Tulu Movie; ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ತುಳು ಸಿನಿಮಾಕ್ಕೆ ಮುಹೂರ್ತ
Team Udayavani, Jan 19, 2025, 3:24 PM IST
ಮಂಗಳೂರು: ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು.
ಆರಂಭದಲ್ಲಿ ಸ್ಕ್ರಿಪ್ಟ್ ಪೂಜೆಯು ನೆರವೇರಿತು. ಆರ್ ಜೆ ಪ್ರೊಡಕ್ಷನ್‌ನ ರಮೇಶ್ ಆಳ್ವ ತಿಂಬರ ಮತ್ತು ಜಯಶ್ರೀ ಆರ್ ಆಳ್ವ ತಿಂಬರ ಕ್ಯಾಮೆರಾ ಚಾಲನೆಗೈದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉದ್ಯಮಿ ಸಂಜೀವ ಶೆಟ್ಟಿ ತಿಂಬರ ಮುಂಬೈ, ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ನಾರಾಯಣ ಹೆಗ್ಡೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಉದ್ಯಮಿ ಸೀತಾರಾಮ ಶೆಟ್ಟಿ ತಿಂಬರ, ನೀರಜ್ ಶೆಟ್ಟಿ, ಮಂಗಲ್ಪಾಡಿ ಪಂಚಾಯತ್ ನ ಮಾಜಿ ಸದಸ್ಯರಾದ ವಲ್ಸರಾಜ್, ಪಿಎನ್ ಆರ್ ಪ್ರೊಡಕ್ಷನ್‌ನ ರಾಘವೇಂದ್ರ ಹೊಳ್ಳ ತಿಂಬರ ಹಾಗೂ ಇತರರು ಉಪಸ್ಥಿತರಿದ್ದರು.
ನಿರ್ದೇಶಕರಾದ ರೋಷನ್ ಆರ್ ಆಳ್ವ ತಿಂಬರ, ಛಾಯಾಗ್ರಾಹಕ ಅರುಣ್ ರೈ ಪುತ್ತೂರು, ನಾಯಕ ನಟ ನವೀನ್, ನಾಯಕಿ ಅಮೃತ ಹಾಗೂ ಇತರ ಕಲಾವಿದರು ಹಾಗೂ ತಂತ್ರಜ್ಞರು ಹಾಜರಿದ್ದರು.
ಚಿತ್ರದಲ್ಲಿ ದೀಪಕ್ ರೈ ಪಾಣಾಜೆ, ಪ್ರಕಾಶ್ ತೂಮಿನಾಡು, ಪುಷ್ಪರಾಜ್ ಬೊಳ್ಳಾರ್ ಸೇರಿದಂತೆ ಹಲವು ತುಳು ಮತ್ತು ಕನ್ನಡ ಚಲನಚಿತ್ರ ತಾರೆಯರು ಬಣ್ಣ ಹಚ್ಚಲಿದ್ದಾರೆ ಎಂದು ಚಿತ್ರದ ನಿರ್ದೇಶಕ ರೋಶನ್ ಆರ್ ಆಳ್ವ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tulu Film: ‘ಕತೆ ಕೈಲಾಸ’ ಎಂದ ಸೂರಜ್ ಶೆಟ್ಟಿ: ಹೊಸ ಸಿನಿಮಾಗೆ ಮುಹೂರ್ತ
MovieReview; ಉತ್ತಮ ಕಥೆಗೆ ಕಾಮಿಡಿಯ ಲೇಪನ..: ಹೇಗಿದೆ ಮಿಡಲ್ ಕ್ಲಾಸ್ ಫ್ಯಾಮಿಲಿ ಸಿನಿಮಾ?
Coastalwood: ನಾಳೆ “ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ಕರಾವಳಿಯಾದ್ಯಂತ ತೆರೆಗೆ
MIDDLE CLASS FAMILY; ತುಳು ಸಿನಿಮಾ ಕರಾವಳಿಯಾದ್ಯಂತ ಜ.31 ರಂದು ತೆರೆಗೆ
Tulu movie: “ಪಿಲಿಪಂಜ” ತುಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Tamil Nadu: ಮೂವರು ಶಿಕ್ಷಕರಿಂದಲೇ ಶಾಲಾ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
No Spitting: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳಿದರೆ 1,000 ದಂಡ?
Jeet Adani: ಪ್ರತೀ ವರ್ಷ 500 ಅಂಗವಿಕಲರ ಲಗ್ನಕ್ಕೆ ನೆರವು… ಅದಾನಿ ಪುತ್ರ
Mudhol: ಹಣದಾಸೆಗೆ 50 ಸಾವಿರ ಕಳೆದುಕೊಂಡ ಉದ್ಯಮಿ; ಆನ್‌ಲೈನ್ ಮೂಲಕ ಹಣ ಪಡೆದು ವಂಚನೆ
Having Fun: 62ರ ಗರ್ಲ್ಫ್ರೆಂಡ್ ಜತೆ ಮೋಜು ಮಾಡುತ್ತಿರುವೆ… 69ರ ಬಿಲ್‌ಗೇಟ್ಸ್ ಹೇಳಿಕೆ