Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Team Udayavani, Nov 6, 2024, 11:07 AM IST
ಚೆನ್ನೈ: ದಳಪತಿ ವಿಜಯ್ (Thalapathy Vijay) ಅವರ ವೃತ್ತಿ ಜೀವನದ ಕೊನೆಯ ಸಿನಿಮಾವೆಂದೇ ಹೇಳಲಾಗುತ್ತಿರುವ ‘ದಳಪತಿ 69’ (Thalapathy 69) ರಿಲೀಸ್ ಗೂ ಮುನ್ನ ಕಾಲಿವುಡ್ ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ.
ವಿಜಯ್ ಸಿನಿಮಾಗಳು ಬಾಕ್ಸಾಫೀಸ್ ನಲ್ಲಿ ಚಿನ್ನದ ಮೊಟ್ಟೆಯಿಡುವ ಕೋಳಿಯಂತೆ ಕೋಟಿ ಕೋಟಿ ಕಮಾಯಿ ಮಾಡುತ್ತದೆ. ಹೀಗಾಗಿ ವಿಜಯ್ ಕೇಳಿದ್ದಷ್ಟು ಸಂಭಾವನೆಯನ್ನು ನಿರ್ಮಾಪಕರು ಅವರ ಜೇಬಿಗೆ ಹಾಕುತ್ತಾರೆ.
ಹೆಚ್. ವಿನೋದ್ (H. Vinoth) ಅವರು ನಿರ್ದೇಶನ ಮಾಡಲಿರುವ ಈ ಸಿನಿಮಾಕ್ಕೆ ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ (Kvn Productions) ಬಂಡವಾಳ ಹಾಕಲಿದೆ.
ಇದನ್ನೂ ಓದಿ: Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
ಸಿನಿಮಾದಲ್ಲಿ ನಟಿಸಲು ’ಮಾಸ್ಟರ್’ ಬರೋಬ್ಬರಿ 275 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನುವ ಮಾತಗಳು ಕೇಳಿ ಬರುತ್ತಿದೆ. ಈ ಮಾತಿನ ನಡುವೆಯೇ ಇದೀಗ ಸಿನಿಮಾದ ವಿದೇಶಿ ಹಂಚಿಕೆ ಹಕ್ಕು ಬರೋಬ್ಬರಿ 78 ಕೋಟಿ ರೂಪಾಯಿಗೆ ಮಾರಾಟ ಆಗಿದೆ ಎಂದು ವರದಿಯಾಗಿದೆ.
ವಿಜಯ್ ಅವರ ‘ಗೋಟ್’ ಸಿನಿಮಾವನ್ನು ವಿತರಣೆ ಮಾಡಿದ್ದ ಫಾರ್ಸ್ ಫಿಲ್ಮ್ಸ್ ‘ದಳಪತಿ 69’ ಸಿನಿಮಾದ ವಿದೇಶಿ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ ಎಂದು ವರದಿಯಾಗಿದೆ.
2025ರ ಅಕ್ಟೋಬರ್ ನಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ಈಗಾಗಲೇ ಚಿತ್ರತಂಡ ಅನೌನ್ಸ್ ಮಾಡಿದೆ.
ಚಿತ್ರತಂಡ ಒಂದೊಂದೇ ಪಾತ್ರವರ್ಗವನ್ನು ರಿವೀಲ್ ಮಾಡುತ್ತಿದೆ. ಬಾಲಿವುಡ್ ನಟ ಬಾಬಿ ಡಿಯೋಲ್ (Bobby Deol), ಪೂಜಾ ಹೆಗ್ಡೆ(Pooja Hegde), ಮಮಿತಾ ಬೈಜು (Mamitha Baiju), ಪ್ರಕಾಶ್ ರಾಜ್ (Prakash Raj) ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
ಪೊಂಗಲ್ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್ ಆಗಲಿರುವ ಚಿತ್ರಗಳ ಪಟ್ಟಿ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನು ಮಂಜೂರು
Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್ ಲೀಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Udupi: ಇನ್‌ಸ್ಟಾಗ್ರಾಂ ಲಿಂಕ್ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ
Bajpe: ಗುರುಪುರ ಪೇಟೆಯ ಹಲವೆಡೆ ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.