Sangeeth Sivan: ಮಾಲಿವುಡ್, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Team Udayavani, May 8, 2024, 7:20 PM IST
ಕೊಚ್ಚಿ/ ಮುಂಬಯಿ: ಮಾಲಿವುಡ್ ಹಾಗೂ ಬಾಲಿವುಡ್ ಸಿನಿರಂಗದ ಖ್ಯಾತ ನಿರ್ದೇಶಕ ಸಂಗೀತ್ ಶಿವನ್(65) ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಅವರು ಇತ್ತೀಚೆಗೆ ಮುಂಬಯಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ(ಮೇ.8 ರಂದು) ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿ ಆಗಿದೆ.
ಬಾಲಿವುಡ್ ರಿತೇಶ್ ದೇಶಮುಖ್ ಅವರ ನಿಧನದ ಬಗ್ಗೆ ಮಾಹಿತಿ ನೀಡಿದ್ದು,ಅವರ ನಿಧನಕ್ಕೆ ಸಂತಾಪ ಸೂಚಿಸಿ, ವಿಷಯವನ್ನು ಹಂಚಿಕೊಂಡಿದ್ದಾರೆ.
ಮಾಲಿವುಡ್ ಹಾಗೂ ಬಾಲಿವುಡ್ ನಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದರು, ರಘುವರನ್ ಮತ್ತು ಸುಕುಮಾರನ್ ಅಭಿನಯದ ‘ವ್ಯೂಹಂ’ ಸಿನಿಮಾ ಅವರ ನಿರ್ದೇಶನದ ಮೊದಲ ಸಿನಿಮಾವಾಗಿತ್ತು. ಮೋಹನ್ ಲಾಲ್ ಅವರೊಂದಿಗೆ ಮಾಡಿದ ‘ಯೋಧ’, ‘ಗಂಧರ್ವಂ’ ಮತ್ತು ‘ನಿರ್ಣಯಂ’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿತ್ತು. ʼಯೋಧʼ ಮೂಲಕ ಮಾಲಿವುಡ್ ನಲ್ಲಿ ಅವರು ಖ್ಯಾತಿಗಳಿಸಿದ್ದರು.
ಅವರು ಅಮೀರ್ ಖಾನ್ ನಟಿಸಿದ ಆದಿತ್ಯ ಭಟ್ಟಾಚಾರ್ಯ ಅವರ ‘ರಾಖ್’ ಸಿನಿಮಾವನ್ನು ಸಹ-ನಿರ್ಮಾಣ ಮಾಡುವ ಮೂಲಕ ಬಿಟೌನ್ ಗೆ ಪ್ರವೇಶ ಮಾಡಿದ್ದರು.
ಇದಲ್ಲದೆ ಬಾಲಿವುಡ್ ನಲ್ಲಿ ಜೋರ್ (1998), ‘ಚುರಾ ಲಿಯಾ ಹೈ ತುಮ್ನೆ’, ‘ಕ್ಯಾ ಕೂಲ್ ಹೈ ಹಮ್’, ‘ಅಪ್ನಾ ಸಪ್ನಾ ಮನಿ ಮನಿ’ ಏಕ್: ದಿ ಪವರ್ ಆಫ್ ಒನ್ (2009), ಕ್ಲಿಕ್ (2010) ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. 2013 ರಲ್ಲಿ ‘ಯಮ್ಲಾ ಪಾಗ್ಲಾ ದೀವಾನಾ 2’ ಬಾಲಿವುಡ್ ಗೆ ಕಂಬ್ಯಾಕ್ ಮಾಡಿದ್ದರು.
1993 ರಲ್ಲಿ ಬಂದ ಮಲಯಾಳಂ ʼಜಾನಿʼ ಎನ್ನುವ ಅವರ ಸಿನಿಮಾಕ್ಕೆ ಕೇರಳ ಸ್ಟೇಟ್ ಫಿಲ್ಮ್ ಅವಾರ್ಡ್ ನಲ್ಲಿ ಅತ್ಯುತ್ತಮ ಮಕ್ಕಳ ಸಿನಿಮಾ ಪ್ರಶಸ್ತಿ ಸಿಕ್ಕಿತ್ತು.
ಸಂಗೀತ್ ಅವರು ರಾಷ್ಟ್ರ ಪ್ರಶಸ್ತಿ ವಿಜೇತ ಛಾಯಾಗ್ರಾಹಕ-ನಿರ್ದೇಶಕ ಸಂತೋಷ್ ಶಿವನ್ ಮತ್ತು ಹೆಸರಾಂತ ಚಲನಚಿತ್ರ ನಿರ್ಮಾಪಕ ಸಂಜೀವ್ ಶಿವನ್ ಅವರ ಹಿರಿಯ ಸಹೋದರರಾಗಿದ್ದರು. ಇವರು ಪತ್ನಿ ಜಯಶ್ರೀ ಮತ್ತು ಮಕ್ಕಳಾದ ಸಜನಾ ಮತ್ತು ಶಾಂತನು ಅವರನ್ನು ಅಗಲಿದ್ದಾರೆ.
Deeply saddened and shocked to know that Sangeeth Sivan Sir is no more. As a newcomer all you want is someone to believe in you and take a chance.. can’t thank him enough for Kya Kool Hai Hum & Apna Sapna Money Money. Soft spoken, gentle and a wonderful human being. Am heart… pic.twitter.com/kvTkFJmEXx
— Riteish Deshmukh (@Riteishd) May 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.