Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್ ಐಪಿಎಸ್ ಅಧಿಕಾರಿಯಾಗಿ ವಿಶಾಲ್ ನಟನೆ?
Team Udayavani, May 5, 2024, 2:32 PM IST
ಚೆನ್ನೈ: ಒಂದು ಕಾಲದಲ್ಲಿ ಐಪಿಎಸ್ ಅಧಿಕಾರಿಯಾಗಿ, ಖಡಕ್ ಪೊಲೀಸ್ ಆಗಿ ಕರ್ತವ್ಯ ನಿಭಾಯಿಸಿದ್ದ ಕೆ.ಅಣ್ಣಾಮಲೈ ಸದ್ಯ ರಾಜಕೀಯ ಅಖಾಡದಲ್ಲಿ ನಿರತರಾಗಿದ್ದಾರೆ.
ಐಪಿಎಲ್ ಅಧಿಕಾರಿಯಾಗಿ, ಪೊಲೀಸ್ ಇಲಾಖೆಯಲ್ಲಿ ತನ್ನ ಕಾರ್ಯಾವೈಖರಿಯಿಂದ ʼಕರ್ನಾಟಕ ಪೊಲೀಸ್ ಸಿಂಗಂʼ ಎಂದೇ ಖ್ಯಾತರಾಗಿದ್ದರು.
1984ರ ಜೂ.4ರಂದು ಹುಟ್ಟಿದ ಅಣ್ಣಾಮಲೈ ಮೂಲತಃ ತಮಿಳುನಾಡಿನ ಕೊಯಮತ್ತೂರಿನವರು. 2011ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಆದ ಅವರು, ಕಾರ್ಕಳ ಉಪವಿಭಾಗದ ಎಎಸ್ಪಿಯಾಗಿ 2011ರಲ್ಲಿ ವೃತ್ತಿ ಆರಂಭಿಸಿದ ಅವರು, 2013ರಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದರು. ಬಳಿಕ ಅಲ್ಲಿಂದ ಚಿಕ್ಕಮಗಳೂರು ಎಸ್ಪಿಯಾಗಿ ಖಡಕ್ ಆಫೀಸರ್ ಆಗಿ ಗಮನ ಸೆಳೆದಿದ್ದರು.
2020 ರಲ್ಲಿ ರಾಜೀನಾಮೆ ನೀಡಿ, ರಾಜಕೀಯ ಕ್ಷೇತ್ರಕ್ಕೆ ಪ್ರವೇಶ ಪಡೆದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿತ್ತು.
ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿರುವ ಅವರು ಸದ್ಯ ತಮಿಳುನಾಡು, ಕೊಯಮತ್ತೂರು ಬಿಜೆಪಿ ಅಭ್ಯರ್ಥಿಯಾಗಿ ಅವರು ಲೋಕಸಭೆ ಚುನಾವಣೆಯ ಕಣದಲ್ಲಿದ್ದಾರೆ.
ಈ ನಡುವೆ ಅಣ್ಣಾಮಲೈ ಅವರ ಬಯೋಪಿಕ್ ವಿಚಾರ ಕಾಲಿವುಡ್ ವಲಯದಲ್ಲಿ ಹರಿದಾಡಿದೆ. ಅಣ್ಣಾಮಲೈ ಅವರ ಆರಂಭಿಕ ಜೀವನ ಹಾಗೂ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡ ಅವರ ವೃತ್ತಿ ಜೀವನದ ಸುತ್ತ ಸಿನಿಮಾ ಬರಲಿದೆ ಎನ್ನಲಾಗುತ್ತಿದೆ.
ಈ ಸಿನಿಮಾದಲ್ಲಿ ನಟ ವಿಶಾಲ್ ಅವರು ಅಣ್ಣಾಮಲೈ ಅವರ ಪಾತ್ರವನ್ನು ಮಾಡಲಿದ್ದಾರೆ ಎನ್ನಲಾಗುತ್ತಿದೆ. ಕಾಲಿವುಡ್ ನಲ್ಲಿ ಈ ಸುದ್ದಿ ಹರಿದಾಡಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಎಲ್ಲೂ ಕೂಡ ಮಾಹಿತಿ ಹೊರಬಿದ್ದಿಲ್ಲ.
ಇತ್ತೀಚೆಗೆ ʼರತ್ನಂʼ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ವಿಶಾಲ್, ರಾಜಕೀಯಕ್ಕೆ ಬರುತ್ತಾರೆ ಎನ್ನುವ ಸುದ್ದಿ ತಮಿಳುನಾಡಿನಲ್ಲಿ ಹರಿದಾಡಿತ್ತು. ಅವರು ಬಿಜೆಪಿ ಸೇರುತ್ತಾರೆ ಎನ್ನಲಾಗುತ್ತಿತ್ತು. ಆದರೆ ಅವರು ಇದಕ್ಕೆ ಸ್ಪಷ್ಟನೆ ನೀಡಿ, 2026 ರ ಚುನಾವಣೆಗೆ ರಾಜಕೀಯಕ್ಕೆ ಬರುವುದಾಗಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.