Kollywood: ವಿಜಯ್ ಮೇಲೆ ಚಪ್ಪಲಿ ಎಸೆತ; ದೂರು ದಾಖಲಿಸಿದ ವಿಜಯ್ ಮಕ್ಕಳ್ ಇಯಕ್ಕಂ ಸದಸ್ಯ
Team Udayavani, Jan 4, 2024, 4:26 PM IST
ಚೆನ್ನೈ: ಇತ್ತೀಚೆಗೆ ನಟ ದಳಪತಿ ವಿಜಯ್ ಅವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಚಪ್ಪಲಿ ಎಸೆತ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಈ ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ಡಿಸೆಂಬರ್ 28 ರಂದು ಖ್ಯಾತ ನಟ-ರಾಜಕಾರಣಿ ವಿಜಯಕಾಂತ್ ಅವರ ಅಂತ್ಯಕ್ರಿಯೆಯಲ್ಲಿ ದಳಪತಿ ವಿಜಯ್ ಭಾಗವಹಿಸಿದ್ದರು. ವಿಜಯ್ ವಿಜಯಕಾಂತ್ ಅವರ ಪತ್ನಿ ಹಾಗೂ ಮಕ್ಕಳಿಗೆ ಧೈರ್ಯ ತುಂಬಿ ಕಾರಿನತ್ತ ವಾಪಾಸ್ ಆಗುತ್ತಿದ್ದರು. ಇದೇ ವೇಳೆ ಅಭಿಮಾನಿಗಳು ವಿಜಯ್ ಸುತ್ತ ಬಂದಿದ್ದಾರೆ. ಕಾರಿನೊಳಗೆ ಹೋಗುವ ವೇಳೆ ಯಾರೋ ಒಬ್ಬರು ವಿಜಯ್ ಯತ್ತ ಚಪ್ಪಲಿ ಎಸೆದಿದ್ದಾರೆ. ಚಪ್ಪಲಿ ವಿಜಯ್ ಅವರ ಮೈಯ ಬಳಿಯೇ ಹಾರಿ ಬಿದ್ದಿದೆ.
ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಇದರಿಂದ ವಿಜಯ್ ಅವರ ಅಭಿಮಾನಿಗಳಲ್ಲಿ ಬೇಸರ ಮನೆಮಾಡಿತು. ಇದೀಗ ಈ ಘಟನೆಗೆ ಕಾರಣಿಕರ್ತನಾದ ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ.
ವಿಜಯ್ ಮಕ್ಕಳ್ ಇಯಕ್ಕಂ ಪಕ್ಷದ ಅವರ ದಕ್ಷಿಣ ಚೆನ್ನೈ ಜಿಲ್ಲಾ ಮುಖ್ಯಸ್ಥ ಕೆ. ಅಪ್ಪನು ಅವರು, ಕೊಯಂಬೆಡು ಪೊಲೀಸ್ ಠಾಣೆಯಲ್ಲಿ ವಿಜಯ್ ಅವರ ಮೇಲೆ ಚಪ್ಪಲಿ ಎಸೆದ ಘಟನೆಯಿಂದ ಅಭಿಮಾನಿಗಳಲ್ಲಿ ಬೇಸರ ಮನೆಮಾಡಿದೆ. ಆದಷ್ಟು ಬೇಗ ವ್ಯಕ್ತಿಯನ್ನು ಪತ್ತೆ ಹಚ್ಚಿ ಶಿಕ್ಷೆ ನೀಡಬೇಕೆಂದು ದೂರಿನಲ್ಲಿ ಹೇಳಿದ್ದಾರೆ.
ವಿಜಯ್ – ವಿಜಯಕಾಂತ್ ಎಸ್.ಎ. ಚಂದ್ರಶೇಖರ್ ಅವರ ʼ ಸೆಂಟೂರ ಪಾಂಡಿʼ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದರಿಂದ ವಿಜಯ್ ಕೆರಿಯರ್ ಗೆ ದೊಡ್ಡ ಮುನ್ನಡೆ ಸಿಕ್ಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2
Tulu cinema; ಕೋಸ್ಟಲ್‌ನಲ್ಲೀಗ ಸಿನೆಮಾ ಹಂಗಾಮಾ!
SSMB29: ರಾಜಮೌಳಿ – ಮಹೇಶ್ ಬಾಬು ಸಿನಿಮಾದ ಲೀಡ್ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?
Video: ಜೈಲಿನಿಂದ ಅಲ್ಲು ಅರ್ಜುನ್ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.