Tollywood: ಮುಂದಿನ ತಿಂಗಳು ರಶ್ಮಿಕಾ – ದೇವರಕೊಂಡ ನಿಶ್ಚಿತಾರ್ಥ? – ವರದಿ
Team Udayavani, Jan 8, 2024, 12:16 PM IST
ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ – ನಟಿ ರಶ್ಮಿಕಾ ಮಂದಣ್ಣ ಕಳೆದ ಕೆಲ ವರ್ಷಗಳಿಂದ ಆತ್ಮೀಯರಾಗಿ ಕಾಣಿಸಿಕೊಳ್ಳುತ್ತಿರುವುದು ಗೊತ್ತೇ ಇದೆ. ಇಬ್ಬರು ಡೇಟಿಂಗ್ ನಲ್ಲಿದ್ದಾರೆ ಎನ್ನುವ ವಿಚಾರ ಹರಿದಾಡುತ್ತಿರುವುದು ಹೊಸತೇನಲ್ಲ.
ʼಗೀತಾ ಗೋವಿಂದಂʼ, ʼಡಿಯರ್ ಕಾಮ್ರೆಡ್ʼ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ ಬಳಿಕ ರಶ್ಮಿಕಾ – ದೇವರಕೊಂಡ ಸ್ನೇಹ ಆತ್ಮೀಯತೆಗೆ ತಿರುಗಿದೆ. ದೀಪಾವಳಿ ಹಬ್ಬವನ್ನು ರಶ್ಮಿಕಾ ದೇವರಕೊಂಡ ಜೊತೆ ಆಚರಿಸಿಕೊಂಡಿದ್ದರು ಎನ್ನಲಾಗಿತ್ತು. ಇದಲ್ಲದೆ ಇಬ್ಬರು ಜೊತೆಯಾಗಿ ವಿದೇಶದಲ್ಲಿ ತಿರುಗಾಡಿದ್ದಾರೆ ಎನ್ನುವ ಮಾತುಗಳು ಸಿನಿರಂಗದಲ್ಲಿ ಹರಿದಾಡಿದೆ.
ಇದೀಗ ರಶ್ಮಿಕಾ – ದೇವರಕೊಂಡ ಇಬ್ಬರು ತಮ್ಮ ಸ್ನೇಹದ ಹಂತವನ್ನು ಸಂಬಂಧಕ್ಕೆ ತಿರುಗಿಸಲಿದ್ದಾರೆ ಎನ್ನಲಾಗಿದೆ. ಇಬ್ಬರು ಎಂಗೇಜ್ ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂದು ʼನ್ಯೂಸ್ 18 ತೆಲುಗುʼ ವರದಿ ಮಾಡಿದೆ.
ಮುಂದಿನ ತಿಂಗಳು ಅಂದರೆ ಫಬ್ರವರಿ ಎರಡನೇ ವಾರದಲ್ಲಿ ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.
ಆದರೆ ಈ ಬಗ್ಗೆಅಧಿಕೃತವಾಗಿ ಯಾವ ಮಾಹಿತಿಯೂ ಹೊರಬಿದ್ದಿಲ್ಲ. ರಶ್ಮಿಕಾ – ದೇವರಕೊಂಡ ಇಬ್ಬರು ಬೆಸ್ಟ್ ಫ್ರೆಂಡ್ಸ್ ಎಂದು ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ರಶ್ಮಿಕಾ ಅವರ ʼಅನಿಮಲ್ʼ ಸಿನಿಮಾ ಹಿಟ್ ಆಗಿದೆ. ಸಿನಿಮಾದ ಸಕ್ಸಸ್ ಸಂಭ್ರಮದಲ್ಲಿ ರಶ್ಮಿಕಾ ಬೋಲ್ಡ್ & ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದರು.
ಇನ್ನು ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.