![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
Team Udayavani, Jan 29, 2025, 1:09 PM IST
ಮಂಗಳೂರು: ರೋಹನ್ ಕಾರ್ಪೋರೆಶನ್ ಅರ್ಪಿಸುವ, ವೈಭವ್ ಫ್ಲಿಕ್ಸ್, ಮ್ಯಾಂಗೋ ಪಿಕಲ್ ಎಂಟರ್ಟೈನ್ ಮೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್. ಫಿಲ್ಸ್ಮ್ – ಹರಿಪ್ರಸಾದ್ ರೈ ಅವರ ಸಹಯೋಗದಲ್ಲಿ ಆನಂದ್ ಕುಂಪಲ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ʼಮಿಡಲ್ ಕ್ಲಾಸ್ ಫ್ಯಾಮಿಲಿʼ ತುಳು ಸಿನಿಮಾ ಜನವರಿ 31 ರಂದು ಕರಾವಳಿಯಾದ್ಯಂತ ತೆರೆ ಕಾಣಲಿದೆ.
ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್ʼನ ಬಿಗ್ ಸಿನಿಮಾಸ್, ಪಿ.ವಿ.ಆರ್., ಸಿನಿಪೊಲಿಸ್, ಭಾರತ್ ಸಿನಿಮಾಸ್ ದೇರಳಕಟ್ಟೆ, ಪುತ್ತೂರು. ಪಡುಬಿದ್ರೆ, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕ ಮೊದಲಾದ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ.
‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ತಂಡದ ಬಹುತೇಕ ತಂತ್ರಜ್ಞರು, ಕಲಾವಿದರು ಇಲ್ಲಿ ದುಡಿದಿದ್ದಾರೆ. ಮುಖ್ಯವಾಗಿ ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ಸಿನಿಮಾದ ನಿರ್ದೇಶಕ ರಾಹುಲ್ ಅಮೀನ್ ಇಲ್ಲೂ ನಿರ್ದೇಶಕರಾಗಿದ್ದಾರೆ. ವಿನೀತ್ ಕುಮಾರ್ ನಾಯಕ ನಟನಾಗಿ ಸಮತಾ ಅಮೀನ್ ನಾಯಕಿಯಾಗಿ ಹಾಗೂ ತುಳು ಚಿತ್ರರಂಗದ ಮೇರು ಕಲಾವಿದರಾದ ನವೀನ್ ಡಿ.ಪಡೀಲ್.ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಚೈತ್ರಾ ಶೆಟ್ಟಿ(ಚಿಂಪು), ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಮೈಮ್ ರಾದುದಾಸ್, ರೂಪ ವರ್ಕಾಡಿ, ರವಿ ರಾಮಕುಂಜ, ಶೋಭಾ ರೈ ಕರಣ್ ಚಿಲಿಂಬಿ, ಸಾಹಿಲ್ ರೈ ಹಾಗೂ ಗೌರವ ಪಾತ್ರದಲ್ಲಿ ನವನೀತ್ ಶೆಟ್ಟಿ ಕದ್ರಿಯವರು ಅಭಿನಯಿಸಿದ್ದಾರೆ.
ಸೃಜನ್ ಕುಮಾರ್ ತೋನ್ಸೆ ಸಂಗೀತ ನೀಡಿದ್ದಾರೆ. ಛಾಯಾಗ್ರಾಹಕರಾಗಿ ವಿಷ್ಣು ಪ್ರಸಾದ್ ಪಿ. ಸಂಕಲನ ವಿಕಾಲ್ ದೇವಾಡಿಗ, ಡಿ.ಐ ಮತ್ತು ವರ್ಣ ಪ್ರಜ್ವಲ್ ಸುವರ್ಣ, ವಸ್ತ್ರ ವಿನ್ಯಾಸ ವರ್ಷ ಆಚಾರ್ಯ, ಡಿಜಿಟಲ್ ಮಾರ್ಕೆಟಿಂಗ್ ಆಯುಷ್ಮಾನ್ ಹಾಗೂ ನದೀನ್ ಕುಮಾರ್ ಶೆಟ್ಟಿ ಮತ್ತು ವಿನಾಯಕ ಆಚಾರ್ಯ ನೃತ್ಯ ಸಂಯೋಜಿಸಿದ್ದಾರೆ.
ಪವನ್ ಕುಮಾರ್, ನಿತಿನ್ ರಾಜ್ ಶೆಟ್ಟಿ, ಸುಹಾನ್ ಪ್ರಸಾದ್, ಭರತ್ ಕುಮಾರ್ ಗಟ್ಟಿ, ಗಣೇಶ್ ಕೊಲ್ಲ, ಅಶ್ವಿನಿ ರಕ್ಷಿತ್, ಕ್ಷಿತಿಂದ್ರ ಕೋಟೆಕಾರ್, ಮಿತ್ರಂಪಾಡಿ ಜಯರಾಮ್ ರೈ, ಕಿರಣ್ ಶೆಟ್ಟಿ, ಸ್ವಸ್ತಿಕ್ ಆಚಾರ್ಯ ಸಹ ನಿರ್ಮಾಪಕರಾಗಿದ್ದಾರೆ. ಪ್ರೊಡಕ್ಷನ್ ಮ್ಯಾನೇಜರ್ ಕಾರ್ತಿಕ್ ರೈ ಅಡ್ಯನಡ್ಕ, ನಿತಿನ್ ಶೇರಿಗಾರ್ ಮತ್ತು ಜೀತೇಶ್ ಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
ಈಗಾಗಲೇ ಈ ಚಿತ್ರವನ್ನು UAE ರಾಷ್ಟ್ರದಲ್ಲಿ ಮೋನಿಷ ಶರತ್ ಶೆಟ್ಟಿ, ಹರೀಶ್ ಬಂಗೇರ, ಹರೀಶ್ ಶೇರಿಗಾರ್, ಗಿರೀಶ್ ನಾರಾಯಣ್, ದೀಪಕ್ ಕುಮಾರ್ ಅವರು ಅರ್ಪಿಸಲು ಮುಂದಾಗಿದ್ದು, ದುಬೈನ ಗಮ್ಮತ್ ಕಲಾವಿದರ ಪೈಕಿ 5 ಕಲಾವಿದರಾದ ಚಿದಾನಂದ ಪೂಜಾರಿ, ಗಿರೀಶ್ ನಾರಾಯಣ್, ದೋನಿ ಕೊರೆಯ, ಅಶಾ ಕೊರೆಯ ಮತ್ತು ದೀಪ್ತಿ ದಿನ್ ರಾಜ್ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಜನವರಿ 19 ರಂದು ಯುಎಇ ಯಲ್ಲಿ ದಾಖಲೆಯ 16 ಪ್ರೀಮಿಯರ್ ಶೋ ಈಗಾಗಲೇ ಯಶಸ್ವಿಯಾಗಿ ಪ್ರದರ್ಶನ ಕಂಡಿದ್ದು ಪ್ರಶಂಸೆಗೆ ಪಾತ್ರವಾಗಿದೆ.
