ರಾಜ್ಯದಲ್ಲಿ ಸೋಂಕು ಸ್ಪೋಟ: 1502 ಪ್ರಕರಣ ; ಬೆಂಗಳೂರಲ್ಲೇ 889 ಸೋಂಕಿತರು!

ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65 ಪಾಸಿಟಿವ್ ಪ್ರಕರಣ ದಾಖಲು

Team Udayavani, Jul 2, 2020, 7:25 PM IST

ರಾಜ್ಯದಲ್ಲಿ ಸೋಂಕು ಸ್ಪೋಟ: 1500 ಪ್ರಕರಣ ; ಬೆಂಗಳೂರಲ್ಲೇ 889 ಸೋಂಕಿತರು!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಅಟ್ಟಹಾಸ ಮಿತಿಮೀರುತ್ತಿದೆ.

ಬೆಂಗಳೂರಿನಲ್ಲಿ ಸೋಂಕು ಸಮುದಾಯ ಮಟ್ಟಕ್ಕೆ ಹಬ್ಬಿರುವ ಸ್ಪಷ್ಟ ಸೂಚನೆ ಲಭಿಸತೊಡಗಿದೆ.

ರಾಜ್ಯದಲ್ಲಿ ಇಂದು ಒಟ್ಟಾರೆ 1502 ಕೋವಿಡ್ 19 ಪಾಸಿಟಿವ್ ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವತ್ತು ಒಂದೇ ದಿನ 19 ಜನ ಸೋಂಕಿತರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕರಾವಳಿಯ ಶಾಸಕರಿಗೂ ವಕ್ಕರಿಸಿದ ಮಾರಕ ಕೋವಿಡ್ ಸೋಂಕು

ರಾಜ್ಯ ರಾಜಧಾನಿಯನ್ನು ಒಳಗೊಂಡಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತೀ ಹೆಚ್ಚಿನ 889 ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿದ್ದು ರಾಜಧಾನಿಯಲ್ಲಿ ಸೋಂಕಿನ ಆರ್ಭಟ ನಿಯಂತ್ರಣಕ್ಕೆ ಸಿಗುತ್ತಿಲ್ಲ.

ಇಂದೂ ಸಹ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರು ನಗರವೇ ಮುಂಚೂಣಿಯಲ್ಲಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಮೈಸೂರು, ಬಳ್ಳಾರಿ, ಧಾರವಾಡ, ವಿಜಯಪುರ, ರಾಮನಗರ, ಕಲಬುರಗಿ, ಬೀದರ್, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ.

ಇಂದು ರಾಜ್ಯಾದ್ಯಂತ 271 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿಂದು ಕೋವಿಡ್ 19 ಸೋಂಕಿಗೆ 19 ಜನ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದಿನವರೆಗೆ 18016 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲುಗೊಂಡಿದೆ. ಮತ್ತು ಇವರಲ್ಲಿ 8334 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೂ 9406 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಒಟ್ಟಾರೆಯಾಗಿ ಇದುವರೆಗೆ 272 ಜನ ಕೋವಿಡ್ 19 ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ. ಹಾಗೂ 4 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 161 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಉಡುಪಿ ಜಿಲ್ಲೆಯಲ್ಲಿ 14 ಮಂದಿಗೆ ಕೋವಿಡ್ ಸೋಂಕು ದೃಢ

ಇಂದೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ 19 ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿ ಇಂದು 889 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ದಕ್ಷಿಣ ಕನ್ನಡ – 90, ಮೈಸೂರು – 68, ಬಳ್ಳಾರಿ – 65, ಧಾರವಾಡ – 47, ವಿಜಯಪುರ – 39, ರಾಮನಗರ – 39, ಕಲಬುರಗಿ – 38, ಬೀದರ್ – 32, ತುಮಕೂರು – 26, ಶಿವಮೊಗ್ಗ – 23, ಮಂಡ್ಯ – 19, ಉತ್ತರಕನ್ನಡ – 17, ಹಾಸನ – 15, ಉಡುಪಿ – 14, ಕೋಲಾರ – 12, ರಾಯಚೂರು – 11 ಮತ್ತು ಬಾಗಲಕೋಟೆ – 10 ಇವಿಷ್ಟು ಜಿಲ್ಲೆಗಳಲ್ಲಿ ಇಂದು ಎರಡಂಕೆಯ ಕೋವಿಡ್ 19 ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ಅತೀ ಹೆಚ್ಚಿನ ಕೋವಿಡ್ ಸೋಂಕಿತರೂ ಸಹ ಬೆಂಗಳೂರು ನಗರ ಜಿಲ್ಲೆಯಲ್ಲಿದ್ದಾರೆ. ಇಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 6179ಕ್ಕೆ ಏರಿಕೆಯಾಗಿದ್ದು, 573 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಹಾಗೂ 5050 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಕೋವಿಡ್ ಸಂಬಂಧಿತ 100 ಸಾವುಗಳು ಸಂಭವಿಸಿದೆ.

ಇನ್ನುಳಿದಂತೆ ಕಲಬುರಗಿಯಲ್ಲಿ ಒಟ್ಟು 1488 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 1126 ಪ್ರಕರಣಗಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 343 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ 19 ಜನರು ಈ ಸೋಂಕಿಗೆ ಮೃತಪಟ್ಟಿದ್ದಾರೆ.

ಇನ್ನು ಉಡುಪಿ ಜಿಲ್ಲೆಯಲ್ಲಿ 1242 ಕೋವಿಡ್ 19 ಸೋಂಕಿನ ಪ್ರಕರಣಗಳು ದಾಖಲಾಗಿದ್ದು 1058 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಹಾಗೂ ಜಿಲ್ಲೆಯಲ್ಲಿ 160 ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಸೋಂಕು ಸಂಬಂಧಿ 3 ಸಾವುಗಳು ಸಂಭವಿಸಿವೆ.

ಇದನ್ನೂ ಓದಿ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 90 ಮಂದಿಗೆ ಕೋವಿಡ್ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 915 ಕೋವಿಡ್ 19 ಸೋಂಕು ಪ್ರಕರಣಗಳು ದಾಖಲಾಗಿದ್ದು ಇವರಲ್ಲಿ 436 ಸೋಂಕಿತರು ಗುಣಮುಖರಾಗಿದ್ದಾರೆ. 461 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಹಾಗೂ ಇಲ್ಲಿ ಕೋವಿಡ್ ಸಂಬಂಧಿತ 16 ಸಾವು ಸಂಭವಿಸಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 984 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 467 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 484 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 33 ಸಾವು ಸಂಭವಿಸಿದೆ.

ಯಾದಗಿರಿ ಜಿಲ್ಲೆಯಲ್ಲಿ 956 ಕೋವಿಡ್ ಸೋಂಕಿನ ಪ್ರಕರಣಗಳು ದಾಖಲಾಗಿದ್ದು 838 ಜನ ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು 117 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ. ಇಲ್ಲಿ ಕೋವಿಡ್ 19 ಸಂಬಂಧಿತ 1 ಸಾವು ಸಂಭವಿಸಿದೆ.

ಇಂದು ರಾಜ್ಯದಲ್ಲಿ ಒಟ್ಟು 16210 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು ಇವುಗಳಲ್ಲಿ 14470 ವರದಿಗಳು ನೆಗೆಟಿವ್ ಬಂದಿದೆ ಮತ್ತು 1502 ಪ್ರಕರಣಗಳು ಪಾಸಿಟಿವ್ ಆಗಿವೆ. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 653627 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಇವುಗಳಲ್ಲಿ 619292 ಮಾದರಿಗಳ ವರದಿ ನೆಗೆಟಿವ್ ಬಂದಿದೆ ಹಾಗೂ 18016 ವರದಿಗಳು ಪಾಸಿಟಿವ್ ಆಗಿವೆ.

ಟಾಪ್ ನ್ಯೂಸ್

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.