Tulu Film: ʼಮಿಡಲ್ ಕ್ಲಾಸ್ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು
Team Udayavani, Jan 11, 2025, 4:09 PM IST
ತುಳು ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ರಾಹುಲ್ ಅಮೀನ್ ನಿರ್ದೇಶನದ ʼಮಿಡಲ್ ಕ್ಲಾಸ್ ಫ್ಯಾಮಿಲಿʼ (Middle Class Family) ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಇದರ ಪ್ರಚಾರದ ಅಂಗವಾಗಿ ಚಿತ್ರತಂಡವು ಬೊಕಾ ಬೊಕಾ ಎಂಬ ಹಾಡೊಂದನ್ನು ಬಿಡುಗಡೆ ಮಾಡಿದೆ.
ಕೀರ್ತನ್ ಭಂಡಾರಿ ಅವರು ಸಾಹಿತ್ಯವಿರುವ ಬೊಕಾ ಬೊಕಾ ಹಾಡಿಗೆ ಸೃಜನ್ ಕುಮಾರ್ ತೋನ್ಸೆ ಸಂಗೀತವಿದೆ. ಸೃಜನ್ ಕುಮಾರ್ ತೋನ್ಸೆ ಅವರೊಂದಿಗೆ ಅನ್ವಿಕ್ಷಾ ದಯಾನಂದ್ ಹಾಡಿಗೆ ಧ್ವನಿಯಾಗಿದ್ದಾರೆ.
“ಹೆಲೊ ಡಾರ್ಲಿಂಗ್ ಹೌ ಆರ್ ಯು” ಎಂದು ಆರಂಭವಾಗುವ ಹಾಡಿಗೆ ಚಿತ್ರದ ನಾಯಕ ನಟ ವಿನೀತ್ ಕುಮಾರ್ ಮತ್ತು ನಟಿ ಸಮತಾ ಅಮೀನ್ ಹೆಜ್ಜೆ ಹಾಕಿದ್ದಾರೆ. ಕಲರ್ ಫುಲ್ ಸೆಟ್ ನಲ್ಲಿ ಚಿತ್ರೀಕರಣವಾಗಿರುವ ಹಾಡಿಗೆ ನವೀನ್ ಶೆಟ್ಟಿ ಕೊರಿಯೋಗ್ರಫಿ ಮಾಡಿದ್ದಾರೆ.
ಅಂದಹಾಗೆ ಮಿಡಲ್ ಕ್ಲಾಸ್ ಫ್ಯಾಮಿಲಿ ಚಿತ್ರವು ಜನವರಿ 24ರಂದು ತೆರೆಗೆ ಬರಲಿದೆ. ರಾಜ್ ಸೌಂಡ್ಸ್ ಲೈಟ್ ಎಂಬ ಯಶಸ್ವಿ ಚಿತ್ರ ನೀಡಿದ್ದ ತಂಡವು ಮಿಡಲ್ ಕ್ಲಾಸ್ ಫ್ಯಾಮಿಲಿ ಚಿತ್ರದೊಂದಿಗೆ ಬರುತ್ತಿದೆ. ಎಚ್ ಪಿಆರ್ ಫಿಲ್ಮ್ಸ್ ಹರಿಪ್ರಸಾದ್ ರೈ ಸಹಯೋಗದಲ್ಲಿ ವೈಭವ್ ಫ್ಲಿಕ್ಸ್ – ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಪ್ರಸ್ತುತ ಪಡಿಸುತ್ತಿರುವ ʼಮಿಡಲ್ ಕ್ಲಾಸ್ ಫ್ಯಾಮಿಲಿʼ ಚಿತ್ರಕ್ಕೆ ಆನಂದ್ ಎನ್ ಕುಂಪಲ ಬಂಡವಾಳ ಹೂಡಿದ್ದಾರೆ.
ರಾಹುಲ್ ಅಮೀನ್ ನಿರ್ದೇಶನದ ಚಿತ್ರದಲ್ಲಿ ವಿನೀತ್ ಕುಮಾರ್, ಸಮತಾ ಅಮೀನ್, ಅರವಿಂದ್ ಬೋಳಾರ್, ನವೀನ್ ಡಿ ಪಡೀಲ್, ಬೋಜರಾಜ್ ವಾಮಂಜೂರು ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ ಬರೆದಿದ್ದು, ವಿಷ್ಣು ಪ್ರಸಾದ್ ಅವರ ಕ್ಯಾಮರಾ ಕೈಚಳಕವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್’
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
MUST WATCH
ಹೊಸ ಸೇರ್ಪಡೆ
ಅಂದು ಪ್ರತಾಪ್ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?
New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ
Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.