OTT Release: ಸದ್ದಿಲ್ಲದೆ ಓಟಿಟಿಗೆ ಬಂತು ʼತಂಗಲಾನ್‌ʼ: ಎಲ್ಲಿ ವೀಕ್ಷಿಸಬಹುದು?

Team Udayavani, Dec 10, 2024, 11:21 AM IST

OTT Release: ಸದ್ದಿಲ್ಲದೆ ಓಟಿಟಿಗೆ ಬಂತು ʼತಂಗಲಾನ್‌ʼ: ಎಲ್ಲಿ ವೀಕ್ಷಿಸಬಹುದು?

ಚೆನ್ನೈ: ಕಾಲಿವುಡ್‌ ನಲ್ಲಿ ಈ ವರ್ಷ ಮೆಚ್ಚುಗೆ ಪಡೆದ ಸಾಲಿಗೆ ಸೇರಿದ ಚಿಯಾನ್‌ ವಿಕ್ರಮ್ (Actor Vikram) ʼತಂಗಲಾನ್ʼ(Thangalaan) ಚಿತ್ರ ಸದ್ದಿಲ್ಲದೆ ಓಟಿಟಿಗೆ ಬಂದಿದೆ.

ವಿಕ್ರಮ್‌ ವೃತ್ತಿ ಬದುಕಿನ ವಿಶೇಷ ಸಿನಿಮಾಗಳಲ್ಲಿʼತಂಗಲಾನ್ʼ ಕೂಡ ಒಂದು. ʼಕೆಜಿಎಫ್‌ʼ ಅಖಾಡದಲ್ಲಿದ್ದ ಪೂರ್ವಜರ ಕಥೆಯ  ʼತಂಗಲಾನ್‌ʼ ಚಿನ್ನ ಹುಡುಕುವ ರೋಚಕ ಕಥೆಯನ್ನು ಹೇಳಿತ್ತು. ಆಗಸ್ಟ್‌ 15ರಂದು ಥಿಯೇಟರ್‌ನಲ್ಲಿ ತೆರೆಕಂಡ ʼತಂಗಲಾನ್‌ʼ ಯಶಸ್ವಿಯಾಗಿ ಪ್ರದರ್ಶನ ಕಂಡಿತ್ತು.

ರಿಲೀಸ್‌ ಆಗಿ ಒಂದಷ್ಟು ದಿನ ಥಿಯೇಟರ್‌ನಲ್ಲಿದ್ದ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲೂ ಸಮಾಧಾನ ತಂದುಕೊಟ್ಟ ಕಲೆಕ್ಷನ್‌ ಮಾಡಿತು. ಓಟಿಟಿ ರಿಲೀಸ್‌ಗೆ ಕೆಲವೊಂದು ಅಡೆತಡೆಗಳು ಉಂಟಾಗಿತ್ತು. ಮೊದಲಿಗೆ ಹಣಕಾಸಿನ ತೊಂದರೆ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಅದನ್ನು ನಿರ್ಮಾಪಕರು ಅಲ್ಲಗೆಳೆದಿದ್ದರು.

ಇದಾದ ಬಳಿಕ ದೀಪಾವಳಿ ಹಬ್ಬಕ್ಕೆ ಓಟಿಟಿಗೆ ಬರಲಿದೆ ಎನ್ನುವ ಮಾತು ಕೇಳಿಬಂದಿತ್ತು. ಇದೇ ವೇಳೆ ಚಿತ್ರವು ವೈಷ್ಣವ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ ಎಂದು ಉಲ್ಲೇಖಿಸಿ ತಿರುವಳ್ಳುವರ್‌ನ ವ್ಯಕ್ತಿಯೊಬ್ಬರು ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಕಾರಣದಿಂದ ಮದ್ರಾಸ್ ಹೈಕೋರ್ಟ್ ಚಿತ್ರದ ಒಟಿಟಿ ಬಿಡುಗಡೆಗೆ ತಡೆ ಹೇರಿತ್ತು. ಅರ್ಜಿಯ ವಿಚಾರಣೆಯ ಬಳಿಕ ಬ್ಯಾನ್‌ ತೆರೆಗೊಳಿಸಿತು.

ಇದೀಗ ಸದ್ದಿಲ್ಲದೆ ಸಿನಿಮಾ ಓಟಿಟಿಗೆ ಬಂದಿದೆ. ತಮಿಳು, ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಮಂಗಳವಾರ (ಡಿ.10 ರಂದು) ನೆಟ್‌ಫ್ಲಿಕ್ಸ್ ನಲ್ಲಿ ಸ್ಟ್ರೀಮ್‌ ಆಗಿದೆ.

ಬಾಕ್ಸ್‌ ಆಫೀಸ್‌ ವಿಚಾರಕ್ಕೆ ಬಂದರೆ ವರ್ಲ್ಡ್‌ ವೈಡ್‌ ಸಿನಿಮಾ 72 ಕೋಟಿ ರೂ. ಗಳಿಸಿತು. ಚಿತ್ರತಂಡದ ನಿರೀಕ್ಷೆಗೆ ತಕ್ಕ ಕಮಾಯಿ ಮಾಡದಿದ್ರೂ ಚಿತ್ರ ಸ್ಕ್ರೀನ್‌ ಪ್ಲೇ, ನಟನೆಯಿಂದ ಅನೇಕರಿಂದ ಮೆಚ್ಚುಗ ಪಡೆದಿತ್ತು.

ಪಾ ರಂಜಿತ್‌ ನಿರ್ದೇಶನದ ಈ ಸಿನಿಮಾದಲ್ಲಿ ವಿಕ್ರಮ್‌ ಜತೆಗೆ ಪಾರ್ವತಿ ತಿರುವೋತ್ತು, ಪಶುಪತಿ, ಮಾಳವಿಕಾ ಮೋಹನನ್, ಡೇನಿಯಲ್ ಕ್ಯಾಲ್ಟಗಿರೋನ್, ಆನಂದಸಾಮಿ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.