Vijay Deverakonda: ರಶ್ಮಿಕಾ ಜೊತೆ ಎಂಗೇಜ್ ಮೆಂಟ್.. ಕೊನೆಗೂ ಮೌನ ಮುರಿದ ದೇವರಕೊಂಡ
Team Udayavani, Jan 20, 2024, 10:22 AM IST
ಹೈದರಾಬಾದ್: ಕಳೆದ ಕೆಲ ದಿನಗಳಿಂದ ನಟ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ ನಡುವಿನ ಆತ್ಮೀಯತೆ ಬಗ್ಗೆ ಸಿನಿವಲಯದಲ್ಲಿ ನಾನಾ ರೀತಿಯಲ್ಲಿ ಸುದ್ದಿ ಹರಿದಾಡುತ್ತಿದೆ.
‘ಗೀತಾ ಗೋವಿಂದಂ’ , ‘ಡಿಯರ್ ಕಾಮ್ರೆಡ್’ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ ಬಳಿಕ ರಶ್ಮಿಕಾ – ದೇವರಕೊಂಡ ಬೆಸ್ಟ್ ಫ್ರೆಂಡ್ಸ್ ಆಗಿದ್ದಾರೆ. ಇವರಿಬ್ಬರು ರಿಲೇಷನ್ ಶಿಪ್ ನಲ್ಲಿದ್ದಾರೆ ಎನ್ನುವ ಮಾತುಗಳು ಕಳೆದ ಕೆಲ ಸಮಯದಿಂದ ಹರಿದಾಡುತ್ತಿದೆ.
ಪಾರ್ಟಿ,ಹಾಲಿ ಡೇಸ್ ಹಾಗೂ ಹಬ್ಬದ ಸಂದರ್ಭದಲ್ಲಿ ವಿದೇಶ ಸುತ್ತಿ ಜೊತೆಯಾಗಿ ಡಿನ್ನರ್ ಮಾಡಿದ್ದರು. ರಿಲೇಷನ್ ಶಿಪ್ ಬಗ್ಗೆ ಪ್ರಶ್ನೆ ಮಾಡಿದಾಗ ನಾವಿಬ್ಬರು ಬೆಸ್ಟ್ ಫ್ರೆಂಡ್ಸ್ ಎಂದಿದ್ದರು.
ಇತ್ತೀಚೆಗೆ ರಶ್ಮಿಕಾ – ದೇವರಕೊಂಡ ಪೆಬ್ರವರಿ ತಿಂಗಳಿನಲ್ಲಿ ಎಂಗೇಜ್ ಮೆಂಟ್ ಮಾಡಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದೀಗ ಈ ಬಗ್ಗೆ ಸ್ವತಃ ದೇವರಕೊಂಡ ಅವರೇ ಸ್ಪಷ್ಟನೆ ನೀಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, “ಫೆಬ್ರವರಿಯಲ್ಲಿ ನಾನು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿಲ್ಲ ಅಥವಾ ಮದುವೆಯಾಗುತ್ತಿಲ್ಲ. ಪ್ರತಿ ಎರಡು ವರ್ಷಗಳಿಗೊಮ್ಮೆ ನನ್ನನ್ನು ಮದುವೆಯಾಗಲು ಪತ್ರಿಕೆಗಳು ಬಯಸುತ್ತಿರುವಂತೆ ಭಾಸವಾಗುತ್ತಿದೆ. ನಾನು ಪ್ರತಿ ವರ್ಷ ಈ ವದಂತಿಯನ್ನು ಕೇಳುತ್ತೇನೆ” ಎಂದು ಹೇಳಿದ್ದಾರೆ.
ಇತ್ತೀಚೆಗೆ ರಶ್ಮಿಕಾ ಅವರ ʼಅನಿಮಲ್ʼ ಸಿನಿಮಾ ಹಿಟ್ ಆಗಿದೆ. ಇನ್ನು ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ಐಶ್ವರ್ಯ ರಜನಿಕಾಂತ್, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್
Rishab Shetty: ʼಜೈ ಹನುಮಾನ್ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್ ಶೆಟ್ಟಿ?
Kollywood: ಲೇಡಿ ಸೂಪರ್ ಸ್ಟಾರ್ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್ ದಾಖಲು
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Keerthy Suresh: ಮದುವೆ ಸುದ್ದಿ ಬೆನ್ನಲ್ಲೇ ಆಂಟೋನಿ ಜತೆ ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.