ಇಂದು ರಿಲೀಸ್ ಆಗಲೇ ಇಲ್ಲ ಕೋಟಿಗೊಬ್ಬ : ಸುದೀಪ್ ಸರ್ ಗೆ ಸತ್ಯ ಗೊತ್ತಿದೆ ಎಂದ ಸೂರಪ್ಪ ಬಾಬು
Team Udayavani, Oct 14, 2021, 12:13 PM IST
ಬೆಂಗಳೂರು: ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಆಗದ ಕಾರಣ ಅಭಿಮಾನಿಗಳಲ್ಲಿ ನಟ ಕಿಚ್ಚಾ ಸುದೀಪ್ ಕ್ಷಮೆ ಕೇಳಿದ್ದಾರೆ. ಟ್ವಿಟ್ಟರ್ ನಲ್ಲಿ ಕ್ಷಮೆಯಾಚಿಸಿರುವ ಸುದೀಪ್, ಈಗಾಗಲೇ ಥಿಯೇಟರ್ಗಳ ಬಳಿ ಆಗಮಿಸಿರುವ ಎಲ್ಲ ಅಭಿಮಾನಿಗಳಿಗೂ ಶೋ ತಡವಾದ ಬಗ್ಗೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ಥಿಯೇಟರ್ ನಲ್ಲಿ ಸಿನಿಮಾ ಇದೆ.. ಆದರೆ ತಾಂತ್ರಿಕ ಸಮಸ್ಯೆಯಿಂದ ಸಿನಿಮಾ ತೋರಿಸಲು ಆಗುತ್ತಿಲ್ಲ ಎಂದಿದ್ದಾರೆ.
ಟ್ವಿಟ್ಟರ್ ನಲ್ಲಿ ಅಭಿಮಾನಿಗಳಿಗೆ ಮನವಿ ಮಾಡಿದ ಸುದೀಪ್
ಸದ್ಯ ಚಿತ್ರಮಂದಿರಗಳ ಬಳಿ ಬಂದಿರುವ ಅಭಿಮಾನಿಗಳಿಗೂ ಶೋ ತಡವಾದ ಬಗ್ಗೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ಥಿಯೇಟರ್ ನಲ್ಲಿ ಸಿನಿಮಾ ಇದೆ.. ಆದರೆ ತಾಂತ್ರಿಕ ಸಮಸ್ಯೆಯಿಂದ ಸಿನಿಮಾ ತೋರಿಸಲು ಆಗುತ್ತಿಲ್ಲ. ಕೆಲವರ ಬೇಜವಾಬ್ದಾರಿಯಿಂದ ಈ ರೀತಿ ಆಗಿದೆ. ಸಿನಿಮಾ ಮತ್ತೆ ಯಾವಾಗ ಪ್ರದರ್ಶನ ಆಗುತ್ತೆ ಅನ್ನೋದನ್ನ ಮತ್ತೆ ನಾನು ನಿಮಗೆ ತಿಳಿಸುತ್ತೇನೆ.
ಹೊಸ ಸಮಯ ತಿಳಿಸುವುದು ನನ್ನ ಕರ್ತವ್ಯ ಅಲ್ಲಿಯವೆಗೂ ನೀವೆಲ್ಲ ತಾಳ್ಮೆಯಿಂದ ಇರಿ. ಸಿನಿಮಾ ರಿಲೀಸ್ ಆಗಿಲ್ಲ ಅಂತ ಥಿಯೇಟರ್ ಗಳಿಗೆ ಹಾನಿ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಇನ್ನು ಕೆಲವರು ಮಾತನಾಡುವ ಹಾಗೆ ಇವತ್ತಿನ ಎಲ್ಲಾ ಶೋಗಳನ್ನು ರದ್ದು ಮಾಡಲಾಗಿದೆ. ನಾಳೆ ಎಂದಿನಂತೆ ಸಿನಿಮಾ ರಿಲೀಸ್ ಆಗುತ್ತದೆ ಎಂದಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಸಿನಿಮಾ ನಿರ್ಮಾಪದ ಸೂರಪ್ಪ ಬಾಬು ಸಿನಿಮಾ ತಡವಾಗಿ ರಿಲೀಸ್ ಆಗಿರುವ ಹಿಂದೆ ನನ್ನ ತಪ್ಪಿಲ್ಲ. ಸುದೀಪ್ ಸರ್ ಗೆ ಎಲ್ಲಾ ಸತ್ಯ ಗೊತ್ತಿದೆ ಎಂದಿದ್ದಾರೆ.
A note to all my friends at the theaters . pic.twitter.com/UY8Nst9WjL
— Kichcha Sudeepa (@KicchaSudeep) October 14, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.