ. ಟ್ರಕ್ ಚಾಲಕ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿದ್ದಾರೆ.
ಅಪಘಾತದ ಬಳಿಕ ಮಂಗ್ಲಿ ಅವರು ʼಮಾ ಸೂಪರ್ ಸಿಂಗರ್ ಪಾರ್ಟಿʼಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರಿಗೆ ಯಾವುದೇ ಗಾಯಗಳು ಆಗದೆ ಇರುವುದು ಕಂಡು ಬಂದಿದೆ ಎಂದು ವರದಿ ಆಗಿದೆ.
ಕನ್ನಡ, ತೆಲುಗಿನಲ್ಲಿ ಜನಪ್ರಿಯ ಆಗಿರುವ ಮಂಗ್ಲಿ ‘ರಾಮುಲೂ ರಾಮುಲಾ’, ‘ಜ್ವಾಲಾ ರೆಡ್ಡಿ’, ‘ಹೂ ಅಂತೀಯಾ..’’,`ಕಣ್ಣೇ ಅದಿರಿಂದಿ, ‘ರಾ ರಾ ರಕ್ಕಮ್ಮ’ ಮತ್ತು ‘ಜಿಂದಾ ಬಂದಾ’ ಇತರೆ ಸೂಪರ್ ಹಿಟ್ ಹಾಡುಗಳನ್ನು ಹಾಡಿದ್ದಾರೆ.
Singer #Mangli has a lucky escape after minor road accident near Tondupally, Shamshabad. Incident occurred post-midnight Friday while she was returning from Kanha Shanti Vanam. No injuries reported, only minor damage to the car. Police filed case under IPC Section 279.#Hyderabad pic.twitter.com/rFWejE3rU7
— Informed Alerts (@InformedAlerts) March 18, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.