Tulu Cinema: “ಪಿಲಿಪಂಜ” ಹೊಸ ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ
Team Udayavani, Nov 1, 2024, 4:04 PM IST
ಮಂಗಳೂರು: ಎಸ್.ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ‘ಪಿಲಿಪಂಜ’ (Pilipanja) ಸಿನಿಮಾದ ಶಿರ್ಷಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳೂರಿನ ಶ್ರೀ ನಿತ್ಯಾನಂದ ಸೇವಾಶ್ರಮದಲ್ಲಿ ಇತ್ತೀಚೆಗೆ ನಡೆಯಿತು.
ಹಿರಿಯ ತುಳು ರಂಗಭೂಮಿ ಹಾಗೂ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಶೀರ್ಷಿಕೆ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ʼಪಿಲಿಪಂಜʼ ಒಂದು ವಿಭಿನ್ನ ಹಾಗೂ ಕುತೂಹಲ ಮೂಡಿಸುವ ಟೈಟಲ್. ಇದೊಂದು ವಿಭಿನ್ನ ಚಿತ್ರವಾಗಿ ಮೂಡಿ ಬರುವುದರಲ್ಲಿ ಸಂಶಯವಿಲ್ಲ. ಒಂದೊಳ್ಳೆ ಕಥೆಯೊಂದಿಗೆ ಚಿತ್ರ ತಂಡ ನಮ್ಮ ಮುಂದೆ ಬರುತ್ತಿದೆ, ತುಳುನಾಡಿನ ಜನತೆ ಈ ಚಿತ್ರವನ್ನು ಗೆಲ್ಲಿಸಿ ಕೊಡಬೇಕು. ಗುರು ನಿತ್ಯಾನಂದರ ಆಶೀರ್ವಾದ ಚಿತ್ರ ತಂಡದ ಮೇಲಿರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಿಯಾನ ಪ್ರೊಡಕ್ಷನ್ ಹೌಸ್ ನ ಪ್ರತೀಕ್ ಪೂಜಾರಿ, ಚಿತ್ರದ ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯುಷರ್ ರಮೇಶ್ ರೈ ಕುಕ್ಕುವಳ್ಳಿ, ಮುಂಬಯಿಯ ರಂಗ ನಿರ್ದೇಶಕ ಬಾಬಾ ಪ್ರಸಾದ್ ಅರಸ, ಪ್ರಕಾಶ್ ಶೆಟ್ಟಿ ಧರ್ಮನಗರ, ರಾಜೇಶ್ ಕಣ್ಣೂರು, ರಕ್ಷಣ್ ಮಾಡೂರು, ಅಕ್ಷತ್ ವಿಟ್ಲ, ಸುರೇಶ್ ಬಲ್ಮಠ,ಅಭಿಷೇಕ್ ಕುಲಾಲ್, ಚಿತ್ರದ ಸಂಕಲನಕಾರ ಶ್ರೀನಾಥ್ ಪವರ್ ಮುಂತಾದವರು ಉಪಸ್ಥಿತರಿದ್ದರು.
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ರವಿ ರಾಮಕುಂಜ, ಸುಂದರ್ ರೈ ಮಂದಾರ, ಶಿವಪ್ರಕಾಶ್ ಪೂಂಜ, ರೂಪಾಶ್ರೀ ವರ್ಕಾಡಿ, ಪ್ರಕಾಶ್ ಶೆಟ್ಟಿ ಧರ್ಮನಗರ, ರಕ್ಷಣ್ ಮಾಡೂರು, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳಾರ್ , ದಿಶಾ ರಾಣಿ ಮುಂತಾದವರು ನಟಿಸಲಿದ್ದಾರೆ.
ನವೆಂಬರ್ 7ರಿಂದ ಮಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್’
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Tulu Movie Review; ಹೇಗಿದೆ ಈ ವಾರ ತೆರೆಗೆ ಬಂದ ತುಳು ಸಿನಿಮಾ ʼದಸ್ಕತ್ʼ
Tulu Cinema: ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.