ಜನವರಿ 25 ರಂದು ರೋಹನ್ ಕಾರ್ಪೊರೇಷನ್’ನ ಎಂ.ಡಿ ಹಾಗೂ ಚೇರ್ ಮ್ಯಾನ್ ರೋಹನ್ ಮೊಂತೆರೋ ಅವರ ನೇತೃತ್ವದಲ್ಲಿ ಮಂಗಳೂರಿನ ಭಾರತ್ ಸಿನಿಮಾಸ್ ನಲ್ಲಿ 3 ಪ್ರೀಮಿಯರ್ ಶೋ ನಡೆದಿದ್ದು, ಪ್ರೇಕ್ಷಕರ ಜನ-ಮನ ಗೆದ್ದಿದೆ.
ಜನವರಿ 31 ರಂದು ತುಳುನಾಡಿನಾದ್ಯಂತ ಹಾಗೂ ಫೆ.7 ರಂದು UAE ಯಲ್ಲಿ ಬಿಡುಗಡೆಯಾಗುತ್ತಿದೆ ಹಾಗೂ ಫೆ.2 ರಂದು ಕೆನಡದಲ್ಲೂ ತೆರೆಕಾಣಲಿದೆ.
ಸಿನಿಮಾ ಕೌಟುಂಬಿಕ ಕಥೆಯನ್ನು ಒಳಗೊಂಡಿದೆ. ಹಾಸ್ಯಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ‘ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್’ ಸಿನಿಮಾದಂತೆ ಈ ಸಿನಿಮಾ ಕೂಡಾ ತುಳುಚಿತ್ರರಂಗದಲ್ಲಿ ದೊಡ್ಡ ಸೌಂಡ್ ಮಾಡಲಿದೆ. ಈಗಾಗಲೇ ಸಿನಿಮಾದ ಟೈಟಲ್ ಸಾಂಗ್, ಟ್ರೇಲರ್ ಸೂಪರ್ ಹಿಟ್ ಆಗಿದೆ. ಜೊತೆಗೆ ಸಿನಿಮಾದ ನಾಯಕ ನಟ ವಿನೀತ್ ಕುಮಾರ್ ಮತ್ತು ನಾಯಕಿ ನಟಿ ಸಮತಾ ಅಮೀನ್ ಜೋಡಿ ಪ್ರೇಕ್ಷಕರಿಗೆ ಮೋಡಿ ಮಾಡಲಿದೆ.
ಪತ್ರಿಕಾಗೋಷ್ಟಿಯಲ್ಲಿ ನಾಯಕ ವಿನಿತ್ ಕುಮಾರ್, ನಾಯಕಿ ಸಮತಾ ಅಮೀನ್, ಎಚ್.ಪಿ ಆರ್. ಪಿಲ್ಮ್ ನ ಹರಿಪ್ರಸಾದ್ ರೈ, ಕಿರಣ್ ಶೆಟ್ಟಿ (ಅಸೊಸಿಯೇಟ್), ನಿರ್ದೇಕ ರಾಹುಲ್ ಅಮೀನ್ ಉಪಸ್ಥಿತರಿದ್ದರು.
Tulu Films: ಚಿತ್ರೀಕರಣ ಪೂರೈಸಿದ “ಪಿಲಿಪಂಜ” ಸಿನಿಮಾ
Tulu Film: ‘ಕತೆ ಕೈಲಾಸ’ ಎಂದ ಸೂರಜ್ ಶೆಟ್ಟಿ: ಹೊಸ ಸಿನಿಮಾಗೆ ಮುಹೂರ್ತ
MovieReview; ಉತ್ತಮ ಕಥೆಗೆ ಕಾಮಿಡಿಯ ಲೇಪನ..: ಹೇಗಿದೆ ಮಿಡಲ್ ಕ್ಲಾಸ್ ಫ್ಯಾಮಿಲಿ ಸಿನಿಮಾ?
Coastalwood: ನಾಳೆ “ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ಕರಾವಳಿಯಾದ್ಯಂತ ತೆರೆಗೆ
Tulu movie: “ಪಿಲಿಪಂಜ” ತುಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
Katapadi: ಮುಕ್ಕಾಲು ಎಕರೆಯಲ್ಲಿ 8 ಟನ್ ಸೌತೆ, ಅಂಗಳದಿಂದಲೇ ಮಾರಾಟ!
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.