ಹುಟ್ಟುಹಬ್ಬ ಸಂಭ್ರಮಕ್ಕೆ ನಿವಾಸದತ್ತ ಬಂದ ಫ್ಯಾನ್ಸ್: ಕೈಬೀಸಿ ಪ್ರೀತಿ ತೋರಿಸಿದ ಅಲ್ಲು
Team Udayavani, Apr 8, 2024, 9:09 AM IST
ಹೈದರಾಬಾದ್: ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಅವರಿಗಿಂದು 42ನೇ ಹುಟ್ಟುಹಬ್ಬದ ಸಂಭ್ರಮ. ಮಧ್ಯರಾತ್ರಿಯಿಂದಲೇ ಅವರ ಅಭಿಮಾನಿಗಳ ನಟನ ನಿವಾಸದ ಮುಂದೆ ಜಮಾವಣೆಗೊಂಡಿದ್ದು, ನೆಚ್ಚಿನ ನಟನಿಗೆ ವಿಶ್ ಮಾಡಲು ಸಾಲು ಸಾಲಾಗಿ ಬಂದಿದ್ದಾರೆ.
ಸ್ಟೈಲಿಸ್ಟ್ ಅಲ್ಲು ಅರ್ಜುನ್ ಅವರಿಗೆ ಟಾಲಿವುಡ್ ನಲ್ಲಿ ಮಾತ್ರವಲ್ಲದೆ, ಇತರೆ ಸಿನಿರಂಗದಿಂದಲೂ ಅಪಾರ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳು ಇತರೆ ಭಾಷೆಗೂ ಡಬ್ ಆಗಿ ರಿಲೀಸ್ ಆಗುತ್ತವೆ. ಟಿವಿಯಲ್ಲಿ ಬೇರೆ ಭಾಷೆಗೂ ಡಬ್ ಆಗಿ ಅವರ ಸಿನಿಮಾಗಳು ಪ್ರಸಾರವಾಗುತ್ತವೆ. ಆ ನಿಟ್ಟಿನಲ್ಲಿ ಅಲ್ಲು ಅರ್ಜುನ್ ಅವರ ಫ್ಯಾನ್ ಫಾಲೋವಿಂಗ್ ಎಲ್ಲೆಡೆಯೂ ಇದೆ.
ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡಲು ಫ್ಯಾನ್ಸ್ ಗಳು ಮಧ್ಯರಾತ್ರಿಯಿಂದಲೇ ಅವರ ನಿವಾಸದ ಮುಂದೆ ಬಂದು ಸೇರಿದ್ದಾರೆ. ಅಲ್ಲು ಪರ ಘೋಷಣೆ ಕೂಗುತ್ತಾ ನಟನನನ್ನು ನೋಡಲು ಸಾಲು ಸಾಲಾಗಿ ನಿಂತಿದ್ದಾರೆ. ತನ್ನ ಅಭಿಮಾನಿಗಳನ್ನು ನೋಡಿ ಅವರತ್ತ ಕೈಬೀಸಿರುವ ಅಲ್ಲು ಅರ್ಜುನ್ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನೊಂದೆಡೆ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ-2ʼ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ. ಇದಕ್ಕಾಗಿ ಕಳೆದ ಎರಡು ಮೂರು ದಿನಗಳಿಂದ ʼಪುಷ್ಪ-2 ಟೀಸರ್ʼ ಟ್ವಿಟರ್ ನಲ್ಲಿ ಟ್ರೆಂಡ್ ಆಗಿದೆ.
Happy birthday Icon StAAr @alluarjun pic.twitter.com/IOnJ6ogSnU
— Arehoo_official (@tweetsbyaravind) April 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollywood: ಕಾರ್ತಿಕ್ ಸುಬ್ಬರಾಜ್ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್ ಆಗಿದೆ ಮಾಸ್
Tollywood: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್ ಬೌನ್ಸರ್ ಬಂಧನ
Sukumar: ಸಿನಿಮಾರಂಗಕ್ಕೆ ಸುಕುಮಾರ್ ಗುಡ್ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್
Allu Arjun: ಕಾಲ್ತುಳಿತ ಪ್ರಕರಣ- ಹೈದರಾಬಾದ್ ಪೊಲೀಸರಿಂದ ನಟ ಅಲ್ಲು ಅರ್ಜುನ್ ವಿಚಾರಣೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.