Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Team Udayavani, Nov 21, 2024, 3:51 PM IST
ಪಡುಬಿದ್ರಿ: ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ ಧನರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ಸಿನಿಮಾ ನಿರ್ಮಾಣ ಮಾಡುತ್ತಿರುವ, ಶರತ್ ಪೂಜಾರಿ ಬಗ್ಗತೋಟ ನಿರ್ದೇಶನದ ಹೊಸ ತುಳು ಚಿತ್ರಕ್ಕೆ ಗುರುವಾರ (ನ.21) ಮುಹೂರ್ತ ನಡೆಯಿತು.
ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು.
ಇನ್ನೂ ಹೆಸರಿಡದ ಚಿತ್ರವು ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಮೊದಲ ಭಾಗದ ಚಿತ್ರೀಕರಣ ಮುಗಿದ ಬಳಿಕ ಟೈಟಲ್ ಪೋಸ್ಟರ್ ಬಿಡುಗಡೆ ಮಾಡುವ ಉದ್ದೇಶದಲ್ಲಿದೆ ಚಿತ್ರತಂಡ.
ನವ ನಟ ಶೋಧನ್ ಶೆಟ್ಟಿ ನಾಯಕನಾಗಿ ನಟಿಸುತ್ತಿದ್ದ, ಚಿತ್ರದಲ್ಲಿ ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ಪ್ರಸನ್ನ ಶೆಟ್ಟಿ ಬೈಲೂರು, ರಮೇಶ್ ಶೆಟ್ಟಿ, ಸೂರಜ್ ಸನಿಲ್, ನಿತೇಶ್ ಶೆಟ್ಟಿ, ಕೀರ್ತನಾ ಸಾಲಿಯಾನ್, ಶೋಭಾ ಪ್ರಿಯಾ ನಾಯರ್, ಸಂದೀಪ್ ಪೂಜಾರಿ ಬಣ್ಣ ಹಚ್ಚಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾತಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, “ತುಳು ಭಾಷೆ, ಸಂಸ್ಕೃತಿ, ಆಹಾರ ಪದ್ಧತಿಯನ್ನು ವಿಶ್ವದಗಲ ಮೆಚ್ಚಿಕೊಂಡ ಅಸಂಖ್ಯ ಜನರಿದ್ದಾರೆ. ತುಳು ಭಾಷೆಯ ಬೆಳವಣಿಗೆಗೆ ತುಳು ನಾಟಕ, ಸಿನಿಮಾ ಮತ್ತು ತುಳು ಕಲಾವಿದರು ಬಹಳಷ್ಟು ಪ್ರಯತ್ನ ಪಡುತ್ತಿದ್ದಾರೆ. ಪಡುಬಿದ್ರಿಯ ಮಹಾಗಣಪತಿ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿದರೆ ನಮ್ಮ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಈ ಸಿನಿಮಾ ಯಶಸ್ಸು ಕಾಣಲಿ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅತೀವ ಸಂತಸವಾಗುತ್ತಿದೆ” ಎಂದು ಶುಭ ಹಾರೈಸಿದರು.
ಹಿರಿಯ ರಂಗಕರ್ಮಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮಾತಾಡಿ, ”ತುಳು ಚಿತ್ರರಂಗಕ್ಕೆ ಈಗ ಪರ್ವಕಾಲ. ಮಂಗಳೂರಿನಲ್ಲಿ ಒಂಬತ್ತು ಸಿನಿಮಾಗಳಿಗೆ ಚಿತ್ರೀಕರಣ ನಡೆಯುತ್ತಿವೆ. ಒಳ್ಳೊಳ್ಳೆ ಸಿನಿಮಾಗಳನ್ನು ಜನರು ಖಂಡಿತ ಸ್ವೀಕರಿಸುತ್ತಾರೆ. ಸಿನಿಮಾ ತಂಡದ ಪ್ರಯತ್ನಕ್ಕೆ ತುಳುವರು ಬೆಂಬಲ ನೀಡಬೇಕು, ಚಿತ್ರತಂಡಕ್ಕೆ ಶುಭವಾಗಲಿ” ಎಂದರು.
ಕುಸೆಲ್ದರಸೆ ನವೀನ್ ಡಿ. ಪಡೀಲ್ ಮಾತನಾಡಿ,”ಸಿನಿಮಾ ಯಶಸ್ಸು ಕಾಣಲಿ. ತುಳುನಾಡಿನಲ್ಲಿ ಸಿನಿಮಾ ಒಳ್ಳೆಯ ಹೆಸರು ಮಾಡಲಿ” ಎಂದರು.
ನಾಯಕ ನಟ ಶೋಧನ್ ಶೆಟ್ಟಿ ಮಾತನಾಡಿ, ”2019ರಲ್ಲಿಯೇ ಸಿನಿಮಾ ಮಾಡಲು ತಯಾರಿ ಮಾಡಿದ್ದೆ. ಆದರೆ ಕಾರಣಾಂತರದಿಂದ ವಿಳಂಬವಾಯಿತು. ಈಗ ಕಾಲ ಕೂಡಿಬಂದಿದೆ. ನಿಮ್ಮೆಲ್ಲರ ಸಹಕಾರದಿಂದ ಸಿನಿಮಾ ಚೆನ್ನಾಗಿ ಮೂಡಿಬರಲಿದೆ. ಭಾಗ 1ರ ಚಿತ್ರೀಕರಣ ಮುಗಿದ ಬಳಿಕ ಟೈಟಲ್ ಲಾಂಚ್ ಮಾಡಲಿದ್ದೇವೆ” ಎಂದರು.
ಶುಭಾ ಶೆಟ್ಟಿ ಪ್ರೊಡಕ್ಷನ್ಸ್ ನಲ್ಲಿ ಧನರಾಜ್ ಶೆಟ್ಟಿ, ಉಮೇಶ್ ಶೆಟ್ಟಿ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಶರತ್ ಪೂಜಾರಿ ಬಗ್ಗತೋಟ ಆಕ್ಷನ್ ಕಟ್ ಹೇಳಲಿದ್ದಾರೆ. ಸಂದೀಪ್ ಉಡುಪಿ ಕೆಮರಾ ಕ್ಯಾಮರಾ ಕೈಚಳಕ ಈ ಚಿತ್ರಕ್ಕಿದೆ. ಪ್ರಸಾದ್ ಕೆ.ಶೆಟ್ಟಿ ಸಂಗೀತ ಸಂಯೋಜನೆ, ರವಿರಾಜ್ ಗಾಣಿಗ ಸಂಕಲನವಿದೆ. ಕಟೀಲು, ಪಡುಬಿದ್ರಿ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್’
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Tulu Movie Review; ಹೇಗಿದೆ ಈ ವಾರ ತೆರೆಗೆ ಬಂದ ತುಳು ಸಿನಿಮಾ ʼದಸ್ಕತ್ʼ
Tulu Cinema: ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.